ಪಶ್ಚಿಮ ಏಷ್ಯಾ ಸಂಘರ್ಷ: ಪೂರ್ಣ ಪ್ರಮಾಣದ ಚರ್ಚೆಗೆ ಒತ್ತಾಯ; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರ ಪ್ರತಿಭಟನೆ

Date:

ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪೂರ್ಣ ಪ್ರಮಾಣದ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ವಿರೋಧ ಪಕ್ಷದ ಸಂಸದರು ಸೋಮವಾರ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಗೆಯೇ ಈ ವಿಷಯದಲ್ಲಿ ಸರ್ಕಾರದ ಮೌನವನ್ನು ವಿಪಕ್ಷಗಳು ಟೀಕಿಸಿವೆ.

ಇದಕ್ಕೂ ಮೊದಲು, ಬಜೆಟ್ ಅಧಿವೇಶನದ ದ್ವಿತೀಯಾರ್ಧದ ಕಾರ್ಯತಂತ್ರದ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ನಾಯಕರು ಸಂಸತ್ತಿನ ಸಂಕೀರ್ಣದಲ್ಲಿರುವ ರಾಜ್ಯಸಭಾ ನಾಯಕ ಖರ್ಗೆ ಅವರ ಕೊಠಡಿಯಲ್ಲಿ ಸಭೆ ನಡೆಸಿದ್ದರು. ಖರ್ಗೆ ಮತ್ತು ರಾಹುಲ್ ಜತೆಗೆ ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ಡಿಎಂಕೆಯ ದಯಾನಿಧಿ ಮಾರನ್, ಎನ್‌ಸಿಪಿ (ಎಸ್‌ಪಿ)ಯ ಸುಪ್ರಿಯಾ ಸುಳೆ ಮತ್ತು ಶಿವಸೇನೆಯ (ಯುಬಿಟಿ) ಸಂಜಯ್ ರಾವತ್ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನು ಓದಿದ್ದೀರಾ? ಪಶ್ಚಿಮ ಏಷ್ಯಾದಲ್ಲಿ ಅಮೆರಿಕದ ವಿನಾಶಕಾರಿ ನೀತಿ, ಭಾರತೀಯ ವಿಮಾನಯಾನಕ್ಕೆ ದುಃಸ್ವಪ್ನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಜೆಟ್ ಅಧಿವೇಶನದ ಎರಡನೇ ಭಾಗಕ್ಕೆ ಸಂಸತ್ತು ಮತ್ತೆ ಸೇರುತ್ತಿದ್ದಂತೆ, ಇರಾನ್ ಜತೆಗಿನ ಅಮೆರಿಕ-ಇಸ್ರೇಲ್ ಯುದ್ಧ ನಮ್ಮ ಹಿತ್ತಲನ್ನು ತಲುಪಿದೆ. ಈ ಸಂದರ್ಭದಲ್ಲಿ, ಪ್ರಸ್ತುತ ಭೌಗೋಳಿಕ ರಾಜಕೀಯ ಬಿಕ್ಕಟ್ಟಿನ ಕುರಿತು ಪೂರ್ಣ ಪ್ರಮಾಣದ ಚರ್ಚೆ ನಡೆಸುವುದು ಅತ್ಯಗತ್ಯ” ಎಂದು ಮಲ್ಲಿಕಾರ್ಜುನ ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ವಿದೇಶಾಂಗ ಇಲಾಖೆಯ ಏಕಪಕ್ಷೀಯ ಹೇಳಿಕೆ ಪರಿಹಾರವಲ್ಲ. ನಾವು ಸಾಮೂಹಿಕವಾಗಿ ರಾಷ್ಟ್ರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ನಮ್ಮ ಇಂಧನ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ನಮ್ಮ ವ್ಯಾಪಾರಿಗಳಿಗೆ ಸಹಾಯ ಮಾಡಲು, ನಮ್ಮ ರಫ್ತುಗಳಿಗೆ ಪೂರೈಕೆ ಸರಪಳಿ ವಿಸ್ತರಿಸಲು ಮತ್ತು ಬೆಲೆ ಏರಿಕೆಯಿಂದ ನಮ್ಮ ಜನರಿಗೆ ದಂಡ ವಿಧಿಸುವುದನ್ನು ನಿಲ್ಲಿಸಲು ಸರ್ಕಾರ ವಿವರವಾದ ತುರ್ತು ಯೋಜನೆಯನ್ನು ಜಾರಿಗೆ ತರಬೇಕು. ಜನರ ಬಗ್ಗೆ ಕೇಂದ್ರ ಸೂಕ್ಷ್ಮವಾಗಿರಬೇಕು ಎಂದು ವಿಪಕ್ಷ ಬಯಸುತ್ತದೆ” ಎಂದೂ ಖರ್ಗೆ ಹೇಳಿದ್ದಾರೆ.

“ಕೊಲ್ಲಿ ಉರಿಯುತ್ತಿದೆ, ತೈಲ ಆಘಾತ ಉಂಟಾಗಿದೆ. ಭಾರತೀಯರು ಸಿಲುಕಿಕೊಂಡಿದ್ದಾರೆ. ಭಾರತಕ್ಕೆ ನಾಯಕತ್ವ ಬೇಕು – ಮೌನವಲ್ಲ” ಎಂದು ಬರೆದ ಬೃಹತ್ ಬ್ಯಾನರ್‌ ಹಿಡಿದು ಸಂಸದರು ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಖರ್ಗೆ, ಗಾಂಧಿ, ಅಖಿಲೇಶ್ ಯಾದವ್, ಟಿಎಂಸಿಯ ಸಾಗರಿಕಾ ಘೋಷ್ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಬೃಹತ್ ಸೇನಾ ದಾಳಿ ನಡೆಸಿವೆ. ಈ ಕಾರ್ಯಾಚರಣೆಗೆ ಅಮೆರಿಕ ‘ಆಪರೇಷನ್ ಎಪಿಕ್ ಫ್ಯೂರಿ’ ಮತ್ತು ಇಸ್ರೇಲ್ ‘ರೋರಿಂಗ್ ಲಯನ್’ ಎಂದು ಹೆಸರಿಟ್ಟಿವೆ. ಈ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತರಾಗಿದ್ದಾರೆ. ಜತೆಗೆ ಅವರ ಕುಟುಂಬಸ್ಥರು ಮೃತಪಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಇಸ್ರೇಲ್‌ನ ಟೆಲ್ ಅವಿವ್ ಮತ್ತು ಮಧ್ಯಪ್ರಾಚ್ಯ ಕತಾರ್, ಯುಎಇ, ಬಹ್ರೇನ್, ಕುವೈತ್ ಮತ್ತು ಜೋರ್ಡಾನ್‌ನಲ್ಲಿರುವ ಅಮೆರಿಕದ ಮಿಲಿಟರಿ ಬೇಸ್‌ಗಳ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದೆ. ದಾಳಿ ಪ್ರತಿದಾಳಿಗಳು ಮುಂದುವರೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...