ಉತ್ತರ ಪ್ರದೇಶ | ಸಂಭಾಲ್‌ನ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಘ್ನ

Date:

ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗಾಗಿ ಭಾನುವಾರ ಬೆಳಗ್ಗೆ ಅಧಿಕಾರಿಗಳು ತೆರಳಿದ್ದ ವೇಳೆ, ಕಲ್ಲು ತೂರಾಟ ನಡೆದಿದೆ. ಪರಿಣಾಮ, ಸಂಭಾಲ್‌ನಲ್ಲಿ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಹೆಚ್ಚಿನ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ.

ಶಾಹಿ ಜಾಮಾ ಮಸೀದಿಯ ಜಾಗವು ಕೇಲಾ ದೇವಿ ದೇವಸ್ಥಾನಕ್ಕೆ ಸೇರಿದ್ದಾಗಿದೆ. ಶಾಹಿ ಜಾಮಾ ಮಸೀದಿಯು ಮೂಲತಃ ಹರಿಹರ ದೇವಸ್ಥಾನವಾಗಿತ್ತು. 1529ರಲ್ಲಿ ಬಾಬರ್ ಆಳ್ವಿಕೆಯಲ್ಲಿ ದೇವಸ್ಥಾನವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂದು ದೇವಸ್ಥಾನ ಸಮಿತಿ ಸದಸ್ಯರು ಆರೋಪಿಸಿದ್ದಾರೆ. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ಚಂದೌಸಿಯ ಸಿವಿಲ್ ಹಿರಿಯ ವಿಭಾಗ ನ್ಯಾಯಾಲಯವು ಮಸೀದಿ ಅವರಣದಲ್ಲಿ ಸಮೀಕ್ಷೆ ನಡೆಸಲು ನವೆಂಬರ್ 19ರಂದು ಆದೇಶಿಸಿತ್ತು.

ಕೋರ್ಟ್‌ ಆದೇಶದ ಬಳಿಕ, ನವೆಂಬರ್ 24ರಂದು ಸಂಭಾಲ್ ಜಿಲ್ಲಾಧಿಕಾರಿ ರಾಜೇಂದ್ರ ಪನ್ಸಿಯಾ, ಪೊಲೀಸ್‌ ವರಿಷ್ಠಾಧಿಕಾರಿ ಕೃಷ್ಣ ಬಿಷ್ಣೋಯ್ ಮೇಲ್ವಿಚಾರಣೆಯಲ್ಲಿ ಸಮೀಕ್ಷಾ ತಂಡವು ಸಂಭಾಲ್ ಮಸೀದಿಗೆ ತೆರಳಿತ್ತು. ಆದರೆ, ಈ ವೇಳೆ ಕಲ್ಲು ತೂರಾಟ ನಡೆದಿದೆ. ಸಂಘರ್ಷದ ಛಾಯೆ ಆವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮೀಕ್ಷೆ ಪ್ರಾರಂಭವಾದ ಸುಮಾರು ಎರಡು ಗಂಟೆಗಳ ನಂತರ, ಪ್ರತಿಭಟನಾಕಾರರ ಗುಂಪು ಮಸೀದಿಯ ಬಳಿ ಜಮಾಯಿಸಿದೆ. ಭದ್ರತಾ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸಿದೆ. ಘರ್ಷಣೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಮತ್ತು ಇಬ್ಬರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಲು ತೂರಾಟ ನಡೆಸಿದ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಜನಸಮೂಹಗಳ ನಡುವೆ ಕೆಲವರು ಗುಂಡು ಹಾರಿಸಿದ್ದಾರೆ. ಪೊಲೀಸ್‌ ಪಡೆಗಳ ಮೇಲೆ ಕಲ್ಲು ತೂರಿದ್ದಾರೆ. ನಮ್ಮ ವಾಹನಗಳಿಗೆ ದುಷ್ಕರ್ಮಿಗಳ ಗುಂಪು ಬೆಂಕಿ ಹಚ್ಚಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದ್ಧೇವೆ. ನೆರೆಯ ಜಿಲ್ಲೆಗಳಿಂದಲೂ ಪೊಲೀಸ್‌ ಪಡೆಗಳನ್ನು ಕರೆಸಿಕೊಂಡಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...