ಬಿಜೆಪಿ ಸೋಲಿಸುವ ಅಭ್ಯರ್ಥಿಗಳಿಗೆ ಮತ ನೀಡಿ: ರೈತ ನಾಯಕ ರಾಕೇಶ್ ಟಿಕಾಯತ್ ಮನವಿ

Date:

ಲೋಕಸಭಾ ಚುನಾವಣೆಯಲ್ಲಿ ಮೇ.25 ಹಾಗೂ ಜೂನ್‌ 1ರ  ಕೊನೆಯ ಎರಡು ಹಂತದ ಮತದಾನ ಬಾಕಿಯುಳಿದಿದ್ದು, ಈ ಹಿನ್ನೆಲೆಯಲ್ಲಿ ರೈತ ನಾಯಕ ಹಾಗೂ ಸಂಯುಕ್ತ ಕಿಸಾನ್‌ ಮೋರ್ಚಾದ(ಎಸ್‌ಕೆಎಂ) ಅಂಗಸಂಸ್ಥೆ ಭಾರತೀಯ ಕಿಸಾನ್‌ ಯೂನಿಯನ್‌(ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಅವರು ಬಿಜೆಪಿ ಸೋಲಿಸುವ ಅಭ್ಯರ್ಥಿಗಳಿಗೆ ಮತ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮದ ಮೂಲಕ ಸಂದೇಶ ನೀಡಿರುವ ಟಿಕಾಯತ್ತ್‌, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸುತ್ತಿಲ್ಲ ಬದಲಿಗೆ ದೇಶವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿರುವ ಬಂಡವಾಳಶಾಹಿಗಳ ಗುಂಪು ಚುನಾವಣೆಯಲ್ಲಿ ಸ್ಪರ್ಧಿಸಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಎರಡು ಹಂತಗಳ ಮತದಾನ ಬಾಕಿಯುಳಿದಿದೆ. ಎಸ್‌ಕೆಎಂ ಸ್ಪಷ್ಟವಾಗಿ ಹೇಳುತ್ತದೆ ಬಿಜೆಪಿ ಸೋಲಿಸುವ ಅಭ್ಯರ್ಥಿಗಳಿಗೆ ಮತ ನೀಡಿ. ಇದು ಬಿಜೆಪಿ ಸರ್ಕಾರವಲ್ಲ, ಇದೊಂದು ಬಂಡವಾಳಶಾಹಿ ಗುಂಪಿನ ಸರ್ಕಾರ. ಈ ಗುಂಪು ದೇಶವನ್ನು ಹಿಡಿದಿಟ್ಟುಕೊಂಡಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಿದೆ. ಯಾರೊಬ್ಬರು ಅವರಿಗೆ ಬೆಂಬಲಿಸಬೇಡಿ” ಎಂದು ಟಿಕಾಯತ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರವೇ ಬರಲಿ, ನೆರೆಯೇ ಇರಲಿ, ಭರವಸೆಗಳಿಗೆ ಬರವಿಲ್ಲ

“ಈ ಚುನಾವಣೆಯು ನೇರವಾಗಿ ಭಾರತದ ಸಾರ್ವಜನಿಕರು ಹಾಗೂ ಒಂದು ಗುಂಪಿನ ನಡುವೆ ನಡೆಯುತ್ತಿದೆ. ಸಾರ್ವಜನಿಕರು ಈ ಚುನಾವಣೆಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಇಲ್ಲಿ ಆತಂಕಪಡುವ ಅಗತ್ಯವಿಲ್ಲ. ನಿಮ್ಮ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸುವ ಅಭ್ಯರ್ಥಿಗೆ ಮತ ನೀಡಿ” ಎಂದು ಟಿಕಾಯತ್ ತಿಳಿಸಿದ್ದಾರೆ.

“ನಮಗೆ ನಿರ್ದಿಷ್ಟವಾಗಿ ಯಾರ ವಿರುದ್ಧವೂ ವೈಯುಕ್ತಿತ ಸಮಸ್ಯೆಗಳಿಲ್ಲ. ಎಸ್‌ಕೆಎಂ ಇದನ್ನೇ ಹೇಳುತ್ತಿದೆ. ಹರಿಯಾಣ, ದೆಹಲಿ, ಪಂಜಾಬ್, ಉತ್ತರ ಪ್ರದೇಶ ಅಥವಾ ದೇಶದ ಇತರ ಭಾಗ ಯಾವುದೇ ಇರಲಿ ಎಸ್‌ಕೆಎಂ ಬಿಜೆಪಿ ಸೋಲಿಸುವ ಅಭ್ಯರ್ಥಿಗೆ ಮತ ನೀಡಿ ಎಂದು ಸಂದೇಶಗಳನ್ನು ನೀಡುತ್ತದೆ” ಎಂದು ರಾಕೇಶ್ ಟಿಕಾಯತ್ ಹೇಳಿದರು.

“ಎಸ್‌ಕೆಎಂ ಒಂದು ರಾಜಕೀಯೇತರ ಪಕ್ಷವಾಗಿದ್ದು, ಚುನಾವಣೆಗಳಿಂದ ದೂರವುಳಿದಿದೆ. ನೀವು ನೋಟಾಗೆ ಮತ ನೀಡಿದರೆ ನೇರವಾಗಿ ಸರ್ಕಾರಕ್ಕೆ ಸಹಾಯ ಮಾಡಿದಂತೆ. ಯಾವುದೇ ಕಾರಣಕ್ಕೂ ನೋಟಾಗೆ ಮತ ನೀಡಬೇಡಿ. ಇದು ಜನರ ಚುನಾವಣೆ. ಜನರು ಚುನಾವಣೆಯ ಮೂಲಕ ಹೋರಾಟ ನಡೆಸುತ್ತಿದ್ದಾರೆ. ಫಲಿತಾಂಶ ಏನೇ ಬರಬಹುದು, ನಾವು ಹೋರಾಟಕ್ಕೆ ಸಿದ್ಧರಾಗಿರಬೇಕು. ಜನರು ಶಾಂತವಾಗಿದ್ದಾರೆ ಎಂದರೆ ಅವರ ಕೋಪ ತಣಿದಿದೆ ಎಂದಲ್ಲ. ಸಮಾಧಾನದಿಂದಿರಿ. ಭರವಸೆ ಇಟ್ಟುಕೊಳ್ಳಿ. ಜನರು ಗೆಲುವು ಸಾಧಿಸಲಿದ್ದಾರೆ” ಎಂದು ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...