ಮತದಾನ ಯಂತ್ರದ ಮೂಲಕ ಮತ ಚಲಾಯಿಸಿದ ನಂತರ ವಿವಿಪ್ಯಾಟ್ ಮೂಲಕ ಮತದಾರರಿಗೆ ಮತಚೀಟಿ ಬರುವ ಪ್ರಕ್ರಿಯೆಗಳ ಅರ್ಜಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಾವು ಚುನಾವಣೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ, ಚುನಾವಣಾ ಸಂಸ್ಥೆ ಅನುಮಾನಗಳನ್ನು ಪರಿಹರಿಸಿದೆ ಎಂದು ತಿಳಿಸಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾದ್ ನೇತೃತ್ವದ ದ್ವಿಸದಸ್ಯ ಪೀಠ ಇವಿಎಂಗಳ ಬಗೆಗಿನ ಕಾರ್ಯನಿರ್ವಹಣೆಗಳಿಗೆ ಸಂಬಂಧಿಸಿದ 5 ಪ್ರಶ್ನೆಗಳಿಗೆ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿತು.
ನಂತರ ವಿವಿಪ್ಯಾಟ್ ಮೂಲಕ ಮತಚೀಟಿ ಬರುವ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ವಾದಿ ಪ್ರತಿವಾದಿಗಳ ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರು, ಮಹಿಳೆಯರ ಮಂಗಳಸೂತ್ರಕ್ಕೆ ಕೈ ಹಾಕಿದ ಮೋದಿ
“ನಾವು ಚುನಾವಣೆಗಳನ್ನು ನಿಯಂತ್ರಿಸುವುದಿಲ್ಲ, ನಾವು ಮತ್ತೊಂದು ಸಾಂವಿಧಾನಿಕ ಸಂಸ್ಥೆಯನ್ನು ನಿಯಂತ್ರಿಸುವುದಕ್ಕೆ ಸಾಧ್ಯವಿಲ್ಲ.ಭಾರತೀಯ ಚುನಾವಣಾ ಆಯೋಗವು ಅನುಮಾನಗಳನ್ನು ನಿವಾರಿಸಿದೆ. ನಿಮ್ಮ ಚಿಂತನಾ ಪ್ರಕ್ರಿಯೆಗಳನ್ನು ಬದಲಿಸಲು ಸಾಧ್ಯವಿಲ್ಲ. ಅನುಮಾನದ ಆಧಾರದ ಮೇಲೆ ನಾವು ಆದೇಶ ನೀಡಲು ಸಾಧ್ಯವಿಲ್ಲ” ಎಂದು ಪೀಠ ತಿಳಿಸಿತು.





