ವಕ್ಫ್ ನೋಂದಣಿ ಇಂದು ಅಂತ್ಯ, ವಿಸ್ತರಣೆ ಇಲ್ಲ: ಕೇಂದ್ರ ಸಚಿವ ಕಿರಣ್ ರಿಜಿಜು

Date:

ಕೇಂದ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಆರಂಭಿಸಿದ ಉಮೀದ್ ಸೆಂಟ್ರಲ್ ಪೋರ್ಟಲ್ ನಲ್ಲಿ ಇದುವರೆಗೆ 4.6 ಲಕ್ಷ ವಕ್ಫ್ ಆಸ್ತಿಗಳ ವಿವರಗಳನ್ನು ಅಪ್ಲೋಡ್ ಮಾಡಲಾಗಿದೆ. ವಕ್ಫ್ (ತಿದ್ದಪಡಿ) ಕಾಯ್ದೆ-2025ರಡಿ ನೀಡಲಾದ ಆರು ತಿಂಗಳ ಗಡುವು ಶನಿವಾರ ಮುಕ್ತಾಯಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಯಾವುದೇ ಕಾರಣಕ್ಕೆ ಈ ಗಡುವು ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಇದುವರೆಗೆ ಅಪ್ಲೋಡ್ ಮಾಡದಿದ್ದಲ್ಲಿ ಅಂಥವರು ವಕ್ಫ್ ನ್ಯಾಯಮಂಡಳಿಯನ್ನು ಸಂಪರ್ಕಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಆದಾಗ್ಯೂ ಇದುವರೆಗೆ ನೋಂದಾಯಿಸಲು ಸಾಧ್ಯವಾಗದೇ ಇದ್ದಲ್ಲಿ ಅಂಥವರಿಗೆ ಮಾನವೀಯ ಮತ್ತು ಸೌಲಭ್ಯಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವಾಲಯ ಹೇಳಿದೆ. ಮುಂದಿನ ಮೂರು ತಿಂಗಳವರೆಗೆ ಯಾವುದೇ ದಂಡ ಅಥವಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂಬ ಭರವಸೆ ನೀಡಿದೆ. ಈ ಮೂಲಕ ಸಕಾರಣಗಳಿಂದಾಗಿ ನೋಂದಣಿಗೆ ಅಪ್ಲೋಡ್ ಮಾಡಲು ಸಾಧ್ಯವಾಗದವರಿಗೆ ನ್ಯಾಯಮಂಡಳಿಯ ಮೊರೆ ಹೋಗುವ ಅವಕಾಶ ನೀಡಲಾಗುತ್ತಿದೆ ಎಂದು ವಿವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೋಮುವಾದಿಗಳ ಅಜೆಂಡಾ ಅರ್ಥ ಮಾಡಿಕೊಳ್ಳದ ಕಾಂಗ್ರೆಸ್‌; ಪುಂಡಾಟಕ್ಕೆ ಕಡಿವಾಣ ಯಾವಾಗ?

ಕಾನೂನಿನ ಪ್ರಕಾರ, ಗಡುವಿನ ಒಳಗಾಗಿ ಸಲ್ಲಿಕೆ ಮಾಡಲು ಸಾಧ್ಯವಾಗದೇ ಇರುವುದಕ್ಕೆ ಕಾರಣ ತೃಪ್ತಿದಾಯಕ ಎಂದು ನ್ಯಾಯಾಧಿಕರಣಕ್ಕೆ ಅನಿಸದಲ್ಲಿ ಮಾತ್ರ ಮುಂದಿನ ಆರು ತಿಂಗಳವರೆಗೆ ವಿಸ್ತರಣೆಗೆ ಅವಕಾಶವಿದೆ.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿಕೆಯನ್ನು ಕೂಡಾ ಸಚಿವಾಲಯ ಬಿಡುಗಡೆ ಮಾಡಿದೆ. “ಕಾಯ್ದೆಯಡಿ ನೀಡಿರುವ ಆರು ತಿಂಗಳ ಕಡ್ಡಾಯ ಗಡುವು ಮುಕ್ತಾಯವಾಗಿದೆ. ಕಾನೂನಿನ ನಿಬಂಧನೆಗಳ ಅನುಸಾರ ಮತ್ತು ಸುಪ್ರೀಂಕೋರ್ಟ್ನ ಸ್ಪಷ್ಟ ನಿರ್ದೇಶನದ ಕಾರಣದಿಂದ ಇದನ್ನು ವಿಸ್ತರಿಸಲಾಗದು” ಎಂದು ರಿಜಿಜು ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...