ಟಿವಿಕೆ (ತಮಿಳಗಾ ವೆಟ್ರಿ ಕಾಳಗಂ) ಪಕ್ಷದ ಸಂಸ್ಥಾಪಕ ನಟ ವಿಜಯ್ 2026ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಘೋಷಿಸಲಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕಾರಿ ಸಮಿತಿಯು ವಿಶೇಷ ನಿರ್ಣಯವನ್ನು ಅಂಗೀಕರಿಸಿತು. ಇದೇ ಸಂದರ್ಭದಲ್ಲಿ ಮುಂದಿನ ತಿಂಗಳಲ್ಲಿ ಬೃಹತ್ ಮಟ್ಟದಲ್ಲಿ ರಾಜ್ಯ ಸಮಾವೇಶವನ್ನು ನಡೆಸುವುದಾಗಿ ಪಕ್ಷವು ಉದ್ದೇಶಿಸಿತು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಸೈಬರ್ ಅಪರಾಧ ಕುರಿತು ಜನ ಜಾಗೃತರಾಗಬೇಕಿದೆ
ಗ್ರಾಮಗಳಲ್ಲಿ ಕೈಗೊಳ್ಳುವ ಸಾರ್ವಜನಿಕ ಸಭೆಗಳಲ್ಲಿ ಪಕ್ಷದ ಸಿದ್ಧಾಂತವನ್ನು ತಿಳಿಸಲು ಪಕ್ಷವು ಇದೇ ಸಂದರ್ಭದಲ್ಲಿ ನಿರ್ಧರಿಸಿತು.
ಸಭೆಯಲ್ಲಿ ಮಾತನಾಡಿದ ವಿಜಯ್, ಸೈದ್ಧಾಂತಿಕ ಶತ್ರು ಹಾಗೂ ಪ್ರತ್ಯೇಕವಾದಿಗಳ ಜೊತೆ ಯಾವುದೇ ರೀತಿಯ ಪ್ರತ್ಯಕ್ಷ ಅಥವಾ ಪರೋಕ್ಷ ಮೈತ್ರಿ ಮಾಡಿಕೊಳ್ಳುವುದಿಲ್ಲ. ಬಿಜೆಪಿಯು ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಜನರ ನಡುವೆ ಒಡಕನ್ನು ತಂದು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತದೆ. ಈ ರೀತಿಯ ವಿಷಕಾರಿ ಪ್ರಯತ್ನಗಳು ಬೇರೆ ಕಡೆ ನಡೆಯಬಹುದು ಆದರೆ ತಮಿಳುನಾಡಿನಲ್ಲಿ ನಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು





