ಸಿಐಎಸ್ಎಫ್ ಸಿಬ್ಬಂದಿಯಿಂದ ಬಿಜೆಪಿಯ ನೂತನ ಸಂಸದೆ, ನಟಿ ಕಂಗನಾ ರನೌತ್‌ಗೆ ಕಪಾಳ ಮೋಕ್ಷ

Date:

ಬಾಲಿವುಡ್‌ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರನೌತ್‌ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿಯೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಘಟನೆ ಬಗ್ಗೆ ಕಂಗನಾ ರನೌತ್‌ ಅವರೇ ಆರೋಪ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಾಲಿವುಡ್‌ ನಟಿ ಕಂಗನಾ ರನೌತ್‌ ಇತ್ತೀಚಿಗಷ್ಟೆ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು.

ಕಂಗನಾಗೆ ಹಲ್ಲೆಯಾಗಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಚಂಡೀಗಢದಿಂದ ದೆಹಲಿಗೆ ಯುಕೆ707 ವಿಮಾನದಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ರೈತರ ಪ್ರತಿಭಟನೆಯ ಬಗ್ಗೆ ನೀಡಿದ್ದ ಹೇಳಿಕೆಯ ಬಗ್ಗೆ ಸಿಐಎಸ್‌ಎಫ್ ಸಿಬ್ಬಂದಿ ಆಕೆಯನ್ನು ಕಂಡಾಗ ಪ್ರಶ್ನಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದಿದ್ದರಿಂದ ಆಕ್ರೋಶಗೊಂಡ ಚಂಡೀಗಢ ಏರ್‌ಪೋರ್ಟಿನ ಸಿಐಎಸ್‌ಎಫ್‌ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ.

ಆನಂತರ ಅವರು, ನಾನು ಏಕೆ ಕಂಗಾನ ಮುಖಕ್ಕೆ ಬಾರಿಸಿದ್ದು ಅಂದರೆ, ಅಂದು ರೈತರ ಆಂದೋಲನದ ಸಂದರ್ಭದಲ್ಲಿ ಆಂದೋಲನದಲ್ಲಿ ಭಾಗವಹಿಸಿದ ರೈತರ ಕುರಿತು 100 ರೂಪಾಯಿ ಆಸೆಗಾಗಿ ಬಂದವರು ಎಂದು ಈಕೆ ಹೇಳಿಕೆ ನೀಡಿದ್ದಳು. ಅಂದು ನನ್ನ ತಾಯಿಯೂ ಆಂದೋಲನದಲ್ಲಿ ಭಾಗವಹಿಸಿದ್ದರು. ಹಾಗಾಗಿ ಬಾರಿಸಿದೆ ಎಂದಿದ್ದಾರೆ.

ಕಪಾಳಮೋಕ್ಷಗೈದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಅವರನ್ನು ಅಮಾನತು ಮಾಡಲಾಗಿದ್ದು, ಇಲಾಖಾ ತನಿಖೆಗೆ ನಿರ್ದೇಶನ ನೀಡಲಾಗಿದೆ ಎಂದು ವರದಿಯಾಗಿದೆ.

ಘಟನೆಯ ನಂತರ ಸಾಮಾಜಿಕ ಮಾಧ್ಯಮದಲ್ಲಿ ಮಾತನಾಡಿರುವ ಕಂಗನಾ ರನೌತ್, “ನಾನು ಸುರಕ್ಷಿತವಾಗಿದ್ದೇನೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಇಂದು ಭದ್ರತಾ ಪರಿಶೀಲನೆಯ ವೇಳೆ ಈ ಘಟನೆ ನಡೆದಿದೆ. ಭದ್ರತಾ ಪರಿಶೀಲನೆಯ ನಂತರ ನಾನು ವಾಪಸ್‌ ಬರುತ್ತಿದ್ದಾಗ ದ್ವಿತೀಯ ಕ್ಯಾಬಿನ್‌ನಲ್ಲಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯಾಗಿದ್ದ ಮಹಿಳೆಯೊಬ್ಬರು ನನ್ನ ಕೆನ್ನೆ ಬಾರಿಸಿ ನಿಂದಿಸುವುದಕ್ಕೆ ಶುರು ಮಾಡಿದರು. ನಾನು ಏಕೆ ಈ ರೀತಿ ಮಾಡಿದೆ ಎಂದು ಕೇಳಿದಾಗ ನಾನು ರೈತರ ಪ್ರತಿಭನೆಯನ್ನು ಬೆಂಬಲಿಸಿ ಈ ರೀತಿ ಮಾಡಿರುವುದಾಗಿ ಹೇಳಿದರು. ನಾನು ಸುರಕ್ಷಿತವಾಗಿದ್ದು, ಪಂಜಾಬ್‌ನಲ್ಲಿ ಉಗ್ರಗಾಮಿಗಳು ಹಾಗೂ ವಿಧ್ವಂಸಕ ಕೃತ್ಯವೆಸಗುವವರು ಹೆಚ್ಚುತ್ತಿರುವ ಬಗ್ಗೆ ನಾನು ಕಳವಳಗೊಂಡಿದ್ದೇನೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...