ವಯನಾಡು ಕ್ಷೇತ್ರ | ಪ್ರಿಯಾಂಕಾ ಗಾಂಧಿ ಗೆಲುವಿನತ್ತ ದಾಪುಗಾಲು

Date:

ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಮುನ್ನೆಡೆ ಕಾಯ್ದುಕೊಂಡಿದ್ದಾರೆ. ಇವರು 73,000 ಮತಗಳಿಂದ ಮುನ್ನೆಡೆ ಸಾಧಿಸಿದ್ದಾರೆ. ಆರಂಭದಿಂದಲೂ ಪ್ರಿಯಾಂಕಾ ಮುನ್ನಡೆಯಲ್ಲಿದ್ದಾರೆ.

ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧಿಸಿದ್ದು, ತಮ್ಮ ಚೊಚ್ಚಲ ಸ್ಪರ್ಧೆಯಲ್ಲಿ ಗೆಲುವು ಪಡೆಯುವುದೇ ಎಂಬುದಕ್ಕೆ ಮತ ಎಣಿಕೆ ತೆರೆ ಎಳೆಯಲಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಈ ಕ್ಷೇತ್ರದಿಂದ 3.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಆದರೆ ರಾಯಬರೇಲಿ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಅವರು, ಅಂತಿಮವಾಗಿ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧರಿಸಿ ರಾಜೀನಾಮೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...