ಪಶ್ಚಿಮ ಬಂಗಾಳ | ಹಿಂಸಾಚಾರಕ್ಕೆ ತಿರುಗಿದ ವಕ್ಫ್‌ ಪ್ರತಿಭಟನೆ: ಹಲವು ವಾಹನಗಳಿಗೆ ಬೆಂಕಿ

Date:

ವಕ್ಫ್‌ ಕಾಯ್ದೆಯ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮುಸ್ಲಿಮರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನಿಮ್ತಿತಾ ನಿಲ್ದಾಣದಲ್ಲಿ ನಿಂತಿದ್ದ ಎರಡು ರೈಲುಗಳ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದೆ.

ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆದಿತ್ತು. ಸಂಜೆ ಬಳಿಕ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಘಟನೆಯ ಹಿನ್ನೆಲೆಯಲ್ಲಿ ಕನಿಷ್ಠ ಎರಡು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ದಾಳಿಯಲ್ಲಿ ಕೆಲವು ಪ್ರಯಾಣಿಕರು ಮತ್ತು ಹತ್ತು ಪೊಲೀಸರು ಗಾಯಗೊಂಡಿದ್ದಾರೆ. ಹಿಂಸಾಚಾರವನ್ನು ನಿಯಂತ್ರಿಸಲು ಗಡಿ ಭದ್ರತಾ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮುರ್ಷಿದಾಬಾದ್ ಜಿಲ್ಲೆಯ ನಿಮ್ತಿತಾ ಮತ್ತು ಸುಟಿಯಲ್ಲಿ ಉದ್ವಿಗ್ನತೆ ಉಂಟಾಗಿದ್ದು, ನಿಮ್ತಿತಾ ರೈಲು ನಿಲ್ದಾಣದಲ್ಲಿ ಪ್ರತಿಭಟನಾಕಾರರು ಗಂಟೆಗಟ್ಟಲೆ ರೈಲ್ವೆ ಹಳಿಗಳನ್ನು ತಡೆದು ರೈಲ್ವೇ ಆಸ್ತಿಗಳಿಗೆ ಹಾನಿಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ಯಾಚಾರ ಯತ್ನ ಮಾಮೂಲು ಸಂಗತಿಯೇ ಗೃಹಸಚಿವರೇ?

ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ರೈಲ್ವೆ ಪೊಲೀಸ್ ಪಡೆ ಲಾಠಿ ಪ್ರಹಾರ ನಡೆಸಬೇಕಾಯಿತು. ಪ್ರತಿಭಟನಾಕಾರರು ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದರು. ನಂತರ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

“ಜಾಂಗಿಪುರ್‌ ಪ್ರದೇಶದ ನಿಮ್ತಿತಾ ಮತ್ತು ಸುಟಿಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಗಲಭೆ ಉಂಟು ಮಾಡಲು ಬಂದಿದ್ದ ಗುಂಪನ್ನು ಪೊಲೀಸರು ಚದುರಿಸಿದ್ದಾರೆ. ಹೆದ್ದಾರಿಗಳಲ್ಲಿ ವಾಹನ ಸಂಚಾರ ಸಹಜ ಸ್ಥಿತಿಗೆ ಮರಳಿದೆ. ಗಲಭೆ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಪಶ್ಚಿನ ಬಂಗಾಳ ಪೊಲೀಸ್‌ ಎಕ್ಸ್‌ನಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...