ವಯನಾಡ್ ಭೂಕುಸಿತ | 24 ಗಂಟೆಗಳಲ್ಲಿ ಸೇತುವೆ ನಿರ್ಮಿಸಿದ ಸೇನೆ

Date:

ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಈವರೆಗೆ ಸುಮಾರು 300 ಮಂದಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯ ತ್ವರತವಾಗಿ ನಡೆಯುತ್ತಿದೆ. ರಕ್ಷಣಾ ಕಾರ್ಯಕ್ಕಾಗಿ ಭಾರತೀಯ ಸೇನೆಯ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ‘190 ಅಡಿ ಉದ್ದದ ಬೈಲಿ ಸೇತುವೆ’ಯನ್ನು 24 ಗಂಟೆಗಳಲ್ಲಿ ನಿರ್ಮಾಣ ಮಾಡಿದೆ. ಈ ಸೇತುವೆಯು ಭೂಕುಸಿತಕ್ಕೆ ತುತ್ತಾದ ವಯನಾಡ್‌ನ ಮುಂಡಕ್ಕೈ ಮತ್ತು ಚೂರಮಲಾ ನಡುವೆ ಸಂಪರ್ಕ ಒದಗಿಸುತ್ತದೆ.

ಸೇತುವೆ ನಿರ್ಮಾಣ ಕಾಮಗಾರಿ ಬುಧವಾರ ರಾತ್ರಿ 9.30ಕ್ಕೆ ಆರಂಭಗೊಂಡಿತ್ತು. ಗುರುವಾರ ಸಂಜೆ 5.30ರ ವೇಳಗೆ ಸಂಪೂರ್ಣ ಕಾಮಗಾರಿ ಮುದಿದಿದೆ. 24 ಟನ್ ಭಾರ ಹೊರುವ ಸಾಮರ್ಥ್ಯವನ್ನು ಸೇತುವೆ ಹೊಂದಿದೆ.

ಸೇತುವೆಯು ಜನರು ಮತ್ತು ವಸ್ತುಗಳನ್ನು ಸುಲಭವಾಗಿ ಸಾಗಿಸಲು ಹೆಚ್ಚು ಸಹಾಯ ಮಾಡುತ್ತದೆ ಎಂದು ಮೇಜರ್ ಜನರಲ್ ಮ್ಯಾಥ್ಯೂ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭೂಕುಸಿತಕ್ಕೆ ತುತ್ತಾದ ಎಲ್ಲ ಪ್ರದೇಶಗಳಲ್ಲಿಯೂ ಹುಡುಕಾಟ ನಡೆಸುತ್ತಿದ್ದೇವೆ. ಹೆಚ್ಚು ಸಂತ್ರಸ್ತರನ್ನು ರಕ್ಷಿಸುವ ಭರವಸೆ ಇದೆ. ಕೆಲವರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಸಹಾಯಕ್ಕಾಗಿ ಸಂಪರ್ಕಿಸಲು ಸಾಧ್ಯವಾಗದ ಜನರು ಪೀಡಿತ ಪ್ರದೇಶದಲ್ಲಿಯೇ ಇದ್ದಾರೆ. ಅವರನ್ನು ರಕ್ಷಿಸಲಾಗುತ್ತಿದೆ. ದುರದೃಷ್ಟವಶಾತ್ ವೃತಪಟ್ಟವರ ಮೃತದೇಹಗಳನ್ನು ಕೂಡ ಹುಡುಕುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ವಯನಾಡ್ ಭೂಕುಸಿತ ಸೇತುವೆ

“ನಾವು ರಾಡಾರ್ ಉಪಕರಣಗಳನ್ನು ಬಳಸಲು ಯೋಚಿಸುತ್ತಿದ್ದೇವೆ. ನಮ್ಮಲ್ಲಿ ಈಗಾಗಲೇ ಸ್ನಿಫರ್ ಡಾಗ್‌ಗಳು ಆಳವಾಗಿ ಹೂತಿರುವ ದೇಹಗಳನ್ನು ಹುಡುಕುವ ಕೆಲಸ ಮಾಡುತ್ತಿವೆ” ಎಂದು ಮ್ಯಾಥ್ಯೂ ತಿಳಿಸಿದ್ದಾರೆ.

ಸೇತುವೆ ನಿರ್ಮಾಣಕ್ಕೆ ಸಾಮಗ್ರಿಗಳನ್ನು ದೆಹಲಿ ಮತ್ತು ಬೆಂಗಳೂರಿನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ತರಿಸಿಕೊಂಡು, ಅಲ್ಲಿಂದ 17 ಟ್ರಕ್‌ಗಳ ಮೂಲಕ ವಯನಾಡಿಗೆ ತರಲಾಯಿತು ಎಂದು ಅವರು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...