ಉತ್ತರ ಪ್ರದೇಶ | ಬುರ್ಖಾ ಧರಿಸಿಲ್ಲವೆಂದು ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಕೊಂದ ದುರುಳ

Date:

ಬುರ್ಖಾ ಧರಿಸದ ಕಾರಣಕ್ಕೆ ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಅವರ ಮೃತದೇಹವನ್ನು ಮನೆಯೊಳಗೆ ಗುಂಡಿ ಅಗೆದು ಹೂತುಹಾಕಿದ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ.

ಫಾರೂಕ್ ಎಂಬಾತ ಆರೋಪಿ. ಆತನ ಪತ್ನಿ ತಾಹಿರಾ (35) ಮತ್ತು ಅವರ ಇಬ್ಬರು ಹೆಣ್ಣುಮಕ್ಕಳಾದ ಶರೀನ್ (14) ಮತ್ತು ಅಫ್ರೀನ್ (6) ಒಂದು ವಾರದಿಂದ ನಾಪತ್ತೆಯಾಗಿದ್ದರು. ಮಂಗಳವಾರ ಗ್ರಾಮದ ಮುಖ್ಯಸ್ಥರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.

ಇದನ್ನು ಓದಿದ್ದೀರಾ? ತಮಿಳುನಾಡು | ಬುರ್ಖಾ ಧರಿಸಿದ್ದ ಮಹಿಳೆಗೆ ಬಸ್ ಪ್ರವೇಶ ನಿರಾಕರಣೆ; ನಿರ್ವಾಹಕರ ಪರವಾನಗಿ ರದ್ದು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮದ ಮುಖ್ಯಸ್ಥರ ದೂರಿನಂತೆ ತನಿಖೆ ಆರಂಭಿಸಿದ ಪೊಲೀಸರಿಗೆ ಫಾರೂಕ್ ಮೇಲೆ ಅನುಮಾನ ಬಂದು ವಶಕ್ಕೆ ಪಡೆದಿದ್ದರು. ವಿಚಾರಣೆಯ ಸಮಯದಲ್ಲಿ ಫಾರೂಕ್ ಅಪರಾಧವನ್ನು ಒಪ್ಪಿಕೊಂಡು, ಶವಗಳನ್ನು ಮನೆಯಲ್ಲಿಯೇ ಹೂತಿರುವುದಾಗಿ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಎನ್.ಪಿ. ಸಿಂಗ್ ಸೇರಿದಂತೆ ಪೊಲೀಸರ ತಂಡ ಫಾರೂಕ್ ಮನೆಗೆ ತೆರಳಿ ಮೂವರ ಮೃತದೇಹಗಳನ್ನು ಗುಂಡಿಯಿಂದ ಹೊರತೆಗೆದಿದೆ. ತಾಹಿರಾ ತನ್ನ ಗಂಡ ಫಾರೂಕ್ ಬಳಿ ಹಣ ಕೇಳಿದ್ದು, ಈ ವಿಚಾರದಲ್ಲಿ ಜಗಳವಾಗಿತ್ತು. ಕೋಪಗೊಂಡ ತಾಹಿರಾ ಬುರ್ಖಾ ಹಾಕದೆ ತನ್ನ ಹೆತ್ತವರ ಮನೆಗೆ ತೆರಳಿದ್ದರು. ಇದರಿಂದಾಗಿ ತನ್ನ ಗೌರವಕ್ಕೆ ಧಕ್ಕೆಯಾಗಿದೆ ಎಂದುಕೊಂಡ ಫಾರೂಕ್, ಒಂದು ತಿಂಗಳ ನಂತರ ಪತ್ನಿಯನ್ನು ವಾಪಸ್ ಮನೆ ಕರೆತಂದು ಆಕೆ ಮತ್ತು ಇಬ್ಬರು ಮಕ್ಕಳನ್ನೂ ಕೊಂದಿದ್ದಾನೆ. ನಂತರ ಮನೆಯಲ್ಲಿ ಗುಂಡು ತೋಡಿ ಶವಗಳನ್ನು ಹೂತುಹಾಕಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಫಾರೂಕ್‌ನನ್ನು ವಶಕ್ಕೆ ಪಡೆಯಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪೊಲೀಸರು ಆರೋಪಿಯಿಂದ ಕೊಲೆಗೆ ಬಳಸಲಾದ ಪಿಸ್ತೂಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಪ್ರಕರಣವು ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದ್ದು ಎಂದು ತಿಳಿದುಬಂದಿದ್ದು ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫಾರೂಕ್ ಮಾನಸಿಕವಾಗಿ ಸ್ಥಿರವಾಗಿಲ್ಲ ಎಂಬ ಆರೋಪವನ್ನು ಸ್ಥಳೀಯರು ಮಾಡಿದ್ದಾರೆ. ಹಾಗೆಯೇ ಫಾರೂಕ್ ಅತ್ಯಂತ ಕಠೋರವಾಗಿ ನಡೆದುಕೊಳ್ಳುತ್ತಿದ್ದ ಎಂದು ತಾಹಿರಾ ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸರು ಇದು ಮರ್ಯಾದಾ ಹತ್ಯೆ ಎಂದು ಹೇಳಿದ್ದಾರೆ. ಈ ನಡುವೆ ಈ ಘಟನೆಯು ಮಹಿಳೆಯರ ಆಯ್ಕೆಗಳ ಮೇಲಿನ ತೀವ್ರ ನಿಯಂತ್ರಣ ಮತ್ತು ಸ್ವಂತ ಮನೆಗಳಲ್ಲಿ ಮಕ್ಕಳಿಗೆ ಸುರಕ್ಷತೆಯ ಕೊರತೆಯ ಬಗ್ಗೆ ವ್ಯಾಪಕ ಚರ್ಚೆಗಳನ್ನು ಹುಟ್ಟುಹಾಕಿದೆ. ಬುರ್ಖಾ ಧರಿಸುವುದು ಅಥವಾ ಧರಿಸದೆ ಇರುವುದು ಮಹಿಳೆಯ ಆಯ್ಕೆಯಾಗಬೇಕೇ ಹೊರತು ಅದು ಹೇರಿಕೆಯಾಗಬಾರದು ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...