ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಯೋಗಿ ಸರ್ಕಾರ; ಒಂದೇ ದಿನ ಯುಪಿಪಿಎಸ್‌ಸಿ ಪರೀಕ್ಷೆ ನಡೆಸಲು ಅಸ್ತು

Date:

ಸತತ ನಾಲ್ಕು ದಿನಗಳ ಕಾಲ ಯುಪಿಎಸ್‌ಸಿ ಆಕಾಂಕ್ಷಿಗಳು ನಡೆಸಿದ ಪ್ರತಿಭಟನೆಗೆ ಕೊನೆಗೂ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮಣಿದಿದೆ. ಒಂದೇ ದಿನದಲ್ಲಿ ಉತ್ತರ ಪ್ರದೇಶ ಲೋಕಸೇವಾ ಆಯೋಗ (ಯುಪಿಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಯೋಗಿ ಸರ್ಕಾರ ಅಸ್ತು ಎಂದಿದೆ.

ಪಿಸಿಎಸ್ ಮತ್ತು ಆರ್‌ಒ/ಎಆರ್‌ಒ ಪರೀಕ್ಷೆಗಳನ್ನು ಒಂದು ದಿನ ಮತ್ತು ಒಂದೇ ಪಾಳಿಯಲ್ಲಿ ನಡೆಸಬೇಕು ಎಂದು ಒತ್ತಾಯಿಸಿ ಪ್ರಯಾಗ್‌ರಾಜ್‌ನಲ್ಲಿ ಹಲವು ಆಕಾಂಕ್ಷಿಗಳು ಯುಪಿಪಿಎಸ್‌ಸಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ನಾಲ್ಕು ದಿನಗಳ ಪ್ರತಿಭಟನೆಯ ಬಳಿಕ ಸರ್ಕಾರವು ಈ ನಿರ್ಧಾರವನ್ನು ತಳೆದಿದೆ.

ಯುಪಿಎಸ್‌ಸಿ ಕಾರ್ಯದರ್ಶಿ ಅಶೋಕ್‌ಕುಮಾರ್‌ ಗುರುವಾರ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿ ಮಾಡಿದರು. ಅದಾದ ಬಳಿಕ ಆರ್‌ಒ/ಎಆರ್‌ಒ ಪರೀಕ್ಷೆಗಾಗಿ ಆಯೋಗದಿಂದ ಸಮಿತಿಯನ್ನು ರಚಿಸಲಾಗಿದೆ ಎಂದು ಸಿಎಂ ಕಚೇರಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬ್ರೇಕಿಂಗ್ ನ್ಯೂಸ್‌ | ‘ಬುಲ್ಡೋಜರ್ ನ್ಯಾಯ’ ನಿಷೇಧ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು; ಯೋಗಿ ಸರ್ಕಾರಕ್ಕೆ ತರಾಟೆ

ಈ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಪ್ರಯಾಗ್‌ರಾಜ್‌ನಲ್ಲಿರುವ ಯುಪಿಎಸ್‌ಸಿ ವಿದ್ಯಾರ್ಥಿಗಳ ಬಗ್ಗೆ ಯುಪಿ ಸರ್ಕಾರ ಮತ್ತು ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗದ ವರ್ತನೆ ಅತ್ಯಂತ ಸಂವೇದನಾರಹಿತ ಮತ್ತು ದುರದೃಷ್ಟಕರವಾಗಿದೆ. ಸಾಮಾನ್ಯೀಕರಣದ ಹೆಸರಿನಲ್ಲಿ ಪಾರದರ್ಶಕವಲ್ಲದ ವ್ಯವಸ್ಥೆ ಸ್ವೀಕಾರಾರ್ಹವಲ್ಲ. ಒಂದೇ ಪಾಳಿಯಲ್ಲಿ ಪರೀಕ್ಷೆಗೆ ವಿದ್ಯಾರ್ಥಿಗಳ ಬೇಡಿಕೆಯು ಸಂಪೂರ್ಣವಾಗಿ ಸಮರ್ಥನೀಯವಾಗಿದೆ” ಎಂದು ಹೇಳಿದ್ದಾರೆ.

“ಶಿಕ್ಷಣ ವ್ಯವಸ್ಥೆಯನ್ನು ಹಾಳುಗೆಡವುತ್ತಿರುವ ಬಿಜೆಪಿ ಸರ್ಕಾರದ ಅದಕ್ಷತೆಗೆ ವಿದ್ಯಾರ್ಥಿಗಳೇಕೆ ಬೆಲೆ ತೆರಬೇಕು? ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಬೀದಿಗಿಳಿದು ಹೋರಾಟ ಮಾಡುವಂತಾಗಿದೆ. ಇದೀಗ ಪೊಲೀಸರಿಂದ ಕಿರುಕುಳ ಅನುಭವಿಸುವಂತಾಗಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ತಮ್ಮ ಮತ್ತು ತಮ್ಮ ಕುಟುಂಬದ ಕನಸುಗಳನ್ನು ನನಸಾಗಿಸಲು ಮನೆ ಬಿಟ್ಟು ಅಭ್ಯಾಸ ಮಾಡುತ್ತಿರುವ ಯುವಕರಿಗೆ ಆಗುತ್ತಿರುವ ಈ ಅನ್ಯಾಯವನ್ನು ನಾವು ಒಪ್ಪುವುದಿಲ್ಲ. ಸ್ಪರ್ಧಾತ್ಮಕ ವಿದ್ಯಾರ್ಥಿಗಳ ಬೇಡಿಕೆಯನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಅವರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಸರ್ವಾಧಿಕಾರದಿಂದ ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...