ಮಣಿಪುರ ಹಿಂಸಾಚಾರ| ಸಶಸ್ತ್ರ ಗುಂಪುಗಳ ನಡುವೆ ಗುಂಡಿನ ಚಕಮಕಿ: ಇಬ್ಬರ ಹತ್ಯೆ

Date:

ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಶನಿವಾರ ಎರಡು ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಕಾಂಗ್‌ಪೊಕ್ಪಿ ಜಿಲ್ಲೆಯ ಗಡಿಗೆ ಸಮೀಪವಿರುವ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ರಾಜ್ಯ ಮತ್ತು ಕೇಂದ್ರ ಪಡೆಗಳು ಧಾವಿಸಿದೆ ಎಂದು ಹೇಳಿದರು.

ತೆಂಗ್ನೌಪಾಲ್ ಜಿಲ್ಲೆಯಲ್ಲಿ ಸಶಸ್ತ್ರ ಗ್ರಾಮ ಸ್ವಯಂಸೇವಕರು ಮತ್ತು ಅಪರಿಚಿತ ಬಂದೂಕುಧಾರಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಗಾಯಗೊಂಡ ಒಂದು ದಿನದ ನಂತರ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ಲೋಕಸಭೆ ಚುನಾವಣೆ| ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಇಬ್ಬರಿಗೆ ಗಾಯ

ಕಳೆದ ವರ್ಷ ಮೇ 3 ರಂದು ಮಣಿಪುರದಲ್ಲಿ ನಡೆದ ಜನಾಂಗೀಯ ಘರ್ಷಣೆ ಆರಂಭವಾಗಿದ್ದು ಕನಿಷ್ಠ 219 ಜನರು ಸಾವನ್ನಪ್ಪಿದ್ದಾತರೆ. ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತಿ ಸಮುದಾಯದ ಬೇಡಿಕೆಯನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದ್ದು ಈ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ಮಣಿಪುರದಲ್ಲಿ ಹಿಂಸಾಚಾರ ಕಡಿಮೆಯಾಗಿತ್ತು. ಆದರೆ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದೆ.

ಮಣಿಪುರದ ಜನಸಂಖ್ಯೆಯ ಶೇಕಡ 53ರಷ್ಟಿರುವ ಮೈತಿಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದವರಾದ ನಾಗಾಗಳು ಮತ್ತು ಕುಕಿಗಳು ಶೇಕಡಾ 40ರಷ್ಟಿದ್ದಾರೆ.

ಹಿಂಸಾಚಾರದಲ್ಲಿ ತಮ್ಮ ಮನೆಗಳನ್ನು ಕಳೆದುಕೊಂಡ 50 ಸಾವಿರಕ್ಕೂ ಅಧಿಕ ಜನರು ಪ್ರಸ್ತುತ ನಿರಾಶ್ರಿತ ಶಿಬಿರದಲ್ಲಿದ್ದಾರೆ. ಈ ಶಿಬಿರದಲ್ಲಿಯೇ ಚುನಾವಣೆಯ ತಯಾರಿಯನ್ನು ಚುನಾವಣಾ ಅಧಿಕಾರಿಗಳು ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...