ಹೊಸ ಕಾನೂನುಗಳ ವಿರುದ್ಧ ‘ಕಪ್ಪು ದಿನ’ ಆಚರಣೆ; ಪಶ್ಚಿಮ ಬಂಗಾಳ ಬಾರ್ ಕೌನ್ಸಿಲ್ ಕರೆ

Date:

ಅಸ್ತಿತ್ವದಲ್ಲಿರುವ ಭಾರತೀಯ ದಂಡ ಸಂಹಿತೆ (IPC), ಅಪರಾಧ ಪ್ರಕ್ರಿಯಾ ಸಂಹಿತೆ (CrPC) ಮತ್ತು ಭಾರತೀಯ ಸಾಕ್ಷ್ಯಾಧಾರ ನಿಯಮಗಳ ಬದಲಿಗೆ ಮೂರು ಹೊಸ ಕಾನೂನುಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಹೊಸ ಕಾನೂನುಗಳ ವಿರುದ್ಧ ಜುಲೈ 1 ರಂದು ‘ಕಪ್ಪು ದಿನ’ ಆಚರಿಸುವುದಾಗಿ ಪಶ್ಚಿಮ ಬಂಗಾಳದ ಬಾರ್ ಕೌನ್ಸಿಲ್ ಘೋಷಿಸಿದೆ. ಹೊಸ ಕಾನೂನುಗಳು ‘ಜನವಿರೋಧಿ ಮತ್ತು ಕ್ರೂರ’ವಾಗಿವೆ ಎಂದು ಕೌನ್ಸಿಲ್ ಹೇಳಿದೆ.

ಭಾರತೀಯ ನ್ಯಾಯ ಸಂಹಿತಾ (BNS), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಸಂಹಿತಾ ಎಂಬ ಮೂರು ಹೊಸ ಕಾನೂನುಗಳು ಜುಲೈ 1 ರಂದು ಜಾರಿಗೆ ಬರಲಿವೆ.

ಪಶ್ಚಿಮ ಬಂಗಾಳದ ಬಾರ್ ಕೌನ್ಸಿಲ್ ಅಂಗೀಕರಿಸಿದ ನಿರ್ಣಯದಲ್ಲಿ, “ಪಶ್ಚಿಮ ಬಂಗಾಳ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ನ್ಯಾಯಾಲಯಗಳಲ್ಲಿ ಅಭ್ಯಾಸ ಮಾಡುವ ವಕೀಲರು ಜುಲೈ 1ರಂದು ‘ಕಪ್ಪು ದಿನ’ ಆಚರಿಸಲಿದ್ದಾರೆ. ಅಂದು ವಕೀಲರು ನ್ಯಾಯಾಂಗ ಕೆಲಸದಿಂದ ಹೊರಗುಳಿಯುತ್ತಾರೆ. ಎಲ್ಲ ವಕೀಲರ ಸಂಘಗಳು ತಮ್ಮ ತಮ್ಮ ಪ್ರದೇಶಗಳಲ್ಲಿ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಲಿವೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಅಸ್ತಿತ್ವದಲ್ಲಿರುವ ಕಾನೂನು ಸಂಹಿತೆಗಳನ್ನು ಬದಲಿಸಲು ಭಾರತೀಯ ನ್ಯಾಯ ಸಂಹಿತಾ ಮಸೂದೆ-2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮಸೂದೆ-2023 ಮತ್ತು ಭಾರತೀಯ ಸಾಕ್ಷಿ ಮಸೂದೆ-2023 ಅನ್ನು ಕಳೆದ ವರ್ಷ ಆಗಸ್ಟ್‌ನಲ್ಲಿ ನಡೆದ ಸಂಸತ್ ಅಧಿವೇಶನದಲ್ಲಿ ಮಂಡಿಸಿ, ಅಂಗೀಕರಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...