ಉತ್ತರಾಖಂಡ | ಭಾರೀ ಮಳೆ – ಭೂಕುಸಿತ; ಭದರಿನಾಥ ಹೆದ್ದಾರಿ ಬಂದ್

Date:

ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಆತಂಕ ಎದುರಾಗಿದೆ. ರಾಜ್ಯದ ಚಮೋಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಜಿಲ್ಲೆಯ ಕಮೆದ, ನಂದಪ್ರಯಾಗ ಮತ್ತು ಚಿಂಕಾದಲ್ಲಿ ಗುಡ್ಡು ಕುಸಿದಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಮಣ್ಣು ತುಂಬಿಕೊಂಡಿದೆ. ಭೂಕುಸಿತವೂ ಉಂಟಾಗಿದೆ.

ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯು ಹಲವಾರು ಸ್ಥಳಗಳನ್ನು ಸಂಪರ್ಕಸುವ ಪ್ರಮುಖ ರಸ್ತೆಯಾಗಿದೆ. ಯಾತ್ರಾರ್ಥಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಹೆಚ್ಚಾಗಿ ಬಳಸುವ ಈ ರಸ್ತೆಯನ್ನು ಬಂದ್‌ ಮಾಡಿರುವುದರಿಂದ ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ. ಬದರಿನಾಥಕ್ಕೆ ತೆರಳುತ್ತಿದ್ದ ಭಕ್ತರು ಮತ್ತು ಪ್ರವಾಸಿಗರು ದಿಕ್ಕು ತೋಚದ ಪರಿಸ್ಥಿತಿಯಲ್ಲಿದ್ದಾರೆ. ರಸ್ತೆಯಲ್ಲಿ ಬಿದ್ದಿರುವ ಗುಡ್ಡಗಳ ಅವಶೇಷಗಳನ್ನು ತೆರವುಗೊಳಿಸಿ, ಮುಂದಿನ ಪ್ರಯಾಣ ಆರಂಭಿಸಲು ಕಾಯುತ್ತಿದ್ದಾರೆ.

ಸ್ಥಳೀಯ ಅಧಿಕಾರಿಗಳು ಅವಶೇಷಗಳ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ರಸ್ತೆಗೆ ಬಿದ್ದಿರುವ ಕಲ್ಲು, ಮಣ್ಣು ತೆರವುಗೊಳಿಸಲು ಬುಲ್ಡೋಜರ್ ಹಾಗೂ ಇತರೆ ಭಾರೀ ಯಂತ್ರೋಪಕರಣಗಳನ್ನು ನಿಯೋಜಿಸಲಾಗಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಕಚೇರಿಯು ಸಾಧ್ಯವಾದಷ್ಟು ಬೇಗ ರಸ್ತೆಯನ್ನು ಸಂಚಾರಕ್ಕೆ ಒದಗಿಸುವುದಾಗಿ ಭರವಸೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರದೇಶದಲ್ಲಿ ಹವಾಮಾನ ವೈಪರೀತ್ಯವಾಗಿದ್ದು, ಹೆಚ್ಚಿನ ಭೂಕುಸಿತಗಳು ಸಂಭವಿಸುವ ಆತಂಕವಿದೆ. ಅಧಿಕಾರಿಗಳು ಹವಾಮಾನ ಪರಿಸ್ಥಿತಿಗಳನ್ನು ಗಮನಿಸುತ್ತಿದ್ದಾರೆ. ಯಾವುದೇ ಅಪಾಯಗಳನ್ನು ಎದುರಿಸಲು ಸಿದ್ದತೆ ನಡೆಸುತ್ತಿದ್ದಾರೆ.

ಹೆದ್ದಾರಿಯನ್ನು ತೆರವುಗೊಳಿಸುವುದರ ಜೊತೆಗೆ, ಸ್ಥಳೀಯ ಅಧಿಕಾರಿಗಳು ರಸ್ತೆಯಲ್ಲಿ ಸಿಲುಕಿರುವವರಿಗೆ ಆಸರೆ ನೀಡುವ ಬಗ್ಗೆಯೂ ಗಮನಹರಿಸುತ್ತಿದ್ದಾರೆ. ರಸ್ತೆ ಮಧ್ಯೆ ನಿಂತಿರುವ ಪ್ರಯಾಣಿಕರಿಗೆ ಹತ್ತಿರದ ಪಟ್ಟಣಗಳಲ್ಲಿ ತಾತ್ಕಾಲಿಕ ಆಶ್ರಯ ನೀಡಲಾಗುತ್ತಿದೆ. ಅಗತ್ಯವಿರುವವರಿಗೆ ಆಹಾರ, ನೀರು ಮತ್ತು ವೈದ್ಯಕೀಯ ನೆರವನ್ನೂ ಕೊಡಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...