ಲೋಕಸಭೆ ಚುನಾವಣೆ| ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಇಬ್ಬರಿಗೆ ಗಾಯ

Date:

ಸುಮಾರು ಒಂದು ತಿಂಗಳುಗಳ ಕಾಲ ಯಾವುದೇ ಹಿಂಸಾಚಾರ ವರದಿಯಾಗದ ಮಣಿಪುರದಲ್ಲಿ ಈಗ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಶುಕ್ರವಾರ ಎರಡು ಸಶಸ್ತ್ರ ಗುಂಪುಗಳ ನಡುವೆ ಹೊಸ ಗುಂಡಿನ ಚಕಮಕಿ ನಡೆದಿದ್ದು ಕನಿಷ್ಠ ಇಬ್ಬರು ಗಾಯಗೊಂಡಿದ್ದಾರೆ.

ಹೈರೋಕ್ ಪೊಲೀಸ್ ಠಾಣೆಯಿಂದ ಪೂರ್ವಕ್ಕೆ 30 ಕಿಮೀ ದೂರದಲ್ಲಿರುವ ತೆಂಗ್ನೌಪಾಲ್ ಮತ್ತು ಕಾಕ್ಚಿಂಗ್ ಜಿಲ್ಲೆಗಳ ಪಕ್ಕದ ಪ್ರದೇಶಗಳಲ್ಲಿ ಈ ಘಟನೆ ನಡೆದಿದೆ. ಚುನಾವಣಾ ಅಧಿಕಾರಿಗಳು ಮಣಿಪುರದಲ್ಲಿ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ನಡುವೆ ಮತ್ತೆ ಹಿಂಸಾಚಾರ ಹೆಚ್ಚಾಗುವ ಸಾಧ್ಯತೆಯಿದೆ.

ತೆಂಗ್ನೌಪಾಲ್ ಜಿಲ್ಲೆಯು ಝೋ-ಕುಕಿ ಸಮುದಾಯವನ್ನು ಒಳಗೊಂಡಂತೆ ಬುಡಕಟ್ಟು ಸಮುದಾಯದ ಜನಸಂಖ್ಯೆಯನ್ನು ಹೊಂದಿದ್ದು, ಕಾಕ್ಚಿಂಗ್ ಜಿಲ್ಲೆ ಮೈತಿಗಳ ಪ್ರಾಬಲ್ಯವಿರುವ ಕಣಿವೆಯಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಿನ ಜಾವ 1 ಗಂಟೆಯ ಸುಮಾರಿಗೆ, ಬೆಟ್ಟಗಳಿಂದ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಕಣಿವೆ ಪ್ರದೇಶದ ಕಡೆಗೆ ಮನಬಂದಂತೆ ಗುಂಡು ಹಾರಿಸಲು ಪ್ರಾರಂಭಿಸಿದ್ದಾರೆ. ಗ್ರಾಮದ ಸ್ವಯಂಸೇವಕರು ಪ್ರತಿದಾಳಿ ನಡೆಸಿದ್ದಾರೆ.

ಇದನ್ನು ಓದಿದ್ದೀರಾ?  ಮಣಿಪುರ ಹಿಂಚಾಸಾರ| ನಿರಾಶ್ರಿತ ಕೇಂದ್ರಗಳಲ್ಲಿ 180ಕ್ಕೂ ಹೆಚ್ಚು ಶಿಶುಗಳ ಜನನ

ಬೆಳಿಗ್ಗೆ 8 ಗಂಟೆಯವರೆಗೆ ನಡೆದ ಗುಂಡಿನ ದಾಳಿಯಲ್ಲಿ ಗ್ರಾಮದ ಸ್ವಯಂಸೇವಕ, ಹೈರೋಕ್ ಭಾಗ-2 ಲೈಮಾಯುಮ್ ನಿವಾಸಿ ರಾಜೀವ್ ಅವರ ಪುತ್ರ ನಿಂಗ್ಥೌಜಮ್ ಜೇಮ್ಸ್ (24) ಗಾಯಗೊಂಡಿದ್ದಾರೆ. ಅವರನ್ನು ಇಂಫಾಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಂಡಿನ ಚಕಮಕಿಯ ಬಗ್ಗೆ ಮಾಹಿತಿ ಪಡೆದ ನಂತರ, ರಾಜ್ಯ ಪಡೆಗಳ ತಂಡವು ಪಲ್ಲೆಲ್‌ನಿಂದ ಅಸ್ಸಾಂ ರೈಫಲ್ಸ್ ತಂಡವು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತಂದಿದೆ.

ಮಧ್ಯಾಹ್ನ 2.30 ರ ಸುಮಾರಿಗೆ, ಬೆಟ್ಟಗಳು ಮತ್ತು ಕಣಿವೆಯಿಂದ ಎರಡು ಸಶಸ್ತ್ರ ಗುಂಪುಗಳ ನಡುವೆ ಗುಂಡಿನ ದಾಳಿ ಮತ್ತೆ ನಡೆದಿದೆ. ಇದರಿಂದಾಗಿ ಕಣಿವೆಯ ಮತ್ತೊಬ್ಬ ಗ್ರಾಮ ಸ್ವಯಂಸೇವಕನಿಗೆ ಗಾಯವಾಗಿದೆ. ಗಾಯಾಳು ಗುರುತು ಇನ್ನೂ ತಿಳಿದುಬಂದಿಲ್ಲ, ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗುಂಡಿನ ಚಕಮಕಿ ನಡೆಯುತ್ತಿರುವುದರಿಂದ, ಹೆಚ್ಚುವರಿ ಪಡೆಗಳನ್ನು ಪ್ರದೇಶಕ್ಕೆ ಕಳುಹಿಸಲಾಗಿದೆ.

ಇದನ್ನು ಓದಿದ್ದೀರಾ?  ಮತದಾನದ ಹಕ್ಕಿಗೂ ಮೊದಲು ಬದುಕುವ ಹಕ್ಕು ಮುಖ್ಯ: ಮಣಿಪುರದ ಜನರ ಧ್ವನಿ

ಇನ್ನು ಫೆಬ್ರವರಿ ಅಂತ್ಯದಲ್ಲಿ, ಇಂಫಾಲ್ ಪೂರ್ವ ಜಿಲ್ಲಾ ಪೊಲೀಸ್‌ನ ಹೆಚ್ಚುವರಿ ಎಸ್‌ಪಿ ಅವರ ವಾಂಗ್‌ಖೇ ನಿವಾಸದ ಮೇಲೆ ಸಶಸ್ತ್ರ ಗುಂಪುಗಳು ದಾಳಿ ನಡೆಸಿದ್ದವು.

ರಾಜ್ಯದಲ್ಲಿ ಎರಡು ಹಂತಗಳಲ್ಲಿ ಏಪ್ರಿಲ್ 19 ಮತ್ತು 26 ರಂದು ಎರಡು ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಮಣಿಪುರದಲ್ಲಿ ಕಳೆದ ವರ್ಷ ಮೇ ತಿಂಗಳಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದ್ದು, ಈವರೆಗೂ 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ತಮ್ಮ ಮನೆಗಳನ್ನು ಕಳೆದುಕೊಂಡ 50000ಕ್ಕೂ ಅಧಿಕ ಜನರು ನಿರಾಶ್ರಿತ ಕೇಂದ್ರದಲ್ಲಿ ಸದ್ಯ ವಾಸವಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...