ವಕೀಲರ ಅಪಹರಣ; ವಾಹನ ಹತ್ತಿಸಿ ಹತ್ಯೆ

Date:

ಅತ್ಯಾಚಾರಗಳ ರಾಜಧಾನಿ, ಕೊಲೆ-ಸುಲಿಗೆಗಳ ತಾಣವೆಂದೇ ಕುಖ್ಯಾತಿ ಪಡೆದಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದೆ. ವಕೀಲರೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿ, ಅವರ ಮೇಲೆ ವಾಹನ ಹತ್ತಿಸಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ.

ಬಸ್ತಿ ಜಿಲ್ಲೆಯ ಬೈಡೋಲಿಯಾ ಅಜೈಬ್ ಪ್ರದೇಶದ ನಿವಾಸಿ, ವಕೀಲ ಚಂದ್ರಶೇಖರ್ ಯಾದವ್ ಅವರನ್ನು ದುಷ್ಕರ್ಮಿಗಳ ಗುಂಪು ಅಪಹರಿಸಿ, ಬರ್ಬರವಾಗಿ ಹತ್ಯೆಗೈದಿದೆ.

ಯಾದವ್ ಅವರು ಕಪ್ತಂಗಂಜ್‌ನಿಂದ ತಮ್ಮೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಸ್ಕಾರ್ಪಿಯೋದಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಅಪಹರಿಸಿದ್ದಾರೆ. ಅವರ ಮೇಲೆ ಅಮಾನುಷವಾಗಿ ಹಲ್ಲೆಗೈದು, ವಾಹನ ಹತ್ತಿಸಿ ಕೊಲೆ ಮಾಡಿದ್ದಾರೆ. ವಾಲ್ಟರ್‌ಗಂಜ್‌ನ ರಸ್ತೆಯಲ್ಲಿ ಮೃಹದೇಹವನ್ನು ಎಸೆದು ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಕೀಲ ಯಾದವ್ ಅವರ ಸಹೋದರಿ ತನ್ನ ಪತಿಯಿಂದ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸಹೋದರಿಯ ಪರವಾಗಿ ಯಾದವ್ ಅವರೇ ವಾದಿಸುತ್ತಿದ್ದರು ಎಂದು ತಿಳಿದುಬಂದಿದೆ. ಆ ಕಾರಣಕ್ಕಾಗಿ, ಯಾದವ್ ಅವರ ಸಹೋದರಿಯ ಪತಿ ರಂಜಿತ್ ಯಾದವ್ ಅವರೇ ಚಂದ್ರಶೇಖರ್ ಯಾದವ್ ಅವರನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ರಂಜಿತ್‌ನನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳ ಬಂಧನಕ್ಕಾಗಿ ಪೊಲೀಸರ ತಂಡ ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ 2023ರಲ್ಲಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿಯೇ ವಕೀಲರೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...