ಉತ್ತರಾಖಂಡ | ಕಮರಿಗೆ ಉರುಳಿದ ಬಸ್; 36 ಮಂದಿ ದಾರುಣ ಸಾವು

Date:

ಬಸ್ ಒಂದು ಆಳವಾದ ಕಮರಿಗೆ ಉರುಳಿ ಬಿದ್ದು ಕನಿಷ್ಠ 36 ಮಂದಿ ಸಾವನ್ನಪ್ಪಿ, 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

22 ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ರಾಮನಗರದ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ ಎಂದು ಅಲ್ಮೋರಾದ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ವಿನೀತ್ ಪಾಲ್ ಪಿಟಿಐಗೆ ತಿಳಿಸಿದ್ದಾರೆ. ಇನ್ನುಳಿದವವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಬಸ್ ಪೌರಿಯಿಂದ ರಾಮನಗರಕ್ಕೆ ಹೋಗುತ್ತಿದ್ದಾಗ ಅಲ್ಮೋರಾದ ಮಾರ್ಚುಲಾದಲ್ಲಿ ಅಪಘಾತ ಸಂಭವಿಸಿದೆ. 200 ಮೀಟರ್ ಆಳದ ಕಮರಿಗೆ ಬಸ್ ಉರುಳಿದೆ. ಬಸ್‌ನಲ್ಲಿ 40 ಮಂದಿ ಪ್ರಯಾಣಿಕರಿದ್ದರು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಲೋಕ್ ಕುಮಾರ್ ಪಾಂಡೆ ತಿಳಿಸಿದ್ದರು. ಆದರೆ ಬಸ್‌ನಲ್ಲಿ 55 ಮಂದಿ ಇದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಉತ್ತರಾಖಂಡ | ಅವಶೇಷಗಳಡಿ ಸಿಲುಕಿ ನಾಲ್ವರು ನೇಪಾಳಿ ಪ್ರಜೆಗಳು ಸಾವು

ಪೊಲೀಸರು, ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿ, ಸಂತಾಪ ವ್ಯಕ್ತಪಡಿಸಿದ್ದಾರೆ. “ಅಲ್ಮೋರಾ ಜಿಲ್ಲೆಯ ಮರ್ಚುಲಾದಲ್ಲಿ ಸಂಭವಿಸಿದ ದುರದೃಷ್ಟಕರ ಬಸ್ ಅಪಘಾತದಲ್ಲಿ ಪ್ರಯಾಣಿಕರ ಸಾವು ನೋವಿನ ಸುದ್ದಿ ಕೇಳಿಬಂತು. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಸ್ಥಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವ ಕಾರ್ಯವನ್ನು ಕ್ಷಿಪ್ರವಾಗಿ ಮಾಡುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನು ಅಗತ್ಯವಿದ್ದಲ್ಲಿ ಏರ್‌ಲಿಫ್ಟ್ ಮಾಡಲು ಸಹ ಸೂಚನೆಗಳನ್ನು ನೀಡಲಾಗಿದೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...