‘ರಾಹುಲ್ ಗಾಂಧಿ ಎದೆಗೆ ಗುಂಡು ಹೊಡಿತೀವಿ’: ಬಿಜೆಪಿ ನಾಯಕನಿಂದ ಕೊಲೆ ಬೆದರಿಕೆ, ಕಾನೂನು ಕ್ರಮಕ್ಕೆ ಆಗ್ರಹ

Date:

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಎದೆಗೆ ಗುಂಡಿಟ್ಟು ಹೊಡೆಯುತ್ತೇವೆ ಎಂದು ಹೇಳುವ ಮೂಲಕ ಕೇರಳ ಬಿಜೆಪಿ ಮಾಧ್ಯಮ ವಕ್ತರ ಪಿಂಟು ಮಹಾದೇವನ್‌ ಕೊಲೆ ಬೆದರಿಕೆ ಹಾಕಿದ್ದಾರೆ.

ಕೇರಳದ ಖಾಸಗಿ ಟಿವಿ ವಾಹಿನಿಯೊಂದರ ಚರ್ಚೆಯಲ್ಲಿ ಸಂದರ್ಭದಲ್ಲಿ ಪಿಂಟು ಮಹಾದೇವನ್ ಅವರು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಎದೆಗೆ ಗುಂಡು ಹೊಡೆಯುತ್ತೇವೆ ಎಂದು ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿದ್ದಾರೆ.

ಕೊಲೆ ಬೆದರಿಕೆ ಹಾಕಿರುವ ಕೇರಳ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಸೋಮವಾರ ಆಗ್ರಹಿಸಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌ ಅವರು ಪತ್ರ ಬರೆದಿದ್ದು, “ರಾಹುಲ್ ಗಾಂಧಿಯ ಎದೆಗೆ ಗುಂಡು ಹಾರಿಸಲಾಗುವುದು ಎಂದು ಕೇರಳ ಬಿಜೆಪಿ ವಕ್ತಾರ ಪಿಂಟು ಮಹಾದೇವ್ ಅವರು ಹೇಳಿದ್ದು, ಈ ಕುರಿತು ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1984 ರಲ್ಲಿ ಅವರ ಅಜ್ಜಿ ಇಂದಿರಾ ಗಾಂಧಿ ಮತ್ತು 1991 ರಲ್ಲಿ ಅವರ ತಂದೆ ರಾಜೀವ್ ಗಾಂಧಿಯವರ ಹತ್ಯೆಗಳನ್ನು ಉಲ್ಲೇಖಿಸಿ ಬಿಜೆಪಿ ವಕ್ತಾರ ಪಿಂಟು ಮಹಾದೇವ್ ಈ ಹೇಳಿಕೆ ನೀಡಿದ್ದಾರೆ. “ಜನರು ಮೋದಿ ಜೊತೆಗಿದ್ದಾರೆ, ರಾಹುಲ್ ಗಾಂಧಿ ಅಂತಹ ಮಹತ್ವಾಕಾಂಕ್ಷೆಗಳನ್ನು ಹೊಂದಿದ್ದರೆ, ಅವರ ಎದೆಗೆ ಗುಂಡು ಹಾರಿಸಲಾಗುವುದು. ಜೆನ್- ಝಡ್ ಪ್ರತಿಭಟನೆಗಳು ಭಾರತದಲ್ಲಿ ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...