14 ವರ್ಷದ ಬಾಲಕಿಗೆ ಬೆಂಗಳೂರಿನಲ್ಲಿ ಬಲವಂತದ ವಿವಾಹ; ಬೇಡವೆಂದು ಕಣ್ಣೀರಿಟ್ಟರೂ ಮದುವೆ ಮಾಡಿಸಿದ ಪೋಷಕರು

Date:

ತಮಿಳುನಾಡು ಹೊಸೂರು ಮೂಲದ ಹದಿನಾಲ್ಕು ವರ್ಷದ ಬಾಲಕಿಯನ್ನು ಬಲವಂತವಾಗಿ ಮದುವೆ ಮಾಡಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಬಾಲಕಿಯ ಪೋಷಕರು ಸೇರಿ ನಾಲ್ವರನ್ನು ಬಂಧಿಸಲಾಗಿದೆ.

ವೈರಲ್‌ ಆದ ದೃಶ್ಯದಲ್ಲಿ ಯುವಕನೊಬ್ಬ ಬಾಲಕಿಯನ್ನು ಅಕ್ಷರಶಃ ಎತ್ತಿಕೊಂಡು ಹೋಗುತ್ತಿದ್ದರೆ, ಮತ್ತೊಬ್ಬ ಪುರುಷ ಹಾಗೂ ಮಹಿಳೆ ಆತನ ಹಿಂದೆಯೇ ಹೋದರು. ಯಾರೂ ಬಾಲಕಿಯ ರಕ್ಷಣೆಗೆ ಮುಂದಾಗದೇ ಹದಿನಾಲ್ಕು ವರ್ಷದ ಬಾಲಕಿಯ ಅಳು ಹಾಗೂ ಚೀರಾಟ ಅರಣ್ಯರೋಧನವಾಯಿತು. ಕರ್ನಾಟಕದ ಹೊಸೂರಿನ ಈ ವಿಡಿಯೋ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ತಮಿಳುನಾಡು ಗಡಿಭಾಗ ಹೊಸೂರಿನ ಸಮೀಪದ ತೊಟ್ಟಮಂಜು ಪರ್ವತ ಪ್ರದೇಶದಲ್ಲಿರುವ ತಿಮ್ಮತ್ತೂರು ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಶಾಲೆಯಲ್ಲಿ ಏಳನೇ ತರಗತಿವರೆಗೆ ಓದಿದ 14 ವರ್ಷದ ಬಾಲಕಿ ಮನೆಯಲ್ಲೇ ಉಳಿದಿದ್ದಳು. ಆದರೆ ಮಾರ್ಚ್ 3ರಂದು ಕರ್ನಾಟಕದ ಕಲಿಕುಟ್ಟೈ ಗ್ರಾಮದ ಮಾದೇಶ ಎಂಬ 29 ವರ್ಷ ವಯಸ್ಸಿನ ಕೂಲಿಕಾರ್ಮಿಕನಿಗೆ ಈಕೆಯನ್ನು ವಿವಾಹ ಮಾಡಿಕೊಡಲಾಗಿತ್ತು. ಆಕೆಯ ಪ್ರತಿರೋಧವನ್ನು ಯಾರೂ ಲೆಕ್ಕಿಸಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಪಿಎಸ್‌ಸಿ ಕೆಡಿಸಿದ್ದಾಯಿತು, ಸರಿಪಡಿಸುವವರಾರು?

ಬೆಂಗಳೂರಿನಲ್ಲಿ ಈ ವಿವಾಹ ನಡೆದಿತ್ತು. ಹುಟ್ಟೂರು ತಿಮ್ಮತ್ತೂರಿಗೆ ಮರಳಿದ ಬಳಿಕ ಬಾಲಕಿ ಈ ಮದುವೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ, ಗಂಡನಮನೆಗೆ ಹೋಗಲು ನಿರಾಕರಿಸಿದ್ದಳು. ಪೋಷಕರು ಮತ್ತು ಸಂಬಂಧಿಕರಲ್ಲೂ ತನ್ನ ಪ್ರತಿರೋಧವನ್ನು ವ್ಯಕ್ತಪಡಿಸಿದ್ದಳು.

ಆದರೆ ಯಾರೂ ಆಕೆಯ ಪ್ರತಿಭಟನೆಯನ್ನು ಪರಿಗಣಿಸಲಿಲ್ಲ. ಮಾದೇಶ್ ಹಾಗೂ ಆತನ ಅಣ್ಣ ಮಲ್ಲೇಶ್ ಬಲವಂತವಾಗಿ ಕಲಿಕುಟ್ಟೈ ಗ್ರಾಮದಲ್ಲಿರುವ ಬಾಲಕಿಯ ಸಂಬಂಧಿಕರ ಮನೆಯಿಂದ ಆಕೆಯನ್ನು ಎತ್ತಿಕೊಂಡು ಹೋಗಿದ್ದರು. ಇದನ್ನು ನೋಡಿದ ಸ್ಥಳೀಯರು ಮೊಬೈಲ್‌ಗಳಲ್ಲಿ ವಿಡಿಯೋ ಚಿತ್ರೀಕರಿಸಿ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು, ಇದು ವೈರಲ್ ಆಗಿದೆ. ಬಾಲಕಿಯ ಅಜ್ಜಿ ಈ ಬಗ್ಗೆ ಅಧಿಕೃತ ದೂರು ನೀಡಿದ್ದು, ದೆಂಕನಿಕೊಟ್ಟೈ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಬುಧವಾರ ಪೊಲೀಸರು ಮಾದೇಶ, ಆತನ ಅಣ್ಣ ಮಲ್ಲೇಶ, ಬಾಲಕಿಯ ತಾಯಿ ನಾಗಮ್ಮ ಅವರನ್ನು ಬಂಧಿಸಿದ್ದಾರೆ. ಗುರುವಾರ ನಸುಕಿನಲ್ಲಿ ಬಾಲಕಿಯ ತಂದೆ ಹಾಗೂ ಮಲ್ಲೇಶನ ಪತ್ನಿಯನ್ನು ಬಂಧಿಸಲಾಗಿದೆ. ಪೋಕ್ಸೋ ಕಾಯ್ದೆಯಡಿ ಮತ್ತು ಅಪಹರಣ ಪ್ರಕರಣವನ್ನು ಆರೋಪಿಗಳ ವಿರುದ್ಧ ದಾಖಲಿಸಲಾಗಿದೆ. ಬಾಲಕಿ ಇದೀಗ ಅಜ್ಜಿ-ಅಜ್ಜನ ಜತೆ ವಾಸವಿದ್ದಾಳೆ.

https://twitter.com/i/status/1897501392723714426
https://twitter.com/polimernews/status/1897501392723714426?ref_src=twsrc%5Etfw%7Ctwcamp%5Etweetembed%7Ctwterm%5E1897501392723714426%7Ctwgr%5E5336b968c41244477a2e798d23898f34a1dc862c%7Ctwcon%5Es1_&ref_url=https%3A%2F%2Fadmin.varthabharati.in%2Fmain.jsp
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...