ವಾರಣಾಸಿ | ಯುವತಿ ಮೇಲೆ ಒಂದು ವಾರ 23 ಮಂದಿ ಕಾಮುಕರಿಂದ ನಿರಂತರ ಅತ್ಯಾಚಾರ; ಸ್ನೇಹಿತರಿಂದಲೂ ಕೃತ್ಯ

Date:

ಪ್ರಧಾನಿ ನರೇಂದ್ರ ಮೋದಿ ಅವರು ಪತ್ರಿನಿಧಿಸುವ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ಭೀಕರ, ಅಮಾನುಷ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. 19 ವರ್ಷದ ಯುವತಿಯ ಮೇಲೆ 23 ಮಂದಿ ಕಾಮುಕರು ಒಂದು ವಾರ (7 ದಿನ) ನಿರಂತರವಾಗಿ ಅತ್ಯಾಚಾರ / ಸಾಮೂಹಿಕ ಅತ್ಯಾಚಾರ ಎಸಗಿ ಕೌರ್ಯ ಮರೆದಿದ್ದಾರೆ. ವಿಕೃತ ಕಾಮುಕರಲ್ಲಿ ಯುವತಿಯ ಸ್ನೇಹಿತರು, ರಕ್ಷಣೆಗಾಗಿ ಬಂದವರೂ ಸೇರಿದ್ದಾರೆ ಎಂದು ವರದಿಯಾಗಿದೆ.

ಸಂತ್ರಸ್ತ ಯುವತಿಯನ್ನು ಆರೋಪಿಗಳು ವಿವಿಧ ಸ್ಥಳಗಳಿಗೆ ಎಳೆದೊಯ್ದು ಮತ್ತು ಡ್ರಗ್ಸ್‌ ನೀಡಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ ಯುವತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕ, 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವಾರಣಾಸಿಯ ಪಾಂಡೇಪುರ ಲಾಲ್ಪುರ ಪ್ರದೇಶದ ಯುವತಿಯನ್ನು ಕೆಲ ಆರೋಪಿಗಳು (ಆಕೆಯ ಹಳೆಯ ಸಹಪಾಠಿಗಳು ಮತ್ತು ಸ್ನೇಹಿತರು) ಮಾರ್ಚ್‌ 29ರಂದು ಅಪಹರಿಸಿದ್ದರು.  ಅಂದು ಯುವತಿಯ ಸ್ನೇಹಿತನೇ ಆಗಿರುವ ರಾಜ್ ವಿಶ್ವಕರ್ಮ ಎಂಬಾತ ಆಕೆಯನ್ನು ತನ್ನ ಕೆಫೆಗೆ ಕರೆದೊಯ್ದಿದ್ದನು. ಅಲ್ಲಿ, ಯುವತಿಯನ್ನು ಕೂಡಿ ಹಾಕಿ, ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಆತ ಇಲ್ಲದ ಸಮಯದಲ್ಲಿ ಯುವತಿ ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ. ತಪ್ಪಿಸಿಕೊಂಡು ಬರುವ ವೇಳೆ, ಆಕೆಗೆ ಪರಿಚಿತನಿದ್ದ ಮತ್ತೋರ್ವ ಆರೋಪಿ ಎದುರಾಗಿದ್ದು, ಮನೆ ತಲುಪಲು ನೆರವು ನೀಡುವುದಾಗಿ ಹೇಳಿ ತನ್ನ ಬೈಕ್‌ನಲ್ಲಿ ಕರೆದೊಯ್ದಿದ್ದಾರೆ. ಆದರೆ, ನಿರ್ಜನ ಪ್ರದೇಶದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ಬಳಿಕ, ಇತರ 10 ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಬರುವಾಗ ಆಕೆಯನ್ನು ಗಮನಿಸಿದ ಮತ್ತೊಂದು ಗುಂಪು ಆಕೆಯನ್ನು ಅಪಹರಿಸಿ, ಗೋಡೌನ್‌ನಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿದೆ. 7 ದಿನಗಳಲ್ಲಿ 23 ಕಾಮುಕರ ವಿಕೃತಿಗೆ ಬಲಿಯಾದ ಸಂತ್ರಸ್ತೆ, ಏಪ್ರಿಲ್ 4ರಂದು ತನ್ನ ಮನೆಗೆ ಸೇರಿದ್ದಾರೆ. ಬಳಿಕ, ಪೋಷಕರ ಬಳಿ ತನ್ನ ಮೇಲಾದ ದೌರ್ಜನ್ಯಗಳ ಬಗ್ಗೆ ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ವರದಿ ಓದಿದ್ದೀರಾ?: ಅನಂತ್ ಅಂಬಾನಿಯ ಪಾದಯಾತ್ರೆ ಪ್ರಹಸನಕ್ಕೆ ಸನಾತನ ಧರ್ಮವೇ ಸರಕು!

ಪೋಷಕರು ಆಕೆಯನ್ನು ಪಾಂಡೇಪುರ ಲಾಲ್ಪುರ ಪೊಲೀಸ್‌ ಠಾಣೆಗೆ ಕರೆದೊಯ್ದು ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯು ತನ್ನ ದೂರಿನಲ್ಲಿ 23 ಕಾಮುಕರ ಪೈಕಿ 12 ಮಂದಿಯ ಹೆಸರನ್ನು ಉಲ್ಲೇಖಿಸಿದ್ದಾರೆ. ಉಲ್ಲೇಖಿತ 12 ಆರೋಪಿಗಳು ಮತ್ತು 11 ಮಂದಿ ಅನಾಮಧೇಯ ಆರೋಪಿಗಳ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 70(1), 74, 123, 126(2), 127(2), ಮತ್ತು 351(2) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂತ್ರಸ್ತೆ ನೀಡಿನ ಮಾಹಿತಿ ಆಧಾರದ ಮೇಲೆ ಕೆಫೆ, ಹೋಟೆಲ್‌ ಹಾಗೂ ಗೋಡೌನ್‌ಗಳ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಮಾಹಿತಿ ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಈವರೆಗೆ, 9 ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ವಾರಣಾಸಿ ಡಿಸಿಪಿ ಚಂದ್ರಕಾಂತ್ ಮಿನಾ, “ಈವರೆಗೆ 9 ಆರೋಪಿಗಳನ್ನು ಬಂಧಿಸಲಾಗಿದೆ.. ಇತರ ಆರೋಪಿಗಳ ಬಂಧನಕ್ಕಾಗಿ ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...