ಉತ್ತರಾಖಂಡ ಪ್ರವಾಹ | ಮೂರು ದಿನದಲ್ಲಿ 17 ಮಂದಿ ಮೃತ, 20ಕ್ಕೂ ಹೆಚ್ಚು ಜನರು ನಾಪತ್ತೆ

Date:

ಉತ್ತರಾಖಂಡದಲ್ಲಿ ಅದರಲ್ಲೂ ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್‌ನಲ್ಲಿ ಸುರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿ, ಈವರೆಗೂ 17 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ನಾಪತ್ತೆಯಾಗಿರುವ ವರದಿಯಾಗಿದೆ.

ಸೋಮವಾರ ರಾತ್ರಿಯಿಂದಲೇ ಪ್ರಾರಂಭವಾದ ಸರಣಿ ಮೇಘ ಸ್ಫೋಟಗಳು ಮತ್ತು ನಿರಂತರ ಮಳೆಯಿಂದ ಸಾಕಷ್ಟು ಹಾನಿಯುಂಟಾಗಿದೆ. ರಸ್ತೆಗಳು, ಸೇತುವೆಗಳು ಮತ್ತು ಮನೆಗಳು ಕೊಚ್ಚಿಹೋಗಿವೆ. ನದಿಗಳು ಪ್ರವಾಹಗಳಾಗಿ ಹರಿಯುತ್ತಿವೆ.

25 ರಿಂದ 30 ಸ್ಥಳಗಳಲ್ಲಿ ರಸ್ತೆಗಳು ಸಂಪೂರ್ಣವಾಗಿ ಕೊಚ್ಚಿ ಹೋಗಿವೆ. ಮನೆಗಳು ಭಾರಿ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಸರ್ಕಾರಿ ಆಸ್ತಿಪಾಸ್ತಿಗಳು ಸಹ ಹಾನಿಗೀಡಾಗಿದ್ದು, ಅನೇಕ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಪರಿಸ್ಥಿತಿ ನಿರ್ವಹಣೆಗೆ ಎಲ್ಲಾ ಪ್ರಯತ್ನ ನಡೆಸಲಾಗುತ್ತಿದೆ. ಅನೇಕ ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಡಿಆರ್‌ಎಫ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, “ಪರಿಸ್ಥಿತಿ ಇನ್ನೂ ಗಂಭೀರವಾಗಿದೆ. ನದಿಗಳಲ್ಲಿ ಕೊಚ್ಚಿಹೋಗಿ ಮತ್ತು ವಿವಿಧ ಸ್ಥಳಗಳಲ್ಲಿ ಅವಶೇಷಗಳ ಅಡಿಯಲ್ಲಿ ಹೂತು ಹದನೇಳು ಮಂದಿ ಮೃತಪಟ್ಟಿದ್ದಾರೆ, 20 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ” ಎಂದು ಹೇಳಿದ್ದಾರೆ.

ಸಹಸ್ರಧಾರಾದ ಕಾರ್ಲಿಗಾಡ್ ಪ್ರದೇಶದಲ್ಲಿ, ನೀರಿನಲ್ಲಿ ಮಣ್ಣು ಕೊಚ್ಚಿ ಹೋಗಿ 8 ಅಂಗಡಿಗಳು ಮತ್ತು ಹೋಟೆಲ್ ಕೊಚ್ಚಿಹಾಕಿ, ಇಬ್ಬರು ಕಾಣೆಯಾಗಿದ್ದಾರೆ. ಡಿಐಟಿ ಕಾಲೇಜು ಬಳಿಯ ಗ್ರೀನ್ ವ್ಯಾಲಿ ಪಿಜಿಯಲ್ಲಿ ಗೋಡೆ ಕುಸಿದು ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ. ಅವರ ಶವವನ್ನು ಎಸ್‌ಡಿಆರ್‌ಎಫ್ ಹೊರತೆಗೆಯಲಾಗಿದೆ.

ಊದಿಕೊಂಡ ಆಸನ್ ನದಿಯಲ್ಲಿ 20 ಜನರು ಕೊಚ್ಚಿಹೋಗಿದ್ದಾರೆ, ಐದು ಶವಗಳು ಪತ್ತೆಯಾಗಿವೆ. ತಪಕೇಶ್ವರದ ಶಿಖರ್ ಫಾಲ್ಸ್‌ನಲ್ಲಿ ನಾಲ್ವರು ನಾಪತ್ತೆಯಾಗಿದ್ದಾರೆ. ಮಸ್ಸೂರಿಯ ಝರಿಪಾನಿ ಟೋಲ್ ಪ್ಲಾಜಾದಲ್ಲಿ ಭೂಕುಸಿತದಲ್ಲಿ ಓರ್ವ ಕಾರ್ಮಿಕರು ಮೃತಪಟ್ಟಿದ್ದಾರೆ. ಕಲ್ಸಿ-ಚಕ್ರತ ಮೋಟಾರ್ ರಸ್ತೆಯಲ್ಲಿ ಕಲ್ಲು ಬಿದ್ದು ಮತ್ತೊಬ್ಬ ಸ್ಕೂಟರ್ ಸವಾರ ಸಾವನ್ನಪ್ಪಿದ್ದಾರೆ.

ಮಳೆ ಮತ್ತು ಪ್ರವಾಹ ಪೀಡಿತ ಉತ್ತರಾಖಂಡದ ಪ್ರದೇಶಗಳಿಗೆ ₹1,200 ಕೋಟಿ ಆರ್ಥಿಕ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಘೋಷಿಸಿದ್ದಾರೆ.

ಸಂತ್ರಸ್ತರ ಕುಟುಂಬಗಳಿಗೆ ಭೇಟಿ ನೀಡಿರುವ ಮೋದಿ, “ಪ್ರವಾಹ ಮತ್ತು ಭೂಕುಸಿತದಿಂದ ಮೃತಪಟ್ಟವರ ಕುಟುಂಬಗಳಿಗೆ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50,000 ಪರಿಹಾರ. ಅನಾಥ ಮಕ್ಕಳಿಗೆ ಪಿ.ಎಂ ಮಕ್ಕಳ ಕ್ಷೇಮಾಭಿವೃದ್ಧಿಯ ‘ಪಿ.ಎಂ.ಕೇರ್ಸ್’ ಯೋಜನೆಯಡಿ ಸಮಗ್ರ ಬೆಂಬಲ ನೀಡುವುದಾಗಿ” ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...