ವಂದೇ ಭಾರತ್ | ಕಿಟಕಿ ಸೀಟಿಗಾಗಿ ಗಲಾಟೆ; ಪ್ರಯಾಣಿಕನ ಮೇಲೆ ಬಿಜೆಪಿ ಶಾಸಕ, ಸಹಚರರಿಂದ ಹಲ್ಲೆ

Date:

ನವದೆಹಲಿ-ಭೋಪಾಲ್ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಕಿಟಕಿ ಸೀಟಿನ ವಿಚಾರವಾಗಿ ಬಿಜೆಪಿ ಶಾಸಕ ರಾಜೀವ್ ಸಿಂಗ್ ಮತ್ತು ಅವರ ಬೆಂಬಲಿಗರು ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಆದರೆ, ದಾಳಿ ಸಂಬಂಧ ದೂರು ದಾಖಲಿಸಲು ಸಂತ್ರಸ್ತ ವ್ಯಕ್ತಿ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ಆದಾಗ್ಯೂ, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಹಂಚಿಕೊಂಡಿರುವ ಕಾಂಗ್ರೆಸ್‌ ನಾಯಕ ಸುಪ್ರಿಯಾ ಶ್ರೀನಾಟೆ, “ಕಿಟಕಿ ಸೀಟನ್ನು ಬಿಟ್ಟುಕೊಡಲು ನಿರಾಕರಿಸಿದ ಸಹ-ಪ್ರಯಾಣಿಕನ ಮೇಲೆ ಬಿಜೆಪಿ ಶಾಸಕ ಸಿಂಗ್ ತನ್ನ ‘ಗೂಂಡಾ ಬೆಂಬಲಿಗ’ರಿಂದ ದಾಳಿ ಮಾಡಿಸಿದ್ದಾರೆ. ಸಿಂಗ್ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಆಪ್ತನಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶ ಬಿಜೆಪಿ, “ಸಿಂಗ್‌ಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಏಳು ದಿನಗಳಲ್ಲಿ ಲಿಖಿತ ವಿವರಣೆ ನೀಡುವಂತೆ ಕೇಳಲಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೋಟಿಸ್‌ನಲ್ಲಿ, “ಸಿಂಗ್ ಅವರ ನಡವಳಿಕೆ ಪಕ್ಷದ ವರ್ಚಸ್ಸಿನ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಸೂಚಿತ ಅವಧಿಯೊಳಗೆ ಪ್ರತಿಕ್ರಿಯೆ ನೀಡದಿದ್ದಲ್ಲಿ ಅಥವಾ ನೀಡಿದ ವಿವರಣೆಯು ತೃಪ್ತಿಕರವಾಗಿರದಿದ್ದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಎಚ್ಚರಿಸಲಾಗಿದೆ.

ಕಳೆದ ಗುರುವಾರ ಸಂಜೆ ವಂದೇ ಭಾರತ್ ರೈಲಿನಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸರ್ಕಾರಿ ರೈಲ್ವೆ ಪೊಲೀಸರ (ಜಿಆರ್‌ಪಿ) ಪ್ರಕಾರ, ಸೀಟು ಬದಲಾಯಿಸುವ ವಿಚಾರದಲ್ಲಿ ಉಂಟಾದ ವಿವಾದ ಮತ್ತು ಸಹ ಪ್ರಯಾಣಿಕನ ಅನುಚಿತ ವರ್ತನೆಯಿಂದ ಘಟನೆ ನಡೆದಿದೆ. ರೈಲು ಝಾನ್ಸಿ ನಿಲ್ದಾಣವನ್ನು ತಲುಪಿದಾಗ ಶಾಸಕರ ಬೆಂಬಲಿಗರು ರೈಲು ಹತ್ತಿ, ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ. ಜಿಆರ್‌ಪಿ ಪೊಲೀಸರು ಸಿಂಗ್ ವಿರುದ್ಧ ನಾನ್-ಕಾಗ್ನಿಜನಬಲ್ ರಿಪೋರ್ಟ್ (ಎನ್‌ಸಿಆರ್) ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...