ಉತ್ತರಕಾಶಿಯಲ್ಲಿ ಪ್ರವಾಹ: 100ಕ್ಕೂ ಹೆಚ್ಚು ಮಂದಿ ನಾಪತ್ತೆ

Date:

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಪ್ರವಾಹ ಉಂಟಾಗಿದ್ದು, 4 ಮಂದಿ ಮೃತಪಟ್ಟಿದ್ದಾರೆ. ಸುಮಾರು 100ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಉತ್ತರಕಾಶಿ ಜಿಲ್ಲೆಯ ಹರ್ಷಿಲ್ ಬಳಿಯ ಧರಾಲಿ ಗ್ರಾಮದಲ್ಲಿ ಹಠಾತ್ತನೆ ಸಂಭವಿಸಿದ ಭಾರೀ ಮೇಘಸ್ಫೋಟದಿಂದ ಹೋಟೆಲ್‌ಗಳು, ಹೋಮ್‌ಸ್ಟೇಗಳು ಸೇರಿದಂತೆ ಹತ್ತಾರು ಕಟ್ಟಡಗಳು ನಾಶವಾಗಿವೆ. ಪ್ರವಾಹದಲ್ಲಿ ನೂರಾರು ಮಂದಿ ಕೊಚ್ಚಿ ಹೋಗಿದ್ದಾರೆ ಎಂದು ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಶಾಂತ್ ಆರ್ಯ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮೇಘಸ್ಫೋಟ ಸಂಭವಿಸಿದೆ. ಪರಿಣಾಮ, ಖಿರ್ ಗಡ್‌ ತೊರೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಪ್ರವಾಹ ಉಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಖಿರ್ ಗಡ್ ನೀರಿನ ಮಟ್ಟ ಹೆಚ್ಚುತ್ತಿದ್ದು, ಪ್ರವಾಹ ಮುಂದುವರೆದಿದೆ. ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸುಮಾರು 10ರಿಂದ 12 ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ನೂರಾರು ಜನರು ನಾಪತ್ತೆಯಾಗಿದ್ದಾರೆ. ಪೊಲೀಸರು, ಎಸ್‌ಡಿಆರ್‌ಎಫ್, ಭಾರತೀಯ ಸೇನೆ ಹಾಗೂ ವಿಪತ್ತು ನಿರ್ವಹಣಾ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸುತ್ತಿವೆ. ಜನರನ್ನು ರಕ್ಷಿಸಲಾಗುತ್ತಿದೆ. ಕಾಣೆಯಾದವರ ಹುಟುಕಾಟ ನಡೆಯುತ್ತಿದೆ” ಎಂದು ಮ್ಯಾಜಿಸ್ಟ್ರೇಟ್‌ ತಿಳಿಸಿದ್ದಾರೆ.

“ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಭಾರತೀಯ ಸೇನೆಗೆ ಸೂಚಿಸಲಾಗಿದೆ. ನಾವು ಜನರನ್ನು ರಕ್ಷಿಸಲು ಕೆಲಸದಲ್ಲಿ ತೊಡಗಿದ್ದೇವೆ. ಅಧಿಕಾರಿಗಳು ಜನರನ್ನು ರಕ್ಷಿಸಲು ಕ್ರಮ ಕೈಗೊಳ್ಳುತ್ತಿದ್ದಾರೆ” ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...