ಕಂದಕಕ್ಕೆ ಉರುಳಿತು ಮದುವೆಗೆ ಹೊರಟಿದ್ದ ಬಸ್‌; 30 ಮಂದಿ ದುರ್ಮರಣ

Date:

ಮದುವೆಗೆ ಹೊರಟಿದ್ದ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು, 30 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ನಡೆದಿದೆ. ಬಸ್‌ನಲ್ಲಿದ್ದವರ ಪೈಕಿ, 20-25 ಮಂದಿ ಬದುಕುಳಿದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ರಾತ್ರಿ ಈ ದುರ್ಘಟನೆ ನಡೆದಿದೆ. ಪೌರಿ ಜಿಲ್ಲೆಯ ಬಿರೋನ್‌ಖಾಲ್‌ನಲ್ಲಿ ಮದುವೆ ಕಾರ್ಯಕ್ರಮವಿತ್ತು. ಮದುವೆಗಾಗಿ ವರದ ಕಡೆಯವರು ಹರಿದ್ವಾರ ಜಿಲ್ಲೆಯ ಲಾಲ್ಧಾಂಗ್‌ನಿಂದ ಬಿರೋನ್‌ಖಾಲ್‌ಗೆ ಬಸ್‌ ತೆರಳುತ್ತಿತ್ತು. ಬಸ್‌ನಲ್ಲಿ 50-55 ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ, 200 ಅಡಿ ಆಳದ ಕಂದಕಕ್ಕೆ ಬಸ್​ ಉರುಳಿ ಬಿದ್ದಿದೆ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ದೌಡಾಯಿಸಿದ್ದು, ಬದುಕುಳಿದಿದ್ದ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಹೊರೆತೆಗೆಯುತ್ತಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...