ಉತ್ತರ ಪ್ರದೇಶ | ಕೆಲಸದ ಅವಧಿಯಲ್ಲಿ ಕ್ಯಾಂಡಿ ಕ್ರಷ್ ಆಡಿದ ಶಿಕ್ಷಕ ಅಮಾನತು!

Date:

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರನ್ನು ಕೆಲಸದ ಅವಧಿಯಲ್ಲಿ ಫೋನ್‌ನಲ್ಲಿ ಕ್ಯಾಂಡಿ ಕ್ರಷ್ ಆಡುತ್ತಿದ್ದ ಮತ್ತು ಕರೆಯಲ್ಲಿ ಮಾತನಾಡುತ್ತಿದ್ದ ಕಾರಣದಿಂದಾಗಿ ಅಮಾನತುಗೊಳಿಸಲಾಗಿದೆ.

ಜಿಲ್ಲಾಧಿಕಾರಿ ರಾಜೇಂದ್ರ ಪನ್ಸಿಯಾ ಅವರು ಪರಿಶೀಲನೆಗಾಗಿ ಶಾಲೆಗೆ ಭೇಟಿ ನೀಡಿದಾಗ ವಿದ್ಯಾರ್ಥಿಗಳ ಕಾಪಿ ಪುಸ್ತಕಗಳಲ್ಲಿ ಮೊದಲ ಪುಟದಿಂದ ಹಿಡಿದು ಕೊನೆಯ ಪುಟದವರೆಗೂ ಹಲವಾರು ತಪ್ಪುಗಳು ಕಂಡು ಬಂದಿದೆ. ಇದಾದ ಬಳಿಕ ಘಟನೆಯು ಬೆಳಕಿಗೆ ಬಂದಿದೆ.

ನಂತರ ಶಿಕ್ಷಕನ ಫೋನ್‌ನಲ್ಲಿ ನಿರ್ದಿಷ್ಟ ಅಪ್ಲಿಕೇಷನ್ ಬಳಕೆಯ ಅವಧಿಯನ್ನು ಪರಿಶೀಲಿಸಲಾಗಿದ್ದು, ಈ ವೇಳೆ ಶಿಕ್ಷಕ ಶಾಲಾ ಅವಧಿಯಲ್ಲಿ ಸುಮಾರು ಎರಡು ಗಂಟೆಗೂ ಅಧಿಕ ಕಾಲ ಕ್ಯಾಂಡಿ ಕ್ರಷ್ ಆಟ ಆಡಿರುವುದು ಬಹಿರಂಗವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಕ್ಷಕರು ವಿದ್ಯಾರ್ಥಿಗಳ ಹೋಮ್‌ವರ್ಕ್‌ಗಳನ್ನು ಪರಿಶೀಲಿಸುವತ್ತ ಗಮನಹರಿಸಬೇಕು. ಮಕ್ಕಳು ಗುಣಮಟ್ಟದ ಶಿಕ್ಷಣವನ್ನು ಪಡೆಯುವುದನ್ನು ಖಾತ್ರಿಪಡಿಸಿಕೊಳ್ಳಬೇಕು” ಎಂದು ರಾಜೇಂದ್ರ ಪನ್ಸಿಯಾ ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?   ಗುಜರಾತ್ | ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಭಾರೀ ಬೆಂಕಿ ಅವಘಡ; 20 ಮಂದಿ ಮೃತ್ಯು

“ಮೊಬೈಲ್ ಫೋನ್‌ಗಳನ್ನು ಬಳಸುವುದು ಸಮಸ್ಯೆಯಲ್ಲ. ಆದರೆ ಶಾಲಾ ಸಮಯದಲ್ಲಿ ವೈಯಕ್ತಿಕ ಕಾರಣಗಳಿಗಾಗಿ ಅವುಗಳನ್ನು ಬಳಸುವುದು ಸರಿಯಲ್ಲ” ಎಂದೂ ಕೂಡಾ ರಾಜೇಂದ್ರ ಪನ್ಸಿಯಾ ಹೇಳಿದ್ದಾರೆ.

ಜಿಲ್ಲಾಧಿಕಾರಿ ರಾಜೇಂದ್ರ ಪನ್ಸಿಯಾ ಅವರು ಆರು ವಿದ್ಯಾರ್ಥಿಗಳ ಕಾಪಿ ಪುಸ್ತಕವನ್ನು ಪರಿಶೀಲಿಸಿದ್ದಾರೆ. ಇದರಲ್ಲಿ 95 ತಪ್ಪುಗಳು ಕಂಡುಬಂದಿದೆ. ಅದರಲ್ಲಿಯೂ ಒಂಬತ್ತು ತಪ್ಪುಗಳು ಮೊದಲ ಪುಟದಲ್ಲಿಯೇ ಕಂಡುಬಂದಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಸಹಾಯಕ ಶಿಕ್ಷಕ ಪ್ರಿಯಾಂ ಗೋಯಲ್ ಅವರ ಫೋನ್ ಪರಿಶೀಲಿಸಿದರು.

ಈ ವೇಳೆ ಶಿಕ್ಷಕ ಪ್ರತಿದಿನ ಸರಾಸರಿ ಒಂದೂವರೆ ಗಂಟೆ ಕಾಲ ಕ್ಯಾಂಡಿ ಕ್ರಷ್ ಅನ್ನು ಆಡಿರುವುದು ಬಹಿರಂಗವಾಗಿದೆ. ಶಾಲೆಯ ಐದೂವರೆ ಗಂಟೆಗಳಲ್ಲಿ, ಪ್ರಿಯಮ್ ಗೋಯಲ್ ಕ್ಯಾಂಡಿ ಕ್ರಷ್‌ನಲ್ಲಿ ಸುಮಾರು ಎರಡು ಗಂಟೆಗಳ ಕಾಲ ಕಳೆದಿದ್ದು, 26 ನಿಮಿಷಗಳ ಕಾಲ ಫೋನ್‌ನಲ್ಲಿ ಮಾತನಾಡಿದ್ದು, ಸುಮಾರು 30 ನಿಮಿಷಗಳ ಕಾಲ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ಗಳನ್ನು ಬಳಸಿದ್ದಾರೆ ಎಂದು ತಿಳಿದುಬಂದಿದೆ.

ಇದಾದ ಬಳಿಕ ಜಿಲ್ಲಾಧಿಕಾರಿ ರಾಜ್ಯ ಶಿಕ್ಷಣ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದ, ಶಿಕ್ಷಣ ಇಲಾಖೆಯು ಸಹಾಯಕ ಶಿಕ್ಷಕ ಪ್ರಿಯಮ್ ಗೋಯಲ್ ಅವರನ್ನು ಅಮಾನತುಗೊಳಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...