ಉತ್ತರ ಪ್ರದೇಶ | ವಿದ್ಯುತ್‌ ಸಮಸ್ಯೆ; ಮೊಬೈಲ್ ಬೆಳಕಲ್ಲಿ 4 ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ ವೈದ್ಯರು

Date:

ಉತ್ತರ ಪ್ರದೇಶದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ವಿದ್ಯುತ್‌ ಸಮಸ್ಯೆಯಾಗಿದ್ದು, ನಾಲ್ವರು ಗರ್ಭಿಣಿಯರಿಗೆ ಫೋನ್‌ ಬೆಳಕಿನಲ್ಲಿಯೇ ವೈದ್ಯರು ಹೆರಿಗೆ ಮಾಡಿಸಿದ್ದಾರೆ. ಈ ಘಟನೆ ಬಲ್ಲಿಯಾ ಜಿಲ್ಲೆಯ ಬೆರೂರ್ಬರಿಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿನ ವಿದ್ಯುತ್ ಸಮಸ್ಯೆಯ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ.

ಬೆರೂರ್ಬರಿ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಸೋಮವಾರ ರಾತ್ರಿ ಹೆರಿಗೆಗಾಗಿ ನಾಲ್ವರು ಮಹಿಳೆಯರು ದಾಖಲಾಗಿದ್ದರು. ಹೆರಿಗೆ ವೇಳೆ ವಿದ್ಯುತ್ ವ್ಯತ್ಯಯವಾಗಿದ್ದ ಕಾರಣ, ಅವರಿಗೆ ಮೊಬೈಲ್ ಟಾರ್ಚ್‌ ಬೆಳಕಿನಲ್ಲಿಯೇ ಹೆರಿಗೆ ಮಾಡಿಸಲಾಗಿದೆ ಎಂದು ವರದಿಯಾಗಿದೆ.

ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯ ವೈದ್ಯಾಧಿಕಾರಿ ಡಾ. ಸಂಜೀವ್ ಬರ್ಮನ್, “ವಿದ್ಯುತ್ ವ್ಯತ್ಯಯ ಆರೋಪದ ಬಗ್ಗೆ ತನಿಖೆ ನಡೆಸಲು ಉಪ ಮುಖ್ಯ ವೈದ್ಯಾಧಿಕಾರಿ ನೇತೃತ್ವದಲ್ಲಿ ಮೂವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆರೂರ್ಬರಿ ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್‌ಸಿ) ಟ್ರಾನ್ಸ್‌ಫಾರ್ಮರ್ ಮೂರು ದಿನಗಳ ಹಿಂದೆ ಸುಟ್ಟುಹೋಗಿತ್ತು. ಹೀಗಾಗಿ, ವಿದ್ಯುತ್ ಸಮಸ್ಯೆ ಕಾಣಿಸಿಕೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಆರೋಗ್ಯ ಕೇಂದ್ರದಲ್ಲಿ ಜನರೇಟರ್ ಮತ್ತು ಡೀಸೆಲ್ ಲಭ್ಯವಿದ್ದರೂ ಸಹ ಇಂತಹ ಘಟನೆ ಸಂಭವಿಸಿದೆ. ತನಿಖೆಗೆ ಆದೇಶಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ತನಿಖಾ ವರದಿ ಬಂದ ನಂತರ, ತಪ್ಪಿತಸ್ಥರನ್ನು ಗುರುತಿಸಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಬರ್ಮನ್ ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...