ಉತ್ತರ ಪ್ರದೇಶ | ಎಸ್‌ಪಿ ನಾಯಕನ ಕೊಲೆ ಪ್ರಕರಣ; ಬಿಜೆಪಿ ಕೌನ್ಸಿಲರ್ ಬಂಧನ

Date:

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಜೆಪಿ ಕೌನ್ಸಿಲರ್ ಅನ್ನು ಬಂಧಿಸಲಾಗಿದೆ ಎಂದು ಬುಧವಾರ ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಜೈಸ್ವಾಲ್ ತಿಳಿಸಿದ್ದಾರೆ.

ಪರ್ಸಾಪುರ ಪಟ್ಟಣದ ಮೊಹಲ್ಲಾ ರಾಜ ತೋಲಾ ನಿವಾಸಿ ಎಸ್‌ಪಿ ನಾಯಕ ಓಂ ಪ್ರಕಾಶ್ ಸಿಂಗ್ (45) ಶುಕ್ರವಾರ ಹಾಡಹಗಲೇ ಹತ್ಯೆಗೀಡಾಗಿದ್ದಾರೆ. ಸಂತ್ರಸ್ತೆಯ ಪತ್ನಿ ನೀಡಿದ ದೂರಿನ ಮೇರೆಗೆ ಬಿಜೆಪಿ ಕೌನ್ಸಿಲರ್ ಉದಯಭನ್ ಸಿಂಗ್ ಅಲಿಯಾಸ್ ಲಲ್ಲನ್ ಸಿಂಗ್ ಮತ್ತು ಅವರ ಮೂವರು ಪುತ್ರರು ಸೇರಿದಂತೆ ಐವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ವಿನೀತ್ ಜೈಸ್ವಾಲ್ ಹೇಳಿದ್ದಾರೆ.

ಪ್ರಕರಣದಲ್ಲಿ ಇಬ್ಬರು ಆರೋಪಿಗಳಾದ ಚಂದನ್ ಸಿಂಗ್ ಮತ್ತು ರೋಹಿತ್ ಅನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಆದರೆ ಪ್ರಮುಖ ಆರೋಪಿ ಉದಯಭನ್ ಸಿಂಗ್ ತಲೆಮರೆಸಿಕೊಂಡಿದ್ದನು. ಆತನ ಬಗ್ಗೆ ಸುಳಿವು ನೀಡಿದವರಿಗೆ 25,000 ರೂಪಾಯಿ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ ರಾತ್ರಿ, ಕರ್ನಲ್‌ಗಂಜ್-ಬೆಲ್ಸರ್-ನವಾಬ್‌ಗಂಜ್ ರಸ್ತೆಯಲ್ಲಿ ಭದ್ರತಾ ಸಿಬ್ಬಂದಿಯ ಮೇಲೆ ಉದಯಭನ್ ಗುಂಡು ಹಾರಿಸಿದ್ದು ಪೊಲೀಸ್ ತಂಡವು ಆತನನ್ನು ಸುತ್ತುವರೆದಿದೆ. ಪೊಲೀಸರು ಕೂಡಾ ಗುಂಡಿನ ದಾಳಿ ನಡೆಸಿದ್ದು ಉದಯಭನ್‌ಗೆ ಗಾಯವಾಗಿದೆ. ಆತನನ್ನು ಸ್ಥಳದಲ್ಲೇ ಬಂಧಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜೈಸ್ವಾಲ್ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ?  ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಎನ್‌ಕೌಂಟರ್‌ಗೆ ಬಲಿ

ಉದಯಭನ್ ಸಿಂಗ್ ಬಳಿಯಿದ್ದ ಮೋಟಾರ್ ಸೈಕಲ್, ಪಿಸ್ತೂಲ್ ಮತ್ತು ಖಾಲಿ ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇನ್ನು ಆರೋಪಿಗೆ ಸ್ಥಳೀಯ ಪೊಲೀಸರು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿ ಮೃತ ಎಸ್‌ಪಿ ನಾಯಕನ ಕುಟುಂಬಸ್ಥರು ದೂರಿದ್ದರು. ಹಾಗೆಯೇ ಆರೋಪಿಗಳನ್ನು ಬಂಧಿಸುವವರೆಗೂ ಶವ ಅಂತ್ಯಸಂಸ್ಕಾರ ಮಾಡಲು ನಿರಾಕರಿಸಿ ಶವವನ್ನು ರಸ್ತೆಯಲ್ಲೇ ಇಟ್ಟು ಧರಣಿ ನಡೆಸಿದರು.

ಈ ವೇಳೆಯೆ ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಸೂಚನೆ ಮೇರೆಗೆ ಎಸ್‌ಪಿ ನಿಯೋಗ ಮೃತರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಎಸ್‌ಪಿ ವತಿಯಿಂದ 5 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಿದೆ. ಕುಟುಂಬ ಸದಸ್ಯರಿಗೆ ನ್ಯಾಯ ದೊರಕಿಸಿಕೊಡಲು ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ನಿಯೋಗ ಭರವಸೆ ನೀಡಿದೆ.

ನಿಯೋಗದೊಂದಿಗೆ ಸಭೆ ನಡೆಸಿದ ಮೃತ ಎಸ್‌ಪಿ ನಾಯಕ ಓಂ ಪ್ರಕಾಶ್ ಸಿಂಗ್ ಮಗಳು ಸ್ಥಳೀಯ ಪೊಲೀಸರು ನಡೆಸಿದ ತನಿಖೆಯನ್ನು ಪ್ರಶ್ನಿಸಿದರು. ಈ ಪ್ರಕರಣದ ಸಿಬಿಐ ತನಿಖೆಗೆ ಒತ್ತಾಯಿಸಿದರು. ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು, ಜೊತೆಗೆ ರಾಜ್ಯ ಸರ್ಕಾರವು ಆರ್ಥಿಕ ಸಹಾಯ ನೀಡಬೇಕು ಎಂದು ಕುಟುಂಬ ಒತ್ತಾಯಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...