ತಮಿಳುನಾಡು ಚುನಾವಣೆ | ಮಹಿಳಾ ದಿನಾಚರಣೆ ದಿನ ಚುನಾವಣಾ ಭರವಸೆಗಳನ್ನು ಪ್ರಕಟಿಸಲಿರುವ ವಿಜಯ್

Date:

ಮಹಿಳಾ ದಿನಾಚರಣೆ ಹಿನ್ನೆಲೆ ತಮಿಳುನಾಡಿನ ಮಾಮಲ್ಲಪುರಂನಲ್ಲಿ ಶನಿವಾರ ಟಿವಿಕೆಯ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿಯೇ ನಟ-ರಾಜಕಾರಣಿ ವಿಜಯ್, ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಭರವಸೆಗಳನ್ನು ಪ್ರಕಟಿಸಲಿದ್ದಾರೆ. ಅಲ್ಲದೆ, ಟಿವಿಕೆ ಮಾರ್ಚ್ 8ರಂದು ಪಕ್ಷದ ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ದಿನವನ್ನು ಆಚರಿಸಲಿದೆ.

ಮಹಿಳಾ ದಿನಾಚರಣೆಯಂದೇ ಈ ಘೋಷಣೆಗಳನ್ನು ಮಾಡಲಿರುವ ಕಾರಣ ವಿಜಯ್ ಮಹಿಳೆಯರಿಗಾಗಿ ಪ್ರಮುಖ ಕಲ್ಯಾಣ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ. ಮಾಮಲ್ಲಪುರಂನ ಹೋಟೆಲ್‌ನಲ್ಲಿ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ತಮಿಳುನಾಡು ಚುನಾವಣೆ | ವಿಜಯ್‌ಗೆ ಸಾಲುಗಟ್ಟಿವೆ ಸಂಕಷ್ಟಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾರ್ಯಕ್ರಮಕ್ಕೆ ಪ್ರವೇಶವು QR-ಕೋಡ್ ಪಾಸ್‌ಗಳ ಮೂಲಕ ಮಾತ್ರ ಇರುತ್ತದೆ ಎಂದು ತಮಿಳಗಾ ವೆಟ್ರಿ ಕಳಗಂನ (ಟಿವಿಕೆ) ಪ್ರಧಾನ ಕಾರ್ಯದರ್ಶಿ ಎನ್ ಆನಂದ್ ಮಾರ್ಚ್‌ 6ರಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ QR ಕೋಡ್ ಹೊಂದಿರುವ ಪ್ರವೇಶ ಪಾಸ್‌ಗಳನ್ನು ನೀಡಲಾಗಿದೆ. ಅವರನ್ನು ಹೊರತುಪಡಿಸಿ, ಬೇರೆ ಯಾರಿಗೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ” ಎಂದು ಟಿವಿಕೆ ಹೇಳಿಕೆಯಲ್ಲಿ ಮಾಹಿತಿ ನೀಡಿದೆ.

ನಟ ವಿಜಯ್ ನೇತೃತ್ವದ ಟಿವಿಕೆ ಈಗಾಗಲೇ ತಮಿಳುನಾಡು ವಿಧಾನಸಭಾ ಚುನಾವಣೆಗೆ ಭರ್ಜರಿ ಪ್ರಚಾರ, ತಯಾರಿಯನ್ನು ನಡೆಸುತ್ತಿದೆ. ಚುನಾವಣಾ ಪ್ರಚಾರ ಚಟುವಟಿಕೆಗಳನ್ನು ಮುನ್ನಡೆಸಲು 10 ಸದಸ್ಯರ ವಿಶೇಷ ಸಮಿತಿಯನ್ನು ಟಿವಿಕೆ ರಚಿಸಿದೆ. ಈ ಚುನಾವಣೆಯು ಮುಖ್ಯವಾಗಿ ತಮ್ಮ ಪಕ್ಷ ಮತ್ತು ಆಡಳಿತಾರೂಢ ಡಿಎಂಕೆ ನಡುವಿನ ನೇರ ಸ್ಪರ್ಧೆಯಾಗಲಿದೆ ಎಂದು ವಿಜಯ್ ಘೋಷಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...