ವಯನಾಡ್ ಭೂಕುಸಿತ | ಮೃತರ ಸಂಖ್ಯೆ 43ಕ್ಕೆ ಏರಿಕೆ; ನೂರಾರು ಮಂದಿ ಸಿಲುಕಿರುವ ಶಂಕೆ

Date:

ಕೇರಳದ ವಯನಾಡ್ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ ಏರಿಕೆಯಾಗುತ್ತಲೇ ಸಾಗುತ್ತಿದ್ದು, ಈವರೆಗೆ 43 ಮಂದಿ ಸಾವನ್ನಪ್ಪಿರುವುದು ಖಚಿತವಾಗಿದೆ. ನೂರಾರು ಮಂದಿ ಅವಶೇಷಗಳಲ್ಲಿ ಸಿಲುಕಿರುವ ಶಂಕೆಯಿದ್ದು ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ವಯನಾಡ್‌ ಜಿಲ್ಲೆಯ ಮುಂಡಕ್ಕೈ, ಚೂರಲ್‌ಮಲಾ, ಅಟ್ಟಮಲ ಮತ್ತು ನೂಲ್‌ಪುಳದ ಕುಗ್ರಾಮದಲ್ಲಿ ಭೂಕುಸಿತ ಉಂಟಾಗಿದೆ. ಮಣ್ಣು, ಮರಗಳು ಮತ್ತು ಬಂಡೆಗಳ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ತಮ್ಮ ಪ್ರೀತಿಪಾತ್ರರ ರಕ್ಷಣೆಗಾಗಿ ಜನರ ಆಕ್ರಂದನವು ಮುಗಿಲುಮುಟ್ಟಿದೆ.

ಮುಂಡಕ್ಕೈ ಪ್ರದೇಶದಲ್ಲಿ ಸೇತುವೆ ಕೊಚ್ಚಿಹೋಗಿದ್ದು ಈವರೆಗೆ ಎಷ್ಟು ಮಂದಿಗೆ ಹಾನಿಯಾಗಿದೆ ಎಂಬ ಬಗ್ಗೆ ರಕ್ಷಣಾ ಅಧಿಕಾರಿಗಳು ಮಾಹಿತಿ ನೀಡಿಲ್ಲ. 90 ಕಿಮೀ ದೂರದಲ್ಲಿರುವ ನೆರೆಯ ಮಲಪ್ಪುರಂ ಜಿಲ್ಲೆಯ ನಿಲಂಬೂರ್ ಪ್ರದೇಶದಲ್ಲಿ ಚಾಲಿಯಾರ್ ನದಿಯ ಕೆಳಭಾಗದಲ್ಲಿ ಹಲವಾರು ಮೃತದೇಹಗಳನ್ನು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕೇರಳ | ವಯನಾಡ್‌ನಲ್ಲಿ ಭೀಕರ ಭೂಕುಸಿತ: 7 ಮಂದಿ ಮೃತ್ಯು; 400 ಕುಟುಂಬ ಅತಂತ್ರ

ಕಾಂಗ್ರೆಸ್ ಸಂಸದ ಕೆ.ಸುರೇಶ್ ಸುದ್ದಿಗಾರರೊಂದಿಗೆ ಮಾತನಾಡಿ, “ವಯನಾಡಿನಲ್ಲಿ ಪರಿಸ್ಥಿತಿ ಕಲ್ಪನೆಗೂ ಮೀರಿದೆ. ಮೊದಲ ಮಾಹಿತಿಯ ಪ್ರಕಾರ, 11 ಜನರು ಸಾವನ್ನಪ್ಪಿದ್ದಾರೆ. ಆದರೆ ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು. ಸೇತುವೆ ಕುಸಿದಿದೆ ಮತ್ತು ನೀರು ಹರಿಯುತ್ತಿದೆ. ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಒಂದು ಗ್ರಾಮವು ಸಂಪೂರ್ಣವಾಗಿ ಪ್ರತ್ಯೇಕವಾಗಿ, ಕೊಚ್ಚಿಹೋಗಿದೆ. ಕೇರಳ ಸರ್ಕಾರ ಈಗಾಗಲೇ ಪರಿಹಾರ ಕ್ರಮಗಳನ್ನು ಪ್ರಾರಂಭಿಸಿದೆ. ಎನ್‌ಡಿಆರ್‌ಎಫ್ ಮತ್ತು ವಾಯುಪಡೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ” ಎಂದು ಮಾಹಿತಿ ನೀಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ ಮತ್ತು ಗಾಯಾಳುಗಳಿಗೆ 50,000 ರೂಪಾಯಿಗಳನ್ನು ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...