ವಂದೇ ಭಾರತ್ ರೈಲಿನ ಊಟದಲ್ಲಿ ಕೀಟ ಪತ್ತೆ: ಪೋಸ್ಟ್ ವೈರಲ್

Date:

ಭಾರತೀಯ ರೈಲ್ವೆಯ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಊಟದಲ್ಲಿ ಕೀಟ ಪತ್ತೆಯಾಗಿದೆ. ಎಕ್ಸ್‌ನಲ್ಲಿ ಈ ಬಗ್ಗೆ ಪ್ರಯಾಣಿಕರೊಬ್ಬರು ಪೋಸ್ಟ್ ಒಂದನ್ನು ಮಾಡಿದ್ದಾರೆ. ಚಿತ್ರದಲ್ಲಿ ದಾಲ್‌ನಲ್ಲಿ ಕೀಟ ತೇಲುತ್ತಿರುವುದು ಕಂಡುಬಂದಿದೆ. ಸದ್ಯ ಪೋಸ್ಟ್ ವೈರಲ್ ಆಗಿದೆ.

ಭಾರತದ ಪ್ರೀಮಿಯಂ ರೈಲು ಸೇವೆಗಳಲ್ಲಿ ಒಂದೆಂದು ಪರಿಗಣಿಸಲಾದ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯ ಮಾನದಂಡಗಳ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಹಿಂದೆಯೂ ಹಲವು ಬಾರಿ ಜಿರಳೆ, ಇತರೆ ಕೀಟ ಪತ್ತೆಯಾಗಿದೆ. ಹಲಸಿದ ಆಹಾರ ನೀಡಿರುವುದೂ ವರದಿಯಾಗಿದೆ.

ಇದನ್ನು ಓದಿದ್ದೀರಾ? ವಂದೇ ಭಾರತ್‌ಗೆ ಚಾಲನೆ ವೇಳೆ ರೈಲ್ವೇ ಹಳಿ ಮೇಲೆ ಬಿದ್ದ ಬಿಜೆಪಿ ಶಾಸಕಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2025ರ ಜುಲೈ 22ರಂದು ವಂದೇ ಭಾರತ್ ರೈಲಿನಲ್ಲಿ ಪ್ರಯಾಣ ಮಾಡುವಾಗ ಆಹಾರದಲ್ಲಿ ಕೀಟ ಕಂಡುಬಂದಿದೆ. ರೈಲು ಸಂಖ್ಯೆ 22440 c3 53 ಸೀಟ್ ಸಂಖ್ಯೆ” ಎಂದು ಎಕ್ಸ್‌ನಲ್ಲಿ ಪ್ರಯಾಣಿಕರು ಪೋಸ್ಟ್ ಮಾಡಿದ್ದಾರೆ.

ಈ ಪೋಸ್ಟ್‌ಗೆ ರೈಲ್ವೆ ಪ್ರತಿಕ್ರಿಯೆ ನೀಡಿದೆ. “ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ! ದಯವಿಟ್ಟು ವಿವರಗಳು, ಪಿಎನ್‌ಆರ್ ಮತ್ತು ಮೊಬೈಲ್ ಸಂಖ್ಯೆ ಹಂಚಿಕೊಳ್ಳಿ. ತ್ವರಿತ ಪರಿಹಾರಕ್ಕಾಗಿ ನೀವು ನಿಮ್ಮ ಕಳವಳವನ್ನು ನೇರವಾಗಿ https://railmadad.indianrailways.gov.in ನಲ್ಲಿಯೂ ವ್ಯಕ್ತಪಡಿಸಬಹುದು” ಎಂದು ಹೇಳಿದೆ.

ಹಲವು ಮಂದಿ ಶುಚಿತ್ವದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. “ಬೇಸರದ ಸತ್ಯಾಂಶ ಏನೆಂದರೆ ಎಲ್ಲ ಭಾರತೀಯ ರೈಲುಗಳಲ್ಲಿ ಆಹಾರ ಕೆಳಮಟ್ಟದ್ದಾಗಿದೆ ಮತ್ತು ಶುಚಿಯಾಗಿರುವುದಿಲ್ಲ” ಎಂದು ನೆಟ್ಟಿಗರೊಬ್ಬರು ದೂರಿದ್ದಾರೆ. “ನೀವು ಯಾವಗಲೂ ಬರೀ ವಿಷಾಧ ವ್ಯಕ್ತಪಡಿಸುತ್ತೀರಿ. ಪಿಎನ್‌ಆರ್ ನೀಡುವಂತೆ ಕೇಳುತ್ತೀರಿ, ಆಮೇಲೆ ಪ್ರಯಾಣಿಕರನ್ನು ತರಾಟೆಗೆ ತೆಗೆದುಕೊಳ್ಳುತ್ತೀರಿ” ಎಂದು ಇನ್ನೋರ್ವ ನೆಟ್ಟಿಗರು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...