ಮಾತಿನಲ್ಲಿ ವಿಶ್ವಗುರು, ನಡೆಯಲ್ಲಿ ಪರಾಧೀನತೆ: ಪ್ರಧಾನಿ ಮೋದಿ ವಿರುದ್ಧ ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

Date:

ಭಾರತವು ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು ’30 ದಿನಗಳ ವಿನಾಯಿತಿ’ ನೀಡಲಾಗಿದೆ ಎಂದು ಅಮೆರಿಕ ಸಚಿವರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದು, ಸ್ವತಂತ್ರ ಭಾರತದ ವಿದೇಶಾಂಗ ಗೌರವಕ್ಕೆ ಬಿದ್ದಿರುವ ಅಪಮಾನಕರ ಹೊಡೆತ. ಮಾತಿನಲ್ಲಿ ವಿಶ್ವಗುರು, ನಡೆಗಳಲ್ಲಿ ಪರಾಧೀನತೆ ತೋರುವುದು ನರೇಂದ್ರ ಮೋದಿಯ ವಿದೇಶಾಂಗ ನೀತಿಯ ವ್ಯಂಗ್ಯಾತ್ಮಕ ಸತ್ಯ ಎಂದು ಕಾಂಗ್ರೆಸ್‌ ನಾಯಕ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಗ್ನತೆಯಿಂದ ತೈಲ ಮಾರುಕಟ್ಟೆ ಅಸ್ತವ್ಯಸ್ತವಾಗಿದೆ. ಹಲವು ರಾಷ್ಟ್ರಗಳ ತೈಲ ವಹಿವಾಟಿಗೆ ತೊಂದರೆಯಾಗಿದೆ. ಅಂತೆಯೇ, ಭಾರತದಲ್ಲಿಯೂ ಇಂಧನ ಕೊರತೆ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ, ರಷ್ಯಾದಿಂದ ಭಾರತ ಕಚ್ಛಾತೈಲ ಖರೀದಿ ಬಗ್ಗೆ ಯೋಜಿಸಿತ್ತು. ಇದೀಗ, ರಷ್ಯಾದ ತೈಲ ಖರೀಸಲು ಭಾರತಕ್ಕೆ ಅಮೆರಿಕವು ಅನುಮತಿ ನೀಡಿದೆ ಎಂದು ಅಮೆರಿಕದ ಹಣಕಾಸು ಸಚಿವ ಹೇಳಿಕೆ ನೀಡಿದ್ದಾರೆ. ಭಾರತವು ತನ್ನ ವ್ಯಾಪಾರ ವಹಿವಾಟಿಗೆ ಮತ್ತೊಂದು ರಾಷ್ಟ್ರದ ಅನುಮತಿ ಪಡೆಯುತ್ತಿರುವುದು ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಬಿ.ಕೆ ಹರಿಪ್ರಸಾದ್, “ಭಾರತವು ರಷ್ಯಾದಿಂದ ತೈಲ ಖರೀದಿಸಲು ಅಮೆರಿಕಾದ ಒಪ್ಪಿಗೆ ಪಡೆಯುವುದು ಹಾಗೂ ವಿನಾಯಿತಿ ನೀಡುವುದು ಸಾರ್ವಭೌಮ ರಾಷ್ಟ್ರದ ಘನತೆಯನ್ನು ಗುಲಾಮಗಿರಿ ವ್ಯವಸ್ಥೆಗೆ ವಿಶ್ವಗುರು ತಳ್ಳಿರುವ ನಿದರ್ಶನಕ್ಕೆ ಸಾಕ್ಷಿ. ಒಂದು ಸಾರ್ವಭೌಮ ರಾಷ್ಟ್ರ ತನ್ನ ಇಂಧನ ಅವಶ್ಯಕತೆಗಳನ್ನು ಯಾವ ದೇಶದಿಂದ ಪೂರೈಸಿಕೊಳ್ಳಬೇಕು ಎಂಬ ನಿರ್ಧಾರಕ್ಕೂ ಇನ್ನೊಂದು ರಾಷ್ಟ್ರದಿಂದ ‘ವಿನಾಯಿತಿ’ ಪಡೆಯಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದರೆ, ಅದು ಕೇವಲ ರಾಜತಾಂತ್ರಿಕ ವೈಫಲ್ಯವಲ್ಲ; ಅದು ರಾಷ್ಟ್ರದ ಆತ್ಮಗೌರವವನ್ನೇ ತುತ್ತುಮಾಡಿದ ಆಡಳಿತದ ನಗ್ನ ಸತ್ಯ” ಎಂದು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವತಂತ್ರ ನಂತರ ಭಾರತವೂ ಸ್ವತಂತ್ರ ವಿದೇಶಾಂಗ ಧೋರಣೆಯ ಮೂಲಕ ವಿಶ್ವದಲ್ಲಿ ಗೌರವ ಪಡೆದಿದ್ದ ಭಾರತ, ಇಂದು ಅಮೆರಿಕದ ರಾಜಕೀಯ ತಾಳಕ್ಕೆ ತಕ್ಕಂತೆ ಕುಣಿಯುವ ಸ್ಥಿತಿಗೆ ಕುಸಿದಿರುವುದು ಆತಂಕಕಾರಿ ಬೆಳವಣಿಗೆ. ರಷ್ಯಾದಿಂದ ತೈಲ ಖರೀದಿಸಲು ಅಮೆರಿಕದ ವಿನಾಯಿತಿ’ ಬೇಕೆಂಬ ಭಾವ ಮೂಡುವಂತೆ ಮಾತನಾಡುವ ಧೈರ್ಯ ಅವರಿಗೆ ಬಂದಿದ್ದರೆ, ಅದು ನರೇಂದ್ರ ಮೋದಿ ಸರಕಾರದ ವಿದೇಶಾಂಗ ದೌರ್ಬಲ್ಯ ಮತ್ತು ಆತ್ಮಗೌರವ ಕುಸಿದಿರುವುದಕ್ಕೆ ಜೀವಂತ ಸಾಕ್ಷಿ” ಎಂದು ಟೀಕಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಅಮೆರಿಕ ಕೈಯಿಟ್ಟ ಕಡೆಯೆಲ್ಲ ವಿನಾಶವೇ ಎಂಬುದು ಚಾರಿತ್ರಿಕ ಸತ್ಯ!

