ಸಾಲಕ್ಕಿಂತ ಹೆಚ್ಚು ಹಣ ವಸೂಲಿ: ಹೈಕೋರ್ಟ್ ಮೊರೆ ಹೋದ ವಿಜಯ್ ಮಲ್ಯ

Date:

ಅಪರಾಧಿಯಾಗಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಬ್ಯಾಂಕ್‌ಗಳಿಗಿಂತ ಸಾಲ ವಸೂಲಾತಿ ಖಾತೆಗಳ ಲೆಕ್ಕ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮಲ್ಯ ಪರವಾಗಿ ಹಿರಿಯ ವಕೀಲ ಸಾಜನ್ ಪೂವಯ್ಯ ವಾದ ಮಂಡಿಸಿದ್ದಾರೆ. ಮಲ್ಯ ಪರ ವಕೀಲರ ಪ್ರಕಾರ 6,200 ಕೋಟಿ ರೂ. ಮರುಪಾವತಿಯಾಗಬೇಕಿತ್ತು, ಆದರೆ 14,000 ಕೋಟಿ ರೂ.ವಸೂಲಿ ಮಾಡಲಾಗಿದೆ. ಇದನ್ನು ಲೋಕಸಭೆಗೆ ಹಣಕಾಸು ಸಚಿವರು ತಿಳಿಸಿದ್ದಾರೆ ಎಂದು ಮಲ್ಯ ಪರ ವಕೀಲರು ಹೇಳಿದ್ದಾರೆ.

10,200 ಕೋಟಿ ವಸೂಲಿಯಾಗಿದೆ ಎಂದು ಸಾಲ ವಸೂಲಾತಿ ಅಧಿಕಾರಿ ಹೇಳಿಕೆ ನೀಡಿದ್ದಾರೆ ಎಂದು ಮಲ್ಯ ಪರ ವಕೀಲರು ವಾದಿಸಿದ್ದಾರೆ. ಸಂಪೂರ್ಣ ಸಾಲದ ಮೊತ್ತವನ್ನು ತೆರವುಗೊಳಿಸಲಾಗಿದ್ದರೂ, ಪ್ರಕ್ರಿಯೆಯು ಇನ್ನೂ ಮುಂದುವರೆದಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿದ್ರಿಸುವ ಸಚಿವರು, ಪ್ರಶ್ನಿಸದ ಸಂಸದರು- ಕರ್ನಾಟಕದ ಹಿತ ಕಾಪಾಡುವವರು ಯಾರು?

ವಸೂಲಾದ ಸಾಲದ ಮೊತ್ತದ ವಿವರ ನೀಡುವಂತೆ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ. ಮಲ್ಯ ಅವರ ಅರ್ಜಿಯನ್ನು ಆಧರಿಸಿ ನ್ಯಾಯಮೂರ್ತಿ ಆರ್. ದೇವದಾಸ್ ನೇತೃತ್ವದ ಹೈಕೋರ್ಟ್ ಪೀಠವು ಬ್ಯಾಂಕ್‌ಗಳು ಮತ್ತು ಸಾಲ ವಸೂಲಾತಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಈ ಹಿಂದೆ 2024, ಡಿಸೆಂಬರ್ 18 ರಂದುವಿಜಯ್ ಮಲ್ಯ ಅವರು 6203 ಕೋಟಿ ರೂ. ಸಾಲದ ವಿರುದ್ಧ ಬ್ಯಾಂಕ್‌ಗಳು 14,131.60 ಕೋಟಿ ರೂ.ಗಳನ್ನು ವಸೂಲಿ ಮಾಡಿದ್ದಾರೆ ಎಂದು ಹೇಳಿದ್ದರು. ಈಗಲೂ ಅವರು ಆರ್ಥಿಕ ಅಪರಾಧಿಯಾಗಿಯೇ ಮುಂದುವರೆದಿದ್ದಾರೆ.

ಚೆನ್ನೈನ ಸಾಲ ವಸೂಲಾತಿ ನ್ಯಾಯಮಂಡಳಿಯ ವಸೂಲಾತಿ ಅಧಿಕಾರಿಗಳು, ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಬ್ಯಾಂಕ್‌ ಆಫ್‌ ಬರೋಡಾ, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ, ದಿ ಫೆಡರಲ್‌ ಬ್ಯಾಂಕ್‌ ಲಿಮಿಟೆಡ್‌, ಐಡಿಬಿಐ ಬ್ಯಾಂಕ್‌ ಲಿಮಿಟೆಡ್‌, ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌, ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್‌ ಲಿಮಿಟೆಡ್‌, ಪಂಜಾಬ್‌ ಮತ್ತು ಸಿಂದ್‌ ಬ್ಯಾಂಕ್‌, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌, ಯುಕೊ ಬ್ಯಾಂಕ್‌, ಜೆ ಎಂ ಫೈನಾನ್ಶಿಯಲ್‌ ಅಸೆಟ್‌ ರಿಕನಸ್ಟ್ರಕ್ಷನ್‌ ಕಂಪನಿ ಪ್ರೈ.ಲಿ., ಯುಬಿಎಚ್‌ಎಲ್‌ನ ಅಧಿಕೃತ ಲಿಕ್ವಿಡೇಟರ್‌ಗೆ ತುರ್ತು ನೋಟಿಸ್‌ ಜಾರಿ ಮಾಡಿರುವ ನ್ಯಾಯಾಲಯವು ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...