ಕಾರ್ಮಿಕ ಸಂಘಟನೆ ಮುಖಂಡ, ಸಿಪಿಐಎಂ ನಾಯಕ ಶತಾಯುಷಿ ಚಂದ್ರಶೇಖರ್ ಬಸು ನಿಧನ

Date:

ರಾಷ್ಟ್ರೀಯ ಕಾರ್ಮಿಕ ಸಂಘಟನೆ ಹಿರಿಯ ಮುಖಂಡ ಹಾಗೂ ಸಿಪಿಐಎಂ ಪಕ್ಷದ ಹಿರಿಯ ಸದಸ್ಯ ಚಂದ್ರಶೇಖರ್ ಬಸು ಶುಕ್ರವಾರ ನಿಧನರಾದರು.

ಕೋಲ್ಕತ್ತದ ಬಿಧಾನ್‌ನಗರದಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ ನಿಧನರಾದರು ಎಂದು ಸಿಪಿಐಎಂ ಪಕ್ಷದ ಮೂಲಗಳು ತಿಳಿಸಿವೆ. ಶತಾಯುಷಿಯಾಗಿದ್ದ ಚಂದ್ರಶೇಖರ್ ಬಸು ಅವರು ಪುತ್ರ, ಸೊಸೆ ಹಾಗೂ ಮೊಮ್ಮಗನನ್ನು ಅಗಲಿದ್ದಾರೆ.

ಕಲ್ಕತ್ತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದ ಅವರು ಎಡಪಂಥೀಯ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. 1944ರಲ್ಲಿ ಹಿಂದೂಸ್ತಾನ್ ವಿಮಾ ಕಂಪನಿಯಲ್ಲಿ ಕೆಲಸಕ್ಕೆ ಸೇರಿದರು. ನಂತರ ಅಖಿಲ ಭಾರತ ವಿಮಾ ಉದ್ಯೋಗಿಗಳ ಸಂಘಟನೆಯ ಸದಸ್ಯತ್ವ ಪಡೆದು ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಅವರು ಸಿಪಿಐ (ಅವಿಭಜಿತ) ಪಕ್ಷದ ಸದಸ್ಯರಾಗಿ ಜೀವನಪೂರ್ತಿ ಆ ಸದಸ್ಯತ್ವವನ್ನು ಉಳಿಸಿಕೊಂಡಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳೆಯರ ಮೇಲಿನ ʼಪುರುಷಹಂಕಾರʼದ ದೌರ್ಜನ್ಯಕ್ಕೆ ಕೊನೆ ಎಂದು?

ವಿಮಾ ಕ್ಷೇತ್ರದ ರಾಷ್ಟ್ರೀಕರಣ ಸೇರಿ ಅಖಿಲ ಭಾರತ ಮಟ್ಟದಲ್ಲಿ ವಿಮಾ ಉದ್ಯೋಗಿಗಳನ್ನು ಸಂಘಟಿಸುವಲ್ಲಿ ಬಸು ಅವರು ಮಹತ್ವದ ಪಾತ್ರ ವಹಿಸಿದ್ದರು. ಹತ್ತು ದಿನಗಳ ಹಿಂದಷ್ಟೆ ಭುವನೇಶ್ವರದಲ್ಲಿ ನಡೆದ ಅಖಿಲ ಭಾರತ ವಿಮಾ ಉದ್ಯೋಗಿಗಳ ಸಮ್ಮೇಳನದಲ್ಲಿ ಎರಡು ದಿನಗಳ ಕಾಲ ಪ್ರತಿನಿಧಿಗಳನ್ನು ಉದ್ದೇಶಿಸಿ ಭಾಷಣ ಮಾಡಿದ್ದರು.

ಎಡಪಕ್ಷಗಳ ನಾಯಕ ಅಧ್ಯಕ್ಷ ಬಿಮಾನ್ ಬೋಸ್ ಹಾಗೂ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ಅವರು ಬಸು ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಖಿಲ ಭಾರತ ವಿಮಾ ಉದ್ಯೋಗಿಗಳ ಸಂಘ (ಎಐಐಇಎ)ದ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಮಿಶ್ರಾ ಕೂಡ ಗೌರವ ನಮನ ಸಲ್ಲಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...