ವಯನಾಡ್ ಭೂಕುಸಿತ | ಮೃತರ ಸಂಖ್ಯೆ 84ಕ್ಕೆ ಏರಿಕೆ; ಕೇರಳದಲ್ಲಿ ಭಾರೀ ಮಳೆ

Date:

ಕೇರಳದ ವಯನಾಡ್ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗಿದೆ. ಈವರೆಗೆ ಕನಿಷ್ಠ 84 ಮಂದಿ ಸಾವನ್ನಪ್ಪಿದ್ದು ನೂರಾರು ಮಂದಿ ಸಿಲುಕಿರುವ ಶಂಕೆಯಿದೆ. ಈ ನಡುವೆ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ಕೇರಳದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಸದ್ಯ ವಯನಾಡ್ ಭೂಕುಸಿತ ಘಟನೆಯ ಬಳಿಕ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದೆ. ಮೆಪ್ಪಾಡಿ ಸಮೀಪದ ಗುಡ್ಡಗಾಡು ಪ್ರದೇಶಗಳಲ್ಲಿ ಎನ್‌ಡಿಆರ್‌ಎಫ್ ಸೇರಿದಂತೆ ಹಲವು ಏಜೆನ್ಸಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.

ವಯನಾಡು ಜಿಲ್ಲೆಯಲ್ಲಿ 116 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವರ ಕಚೇರಿ ತಿಳಿಸಿದೆ. ಇನ್ನು ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ನಾಯಕ ಮತ್ತು ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ, ಈ ದುರಂತದಿಂದ ತೀವ್ರವಾಗಿ ನೋವಾಗಿದೆ ಎಂದು ಹೇಳಿದ್ದು ತಮ್ಮ ಕುಟುಂಬವನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. “ಭೂಕುಸಿತದಲ್ಲಿ ಸಿಲುಕಿರುವವರನ್ನು ಶೀಘ್ರದಲ್ಲೇ ಸುರಕ್ಷಿತ ಸ್ಥಳಕ್ಕೆ ಕರೆತರಲಾಗುವುದು ಎಂದು ನಾನು ಭಾವಿಸುತ್ತೇನೆ” ಎಂದು ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ವಯನಾಡ್ ಭೂಕುಸಿತ | ಮೃತರ ಸಂಖ್ಯೆ 43ಕ್ಕೆ ಏರಿಕೆ; ನೂರಾರು ಮಂದಿ ಸಿಲುಕಿರುವ ಶಂಕೆ

“ಮುಖ್ಯಮಂತ್ರಿ ಮತ್ತು ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ. ಯಾವುದೇ ಸಹಾಯ ಬೇಕಾದಲ್ಲಿ ನಮಗೆ ತಿಳಿಸುವಂತೆ ನಾವು ಅವರಿಗೆ ವಿನಂತಿಸಿದ್ದೇವೆ” ಎಂದು ಹೇಳಿರುವ ರಾಹುಲ್ ಗಾಂಧಿ ರಕ್ಷಣಾ ಕಾರ್ಯದಲ್ಲಿ ಸರ್ಕಾರದ ಜೊತೆ ಕೈಜೋಡಿಸಲು ಯುಡಿಎಫ್ ಕಾರ್ಯಕರ್ತರಿಗೆ ಕರೆ ನೀಡಿದರು.

ಇನ್ನು ರಾಜ್ಯ ಆರೋಗ್ಯ ಇಲಾಖೆ ಕಂಟ್ರೋಲ್ ರೂಂ ತೆರೆದಿದೆ ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. ತುರ್ತು ಸಹಾಯದ ಅಗತ್ಯವಿರುವವರು ಸಹಾಯವಾಣಿ ಸಂಖ್ಯೆ 9656938689 ಮತ್ತು 8086010833 ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಈ ವಿಪತ್ತಿನ ಮಧ್ಯೆ, ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ ಮತ್ತು ಎರ್ನಾಕುಲಂನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...