ಬಾಲಿವುಡ್‌ನ ಹಿರಿಯ ನಟಿ ಕಾಮಿನಿ ಕೌಶಲ್ ನಿಧನ

Date:

ಹಿರಿಯ ನಟಿ ಕಾಮಿನಿ ಕೌಶಲ್ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು. “ಗುರುವಾರ ತಡರಾತ್ರಿ ಕಾಮಿನಿ ಅವರು ತಮ್ಮ ಮುಂಬೈನ ಮನೆಯಲ್ಲಿ ನಿಧನರಾದರು. ಫೆಬ್ರವರಿಯಲ್ಲಿ ಅವರಿಗೆ 99 ವರ್ಷ ವಯಸ್ಸಾಗುತ್ತಿತ್ತು” ಎಂದು ಅವರ ಕುಟುಂಬದ ಆಪ್ತ ಸ್ನೇಹಿತ ಸಜನ್ ನರೈನ್ ತಿಳಿಸಿದ್ದಾರೆ.

ಸುಮಾರು ಏಳು ದಶಕಗಳ ಕಾಲ ಸಿನಿಮಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ್ದ ಕಾಮಿನಿ ಕೌಶಲ್ ಅವರು, ರಲ್ಲಿ ಒಬ್ಬರಾಗಿದ್ದಾರೆ. 1940ರಿಂದ 2010ರವರೆಗೆ ಸಿನಿಮಾ ಮತ್ತು ಟಿವಿ ಕಾರ್ಯಕ್ರಮ- ಎರಡರಲ್ಲೂ ಕಾಣಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಬಾಲಿವುಡ್‌ನ ಹಿರಿಯ ನಟ ಗೋವರ್ಧನ ಅಸ್ರಾನಿ ನಿಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇನ್ಸ್ ಚಲನಚಿತ್ರೋತ್ಸವದಲ್ಲಿ ಪಾಲ್ಮೆ ಡಿ ಓರ್ ಪ್ರಶಸ್ತಿ ಪಡೆದ ‘ನೀಚಾ ನಗರ್’ (1946) ಸಿನಿಮಾದ ಮೂಲಕ ವೃತ್ತಿಜೀವನ ಆರಂಭಿಸಿದ ಕೌಶಲ್ ಅವರ ಬಿರಾಜ್ ಬಹು ಸಿನಿಮಾದ ಪಾತ್ರಕ್ಕಾಗಿ 1956ರಲ್ಲಿ ಫಿಲ್ಮ್‌ಫೇರ್ ಪ್ರಶಸ್ತಿ ಲಭಿಸಿದೆ. ಪರಾಸ್ (1949), ಅರ್ಜೂ (1950), ಜೈಲರ್ (1958), ಮತ್ತು ಗೋದಾನ್ (1963) ಸೇರಿದಂತೆ ಹಲವು ಪ್ರಸಿದ್ಧ ಹಿಂದಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶಹೀದ್, ಉಪಕರ್, ಮತ್ತು ಪುರಬ್ ಔರ್ ಪಶ್ಚಿಮ್‌ನಂತಹ ನಂತಹ ಮನೋಜ್ ಕುಮಾರ್ ಅವರ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ.

ಚೆನ್ನೈ ಎಕ್ಸ್‌ಪ್ರೆಸ್ (2013) ಮತ್ತು ಕಬೀರ್ ಸಿಂಗ್ (2019) ನಂತಹ ಪ್ರಮುಖ ವಾಣಿಜ್ಯ ಚಿತ್ರಗಳಲ್ಲೂ ಬಣ್ಣ ಹಚ್ಚಿದ್ದಾರೆ. ಕಬೀರ್ ಸಿಂಗ್ ಸಿನಿಮಾದಲ್ಲಿ ಕಾಮಿನಿ ನಟನೆಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಲಭಿಸಿದೆ. 2015ರಲ್ಲಿ ಅವರಿಗೆ ಫಿಲ್ಮ್‌ಫೇರ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 2022ರಲ್ಲಿ ಆಮಿರ್ ಖಾನ್ ಮತ್ತು ಕರೀನಾ ಕಪೂರ್ ನಟನೆಯ ಲಾಲ್ ಸಿಂಗ್ ಚಡ್ಡಾ ಚಿತ್ರದಲ್ಲಿ ಕಾಮಿನಿ ಕಾಣಿಸಿಕೊಂಡಿದ್ದು, ಅದು ಅವರ ಕೊನೆಯ ಸಿನಿಮಾವಾಗಿದೆ. ಕಾಮಿನಿ ಕೌಶಲ್ ಅವರು ತಮ್ಮ ಪುತ್ರರಾದ ಶ್ರವಣ್, ವಿದುರ್ ಮತ್ತು ರಾಹುಲ್ ಸೂದ್ ಅವರನ್ನು ಅಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...