ಉತ್ತರಾಖಂಡ ಮಳೆ | ತೆಹ್ರಿ ಗಡ್ವಾಲ್ ಭೂಕುಸಿತ: ತಾಯಿ, ಮಗಳು ಜೀವಂತ ಸಮಾಧಿ

Date:

ಕಳೆದ ಮೂರು ದಿನಗಳಿಂದ ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸರಣಿ ಭೂಕುಸಿತ ಉಂಟಾಗಿದೆ. ತೆಹ್ರಿ ಗಡ್ವಾಲ್ ಭೂಕುಸಿತದಲ್ಲಿ ತಾಯಿ, ಮಗಳು ಜೀವಂತ ಸಮಾಧಿಯಾಗಿದ್ದಾರೆ.

ಶುಕ್ರವಾರ ತಡರಾತ್ರಿ ಸಂಭವಿಸಿದ ಭೂಕುಸಿತದಿಂದಾಗಿ ತಾಯಿ ಮತ್ತು ಮಗಳು ತಮ್ಮ ಮನೆಯ ಅವಶೇಷದಡಿಯಲ್ಲಿ ಹೂತು ಹೋಗಿದ್ದಾರೆ. ನಿದ್ರೆಯಲ್ಲಿದ್ದ ತಾಯಿ, ಮಗಳು ಅಲ್ಲಿಯೇ ಜೀವಂತ ಸಮಾಧಿಯಾಗಿದ್ದಾರೆ. ಇತರ ಕುಟುಂಬ ಸದಸ್ಯರು ಭೂಕುಸಿತವಾಗುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಭೂಕುಸಿತ ಘಟನೆಯ ನಂತರ, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಪೊಲೀಸರು ಮತ್ತು ಕಂದಾಯ ಪೊಲೀಸರ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಟೋಲಿ ಗ್ರಾಮಕ್ಕೆ ಧಾವಿಸಿವೆ. ಈ ನಡುವೆ ಭಾರೀ ಮಳೆಯಿಂದಾಗಿ ಭಿಲಂಗಾನ ಬ್ಲಾಕ್‌ನ ಎಲ್ಲಾ ಶಾಲೆಗಳನ್ನು ಮುಚ್ಚಲಾಗಿದೆ. ಸೂಕ್ಷ್ಮ ಪ್ರದೇಶಗಳ ಗ್ರಾಮಸ್ಥರು ಜಾಗರೂಕರಾಗಿರಲು ಮತ್ತು ಎಚ್ಚರಿಕೆ ವಹಿಸುವಂತೆ ಆಡಳಿತವು ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಉತ್ತರಾಖಂಡ | ತಾತ್ಕಾಲಿಕ ಸೇತುವೆ ಕುಸಿತ; ನದಿಯಲ್ಲಿ ಕೊಚ್ಚಿ ಹೋದ ಪ್ರವಾಸಿಗರು

ಈ ಬಗ್ಗೆ ಟೋಲಿ ಗ್ರಾಮದ ಮುಖಂಡ ರಮೇಶ್ ಜಿರ್ವಾಲ್ ಮಾತನಾಡಿ, “ಕಳೆದ ರಾತ್ರಿ ಸುಮಾರು 2:30ರ ಸುಮಾರಿಗೆ ಈ ಪ್ರದೇಶದಲ್ಲಿ ಭಾರಿ ಮಳೆ ಸುರಿದಿದೆ. ಈ ಸಮಯದಲ್ಲಿ ಸ್ಥಳೀಯ ನಿವಾಸಿ ವೀರೇಂದ್ರ ಲಾಲ್ ಅವರ ಮನೆಯಲ್ಲಿ ಕಟ್ಟಡದ ಹಿಂದೆ ಸಂಭವಿಸಿದ ಭೂಕುಸಿತದಿಂದ ಮನೆಯ ಗೋಡೆಗೆ ಹಾನಿಯಾಗಿದೆ. ವೀರೇಂದ್ರ ಅವರ ಪತ್ನಿ ಸರಿತಾ ದೇವಿ (36) ಮತ್ತು ಅವರ 15 ವರ್ಷದ ಮಗಳು ಅಂಕಿತಾ ಮನೆಯ ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದಾರೆ” ಎಂದು ತಿಳಿಸಿದರು.

ಎಸ್‌ಡಿಆರ್‌ಎಫ್‌ನ ಇನ್ಸ್‌ಪೆಕ್ಟರ್ ಕವೀಂದ್ರ ಸಜ್ವಾನ್ ಮಾಹಿತಿ ನೀಡಿದ್ದು, “ಒಂದೂವರೆ ಗಂಟೆಗಳ ಕಾಲ ನಡೆದ ಕಠಿಣ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ನಂತರ ಎಸ್‌ಡಿಆರ್‌ಎಫ್ ತಂಡವು ಇಬ್ಬರ ಮೃತದೇಹವನ್ನು ಹೊರತೆಗೆದಿದೆ” ಎಂದು ಹೇಳಿದರು.

ವಿಪತ್ತು ನಿರ್ವಹಣಾ ಇಲಾಖೆಯ ಮೂಲಗಳ ಪ್ರಕಾರ, ಭೂಕುಸಿತದಿಂದ ತಿಂಗರ್ ಗ್ರಾಮದ ಜೂನಿಯರ್ ಹೈಸ್ಕೂಲ್ ಕಟ್ಟಡವು ಸಂಪೂರ್ಣ ಹಾನಿಯಾಗಿದೆ. ವಿಷನ್ ಗ್ರಾಮವನ್ನು ದಲಾ ಗ್ರಾಮಕ್ಕೆ ಸಂಪರ್ಕಿಸುವ ಸೇತುವೆ ಕೊಚ್ಚಿಹೋಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...