“ಅಮೆರಿಕದ ಸಚಿವರು ಭಾರತಕ್ಕೆ ’30 ದಿನಗಳ ವಿನಾಯಿತಿ’ ನೀಡಿದೆ ಎಂದು ಜಗತ್ತಿನ ಮುಂದೆ ಹೇಳುವ ಮಟ್ಟಿಗೆ ಪರಿಸ್ಥಿತಿ ತಲುಪಿರುವುದೇ ಮೋದಿ ಸರಕಾರದ ದುರ್ಬಲತೆ ಮತ್ತು ಆತ್ಮಗೌರವಹೀನತೆಯ ಪರಾಕಾಷ್ಠೆ. ಇದು ಕೇವಲ ರಾಜಕೀಯ ಅಪಮಾನವಲ್ಲ; ಇದು ಭಾರತದ ಸ್ವಾಭಿಮಾನವನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಹರಾಜು ಹಾಕಿದಂತಾಗಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ದೇಶದ ಗೌರವವನ್ನು ಇಷ್ಟು ಮಟ್ಟಿಗೆ ಕುಗ್ಗಿಸಿ, ವಿಶ್ವಗುರುವಿನ ಘೋಷಣೆಗಳ ಹಿಂದೆ ರಾಜತಾಂತ್ರಿಕ ದೀನತೆಯನ್ನು ಮುಚ್ಚಿಟ್ಟ ಪ್ರಧಾನಿಯನ್ನು ನೋಡಲು ಸಾಧ್ಯವಿಲ್ಲ. ಮಾತಿನಲ್ಲಿ ವಿಶ್ವಗುರು, ನಡೆಗಳಲ್ಲಿ ಪರಾಧೀನತೆ ತೋರುವುದು ನರೇಂದ್ರ ಮೋದಿಯ ವಿದೇಶಾಂಗ ನೀತಿಯ ವ್ಯಂಗ್ಯಾತ್ಮಕ ಸತ್ಯ” ಎಂದು ಹೇಳಿದ್ದಾರೆ.

“ದೇಶದ ಗೌರವವನ್ನು ಉಳಿಸುವ ಹೊಣೆಗಾರಿಕೆ ಪ್ರಧಾನಮಂತ್ರಿಯದ್ದು. ಆದರೆ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತವು ಅಮೇರಿಕದ ‘ವಿನಾಯಿತಿ’ಗಾಗಿ ಕಾಯುವ ರಾಷ್ಟ್ರದಂತೆ ಕಾಣಿಸಿಕೊಳ್ಳುತ್ತಿರುವುದು ನಾಚಿಕೆಗೇಡಿತನದ ಸಂಗತಿ. ವಿಶ್ವಗುರುವಿನ ಬೃಹತ್ ಭಾಷಣಗಳ ಹಿಂದೆ ಅಡಗಿರುವ ವಿದೇಶಾಂಗ ದೌರ್ಬಲ್ಯವನ್ನು ಇಂದು ಜಗತ್ತೇ ಗಮನಿಸುತ್ತಿದೆ. ವಿಶ್ವಗುರು ಎಂಬ ಘೋಷಣೆಯಿಂದ ದೇಶದ ಗೌರವ ಉಳಿಯುವುದಿಲ್ಲ. ಆತ್ಮಗೌರವದಿಂದ, ಸ್ವತಂತ್ರ ರಾಜತಾಂತ್ರಿಕ ಧೈರ್ಯದಿಂದ ಮಾತ್ರ ರಾಷ್ಟ್ರದ ಮಾನ ಉಳಿಯುತ್ತದೆ. ಆ ಧೈರ್ಯವೇ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಕಾಣೆಯಾಗಿರುವುದು ಇಂದಿನ ಭಾರತದ ಅತ್ಯಂತ ಕಹಿ ಸತ್ಯ” ಎಂದು ವಗ್ದಾಳಿ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...