ಉತ್ತರ ಪ್ರದೇಶ | ಹೋಳಿ ಹಬ್ಬದ ಶುಭ ಕೋರಿದ್ದಕ್ಕೆ ದಲಿತ ಯುವಕನನ್ನು ಕೊಂದ ಜಾತಿಗ್ರಸ್ಥರು

Date:

ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ್ದಕ್ಕಾಗಿ ದಲಿತ ಯುವಕನನ್ನು ಬ್ರಾಹ್ಮಣ ಕುಟುಂಬವೊಂದು ಇರಿದು ಕೊಂದಿರುವ ಘಟನೆ ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ ನಡೆದಿದೆ. ಮಾರ್ಚ್‌ 4ರಂದು ಘಟನೆ ನಡೆದಿದೆ ಎಂದು ವರದಿಯಾಗಿದೆ.

ದುಬಗ್ಗಾ ಪ್ರದೇಶದ ಬೆಗಾರಿಯಾ ಗ್ರಾಮದ ಸೂರಜ್ ಗೌತಮ್ ಜಾತಿಗ್ರಸ್ಥರ ಕ್ರೌರ್ಯಕ್ಕೆ ಬಲಿಯಾದ ದಲಿತ ಯುವಕ ಎಂದು ಗುರುತಿಸಲಾಗಿದೆ. ಸೂರಜ್ ತನ್ನ ನೆರೆಮನೆಯ ನಿವಾಸಿ ಮನೋರ್ ತಿವಾರಿಗೆ ‘ಹೋಳಿ ಹಬ್ಬದ ಶುಭಾಶಯಗಳು’ ಎಂದು ಹಾರೈಸಿದ್ದರೆಂದು ವರದಿಯಾಗಿದೆ.

ಸ್ಥಳೀಯರ ಮಾಹಿತಿಯ ಪ್ರಕಾರ, ಸೂರಜ್ ತನಗೆ ಶುಭಾಶಯ ತಿಳಿಸಿದ್ದಕ್ಕಾಗಿ ತಿವಾರಿ ಕೋಪಗೊಂಡರು. ಸೂರಜ್ ಜೊತೆ ಜಗಳಕ್ಕಿಳಿದರು.ಈ ವೇಳೆ, ತಿವಾರಿ ಅವರ ಸಹೋದರಿ ಶಿವಾನಿ ಮತ್ತು ತಾಯಿ ರಂಜನಾ ಕೂಡ ಗೌತಮ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೈಟ್‌ಗೌನ್ ಧರಿಸಿದ್ದ ಶಿವಾನಿ, ಚಾಕು ಹೊರತೆಗೆದು ಗೌತಮ್‌ಗೆ ಮೂರು ಬಾರಿ ಇರಿದಿದ್ದಾರೆ. ಯುವಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಗಮಭೀರ ಗಾಯಗಳಿಂದ ಆತ ಸಾವನ್ನಪ್ಪಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ʼಕಾಂಕ್ರೀಟ್‌ʼ ಮಾಡುವ ಗಾಯಕ್ಕೆ ಜಪಾನಿ ʼಮಿಯಾವಾಕಿʼಯೇ ಮದ್ದು!

ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ; ಗೌತಮ್ ಅವರ ಕುಟುಂಬವು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದೆ. ‘ಹ್ಯಾಪಿ ಹೋಳಿ’ ಎಂದು ಯಾರನ್ನಾದರೂ ಸ್ವಾಗತಿಸುವುದು ಕಾರಣಕ್ಕೆ ಕೊಲೆ ಮಾಡಬಹುದೇ? ಯಾವ ಪುಸ್ತಕವು ಅಂತಹ ಹಿಂಸಾಚಾರವನ್ನು ಸಮರ್ಥಿಸುತ್ತದೆ. ದಲಿತ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಈ ದಾಳಿ ನಡೆದಿದೆ ಎಂದು ಗೌತಮ್ ತಾಯಿ ಆರೋಪಿಸಿದ್ದಾರೆ.

ಮಾಹಿತಿ ಪಡೆದು ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ತಿವಾರಿ, ಶಿವಾನಿ ಹಾಗೂ ರಂಜನಾ ಅವರನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...