ಅತ್ಯಾಚಾರ ಆರೋಪಿಗೆ ಮಹಿಳೆಯರು ಥಳಿಸಿದ್ದಾರೆಂದು ವಿಡಿಯೋ ವೈರಲ್; ಅಸಲಿಯತ್ತೇ ಬೇರೆ!

Date:

ಓರ್ವ ಪುರುಷನನನ್ನು ಹಲವಾರು ಮಹಿಳೆಯರು ಕಲ್ಲು, ಕೋಲು, ದೊಣ್ಣೆಗಳಿಂದ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯ ಮೇಲೆ ಮಹಿಳೆಯರು ಹಲ್ಲೆ ನಡೆಸಿದ್ದಾರೆ ಎಂದು ವಿಡಿಯೋ ಜೊತೆಗೆ ಪೋಸ್ಟ್‌ ಮಾಡಲಾಗುತ್ತಿದೆ. ಆದರೆ, ವಿಡಿಯೋದ ಅಸಲಿಯತ್ತು ಬೇರೆ ಇದ್ದು, ಆತ ಅತ್ಯಾಚಾರ ಆರೋಪಿಯಲ್ಲ ಎಂಬುದು ತಿಳಿದುಬಂದಿದೆ. ಮಾತ್ರವಲ್ಲದೆ, ಆ ವಿಡಿಯೋ ಸುಮಾರು 5 ವರ್ಷ ಹಳೆಯದ್ದು ಎಂದು ವರದಿಯಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ; ಮೊದಲಿಗೆ, ಓರ್ವ ಪುರುಷ ಮಹಿಳೆಯನ್ನು ತಳ್ಳುವುದು ಕಂಡುಬರುತ್ತದೆ. ಬಳಿಕ, ಹಲವಾರು ಮಹಿಳೆಯರು ಆತನ ಮೇಲೆ ಕಲ್ಲು ಮತ್ತು ಕೋಲುಗಳಿಂದ ಹೊಡೆಯುತ್ತಿರುವುದು ಕಾಣಿಸುತ್ತದೆ.

ಆರೋಪ

ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವವರು ಥಳಿತಕ್ಕೊಳಗಾದ ವ್ಯಕ್ತಿ ಅತ್ಯಾಚಾರ ಆರೋಪಿಯಾಗಿದ್ದಾನೆ. ಆತ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದನೆಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ವೈರಲ್ ಆದ ವಿಡಿಯೋ ಬಗ್ಗೆ ‘ಇಂಡಿಯಾ ಟುಡೆ’ ಸುದ್ದಿ ಸಂಸ್ಥೆಯು ‘ಫ್ಯಾಕ್ಟ್‌ಚೆಕ್‌ ನಡೆಸಿದೆ. ವೈರಲ್ ಆಗಿರುವ ವಿಡಿಯೋ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಸರ್ವಾಲಾ ಗ್ರಾಮದಲ್ಲಿ ನಡದಿರುವ ಘಟನೆಯದ್ದಾಗಿದೆ. ಈ ಘಟನೆಯು ಸುಮಾರು 5 ವರ್ಷ ಹಳೆಯದು. ಅಲ್ಲದೆ, ವಿಡಿಯೋದಲ್ಲಿ ಥಳಿತಕ್ಕೊಳಗಾಗಿರುವ ವ್ಯಕ್ತಿ ಅತ್ಯಾಚಾರ ಆರೋಪಿಯಲ್ಲ. ಈ ಘಟನೆಯು ಭೂವಿವಾದಕ್ಕೆ ಸಂಬಂಧಿಸಿದಂತೆ ನಡೆದಿದೆ ಎಂಬುದು ಕಂಡುಹಿಡಿದಿದೆ.

image 56

ಮೊದಲಿಗೆ ಈ ವಿಡಿಯೋ, 2021ರ ಫೆಬ್ರವರಿ 19ರಂದು ‘ಹಿಮಾಚಲ ಅಭಿ ಅಭಿ’ ಎಂಬ ವೆಬ್‌ಸೈಟ್‌ನಲ್ಲಿ ಪ್ರಕಟವಾಗಿದೆ. ಅದರ ವರದಿಯ ಪ್ರಕಾರ, 2021ರ ಫೆಬ್ರವರಿ 17ರಂದು ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದ ವಿವಾದಿಂದ ಜಗಳ ಸೃಷ್ಟಿಯಾಗಿದೆ. ಆದರೆ, ರಸ್ತೆ ಅಗಲೀಕರಣಕ್ಕೆ ರಸ್ತೆ ಬದಿಯ ಭೂಮಿ ಮಾಲೀಕ (ವಿಡಿಯೋದಲ್ಲಿರುವ ವ್ಯಕ್ತಿ) ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಗಾದೆ ತೆಗೆದಿದ್ದಾರೆ. ಆಗ ಎದುರಾಳಿಗಳು ಮಹಿಳಾ ಮಂಡಲದ ಸದಸ್ಯೆಯನ್ನು ಮುಂದೆ ಬಿಟ್ಟು, ವ್ಯಕ್ತಿಯ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ವಿಡಿಯೋ 2023ರಲ್ಲಿಯೂ ಥಳಿತಕ್ಕೊಳಗಾದ ವ್ಯಕ್ತಿಯ ವಿರುದ್ಧ ಅತ್ಯಾಚಾರದ ಆರೋಪದೊಂದಿಗೆ ವೈರಲ್ ಆಗಿತ್ತು. 2023ರಲ್ಲಿ ವಿಡಿಯೋ ಕುರಿತು ಪ್ರತಿಕ್ರಿಯಿಸಿದ್ದ ಮಂಡಿ ಜಿಲ್ಲೆಯ ಹೆಚ್ಚುವರಿ ಉಪ ಆಯುಕ್ತೆ ನಿವೇದಿತಾ ನೇಗಿ ಅವರು, “ಈ ವೀಡಿಯೊ ಯಾವುದೇ ಅತ್ಯಾಚಾರ ಘಟನೆಗೆ ಸಂಬಂಧಿಸಿಲ್ಲ” ಎಂದು ಹೇಳಿದ್ದರು. ಮಾತ್ರವಲ್ಲದೆ, ಸರ್ವಾಲಾ ಗ್ರಾಮವು ಒಳಪಡುವ ಧನ್ಯಾರ ಗ್ರಾಮ ಪಂಚಾಯತಿಯ ಸರಪಂಚ್ ಕುಸ್ಮಾ ಕುಮಾರಿ ಅವರು ಕೂಡ. ‘ವಿಡಿಯೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ. ಭೂ ವಿವಾದಕ್ಕೆ ಸಂಬಂಧಿಸಿದ್ದಾಗಿದೆ’ ಎಂದು ಸ್ಪಷ್ಟಪಡಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...