ಉತ್ತರಾಖಂಡ: ಟೆಂಪೋ ಟ್ರಾವೆಲರ್ ನದಿಗೆ ಉರುಳಿ ಬಿದ್ದು 14 ಮಂದಿ ಸಾವು, ತನಿಖೆಗೆ ಸಿಎಂ ಆದೇಶ

Date:

ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಅಲಕನಂದಾ ನದಿಗೆ ಟೆಂಪೋ ಟ್ರಾವೆಲರ್ ಉರುಳಿದ್ದು ಹದಿನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ರುದ್ರಪ್ರಯಾಗ ನಗರದ ತಿರುವಿನಲ್ಲಿ ರಾತ್ರಿ 11.30ರ ಸುಮಾರಿಗೆ ವಾಹನ ಅಪಘಾತಕ್ಕೀಡಾಗಿದೆ. ಮೇಲ್ನೋಟಕ್ಕೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿರಬಹುದು ಎಂದು ಕಂಡುಬಂದಿದೆ ಎಂದು ಎಸ್‌ಡಿಆರ್‌ಎಫ್ ಕಮಾಂಡೆಂಟ್ ಮಣಿಕಾಂತ್ ಮಿಶ್ರಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ಉತ್ತರಾಖಂಡ| ಹೆಚ್ಚುತ್ತಿದೆ ಚಾರ್ ಧಾಮ್ ಯಾತ್ರಾರ್ಥಿಗಳ ಸಾವಿನ ಸಂಖ್ಯೆ; 116 ಮಂದಿ ಮೃತ್ಯು

26 ಜನರಿದ್ದ ಟೆಂಪೋ ಟ್ರಾವೆಲ್ ಚೋಪ್ಟಾಗೆ ತೆರಳುತ್ತಿದ್ದಾಗ ರುದ್ರಪ್ರಯಾಗ ಪ್ರಧಾನ ಕಚೇರಿ ಬಳಿಯ ರಂತೋಲಿ ಬಳಿ ಅಪಘಾತಕ್ಕೀಡಾಗಿದೆ. ವಾಹನವು ಹೆದ್ದಾರಿಯಿಂದ 200 ಮೀಟರ್ ದೂರದಲ್ಲಿ ಬಿದ್ದು 10 ಜನರು ಸ್ಥಳದಲ್ಲೇ ಸಾವನ್ನಪ್ಪಿದರು. ಇತರ ನಾಲ್ವರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಅಥವಾ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಎಂದು ಎಸ್‌ಡಿಆರ್‌ಎಫ್‌ನ ಹೇಳಿಕೆ ತಿಳಿಸಿದೆ.

ಅಪಘಾತದ ನಂತರ, ಎಸ್‌ಡಿಆರ್‌ಎಫ್ ಮತ್ತು ಜಿಲ್ಲಾ ರಕ್ಷಣಾ ತಂಡವು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಈ ನಡುವೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಚಾರ್‌ಧಾಮ್ ಯಾತ್ರಾ ಮಾರ್ಗದಲ್ಲಿ ಅಪಘಾತ ಮತ್ತು ಇತರೆ ದುರ್ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ?  ಉತ್ತರಾಖಂಡ್‌ನ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ 19 ಮಂದಿಯಲ್ಲಿ ನಾಲ್ವರು ಸಾವು

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ, “ರುದ್ರಪ್ರಯಾಗ ಜಿಲ್ಲೆಯಲ್ಲಿ ಟೆಂಪೋ ಟ್ರಾವೆಲರ್ ಅಪಘಾತದ ಅತ್ಯಂತ ದುಃಖದ ಸುದ್ದಿ ಕೇಳಿಬಂದಿದೆ. ಸ್ಥಳೀಯ ಆಡಳಿತ, ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಕೇಂದ್ರಕ್ಕೆ ಕಳುಹಿಸಲಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ” ಎಂದು ತಿಳಿಸಿದ್ದಾರೆ.

“ವಾಹನವು ಹರಿಯಾಣ ನೋಂದಾಯಿತವಾಗಿದೆ. ವಾಹನದ ನಿಗದಿತ ಆಸನ ಸಾಮರ್ಥ್ಯ 20 ಆಗಿದ್ದು, ಅಪಘಾತದ ಸಮಯದಲ್ಲಿ 26 ಪ್ರಯಾಣಿಕರು ಅದರಲ್ಲಿ ಪ್ರಯಾಣಿಸುತ್ತಿದ್ದರು” ಎಂದು ಹೇಳಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...