‘ಇಂಡಿಯಾ’ ಬಣದ 300 ಸಂಸದರಿಂದ ಚುನಾವಣಾ ಆಯೋಗದ ಕಚೇರಿಗೆ ನಾಳೆ ಪಾದಯಾತ್ರೆ

Date:

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಮೂಲಕ ಮತಗಳ ಕಳ್ಳತನ ನಡೆಯುತ್ತಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ‘ಇಂಡಿಯಾ’ ಮೈತ್ರಿಕೂಟದ ಸಂಸದರು ಸೋಮವಾರ(ಆ.11) ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿವರೆಗೆ ಪ್ರತಿಭಟನಾ ಪಾದಯಾತ್ರೆ ನಡೆಸಲಿದ್ದಾರೆ. ಈ ಪಾದಯಾತ್ರೆಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವ ವಹಿಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ‘ಇಂಡಿಯಾ’ ಮೈತ್ರಿಕೂಟದ ಸಂಸದರಿಗಾಗಿ ಭೋಜನ ಕೂಟವನ್ನು ಆಯೋಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಳಿಗ್ಗೆ 11.30ಕ್ಕೆ ಸಂಸತ್ತಿನಿಂದ ಆರಂಭವಾಗಲಿರುವ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಸುಮಾರು 300 ಸಂಸದರು ಭಾಗವಹಿಸುವ ನಿರೀಕ್ಷೆಯಿದೆ.

ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವುದಾಗಿ ಆರೋಪಿಸಿದ್ದು, ಕರ್ನಾಟಕದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳು ಕಳ್ಳತನವಾಗಿವೆ ಎಂದು ದಾಖಲೆಗಳೊಂದಿಗೆ ಬಹಿರಂಗಪಡಿಸಿದ್ದಾರೆ. ಈ ಆರೋಪದ ಬೆನ್ನಲ್ಲೇ, ವಿರೋಧ ಪಕ್ಷಗಳು ಪ್ರತಿಭಟನೆಗೆ ತೀರ್ಮಾನಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಅಧ್ಯಕ್ಷರ ನೇಮಕದಲ್ಲಿ ಬಗೆಹರಿಯುವುದೇ ಮೋದಿ-ಆರ್‌ಎಸ್‌ಎಸ್‌ ಕಗ್ಗಂಟು?

2024ರ ಲೋಕಸಭೆ ಚುನಾವಣೆಯ ಫಲಿತಾಂಶದ ನಂತರ ‘ಇಂಡಿಯಾ’ ಮೈತ್ರಿಕೂಟದ ಮೊದಲ ಪ್ರತಿಭಟನೆಗೆ ಎಎಪಿ ಕೂಡ ಬೆಂಬಲ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಆಗಸ್ಟ್ 8ರಂದು ನಡೆಯಬೇಕಿದ್ದ ಈ ಪ್ರತಿಭಟನೆಯನ್ನು ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನದಿಂದಾಗಿ ಮುಂದೂಡಲಾಗಿತ್ತು. ಚುನಾವಣೆಯಲ್ಲಿ ಕಂಡುಬಂದಿರುವ ಮತ ಕಳ್ಳತನ ಮತ್ತು ಅಕ್ರಮಗಳ ಬಗ್ಗೆ ರಾಷ್ಟ್ರವ್ಯಾಪಿ ಗಮನ ಸೆಳೆಯಲು ಈ ಪಾದಯಾತ್ರೆಯನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಮೈತ್ರಿಕೂಟದ ನಾಯಕರು ಚರ್ಚೆ ನಡೆಸಿ, ಭವಿಷ್ಯದ ಹೋರಾಟದ ರೂಪುರೇಷೆಯನ್ನು ರೂಪಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...