ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಅಭಿಯಾನವನ್ನು ಚುನಾವಣಾ ಆಯೋಗ ಆರಂಭಿಸಿದೆ. ಮಂಗಳವಾರ, ಬೂತ್ ಮಟ್ಟದ ಅಧಿಕಾರಿಗಳು (BLOಗಳು) ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ.
ಪರಿಷ್ಕರಣೆಯ ಬಳಿಕ, ಅಂತಿಮ ಮತದಾರರ ಪಟ್ಟಿಯು 2026ರ ಫೆಬ್ರವರಿಯಲ್ಲಿ ಬಿಡುಗಡೆಯಾಗಲಿದೆ ಎಂದು ಆಯೋಗ ಹೇಳಿದೆ. ಪರಿಷ್ಕರಣೆಯು 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಮೇಲೆ ನಿರ್ಣಾಯಕ ಪರಿಣಾಮ ಬೀರಲಿದೆ ಎಂದು ಹೇಳಲಾಗಿದೆ.
ಉತ್ತರ ಪ್ರದೇಶದಲ್ಲಿ 15.44 ಕೋಟಿಗೂ ಹೆಚ್ಚು ಮತದಾರರಿದ್ದು, ರಾಜ್ಯಾದ್ಯಂತ 1.62 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳಿವೆ. ಎಲ್ಲ ಬೂತ್‌ಗಳಲ್ಲಿಯೂ ಎಸ್‌ಐಆರ್ ಪ್ರಕ್ರಿಯೆ ಮಂಗಳವಾರದಿಂದ ಆರಂಭವಾಗಿದೆ ಎಂದು ಆಯೋಗ ಹೇಳಿದೆ.
ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಬಿಜೆಪಿ 1 ಕೋಟಿ ಉದ್ಯೋಗದ ಭರವಸೆ; 20 ವರ್ಷದಲ್ಲಿ ಆಗದ್ದು ಈಗ ಸಾಧ್ಯವೇ?
ಬಿಎಲ್‌ಒಗಳ ವರದಿ ಆಧರಿಸಿ 2025ರ ಡಿಸೆಂಬರ್ 9ರಂದು ಕರಡು ಮತಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಮತದಾರರು ಮತ್ತು ರಾಜಕೀಯ ಪಕ್ಷಗಳು ಡಿಸೆಂಬರ್ 9 ರಿಂದ ಜನವರಿ 8, 2026 ರವರೆಗೆ ಪರಿಶೀಲನೆಗೆ ಅರ್ಜಿ ಸಲ್ಲಿಸಬಹುದು. ಆ ನಂತರ, ಅರ್ಜಿಗಳನ್ನು ಡಿಸೆಂಬರ್ 9 ರಿಂದ 2026ರ ಜನವರಿ 31 2026 ರವರೆಗೆ ಪರಿಶೀಲಿಸಲಾಗುತ್ತದೆ. ಫೆಬ್ರವರಿಯಲ್ಲಿ ಅಂತಿಮ ಪಟ್ಟಿ ಬಿಡುಗಡೆಯಾಗುತ್ತದೆ ಎಂದು ಆಯೋಗ ಹೇಳಿದೆ.




