ಪಶ್ಚಿಮ ಬಂಗಾಳ ಕೋಮು ಗಲಭೆ: 6 ಮಂದಿಗೆ ಗಂಭೀರ ಗಾಯ 17 ಜನರ ಬಂಧನ

Date:

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಬೆಲ್ಲಂಗದಲ್ಲಿ ಭಾನುವಾರ ರಾತ್ರಿಯಿಡೀ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಧಾರ್ಮಿಕ ಸಮಾರಂಭವನ್ನು ಆಯೋಜಿಸಿದ್ದ ಸಮಿತಿಯ ಅಧ್ಯಕ್ಷ ಮತ್ತು ಕಾರ್ಯದರ್ಶಿ ಸೇರಿ 17 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ಸಮುದಾಯದ ಧಾರ್ಮಿಕ ಸಮಾರಂಭದಲ್ಲಿ ಆಪಾದಿತ ನಿಂದನೀಯ ಹೇಳಿಕೆಯನ್ನು ಪ್ರದರ್ಶಿಸಿದ್ದರಿಂದ ಮತ್ತೊಂದು ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟಾಗಿ ಘರ್ಷಣೆಗೆ ಕಾರಣ ಎನ್ನಲಾಗಿದೆ. ಘರ್ಷಣೆಯಲ್ಲಿ ಗಾಯಗೊಂಡಿರುವ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ಗುಂಪುಗಳ ಜನರ ನಡುವಿನ ಗಲಾಟೆ ನಂತರ ಕೆಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಹಲವಾರು ಮನೆಗಳನ್ನು ದೋಚಲಾಗಿದೆ. ಬೆಲ್ಲಂಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 163ರ ಅಡಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಹಿಂಸಾಚಾರ ಪ್ರದೇಶದಲ್ಲಿ ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕದಲ್ಲಿ ಟ್ರಂಪ್ ಆಡಳಿತ; ಜಾಗರೂಕವಾಗಿರಬೇಕಿದೆ ಭಾರತ!

ಗಲಭೆ ಬಗ್ಗೆ ಪಶ್ಚಿಮ ಬಂಗಾಳ ಪೊಲೀಸರು ‘ಎಕ್ಸ್ ‘ನಲ್ಲಿ ಪೋಸ್ಟ್ ಮಾಡಿ ಸ್ಪಷ್ಟನೆ ನೀಡಿದ್ದು, “ಹಿಂಸಾಚಾರ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದೆ. ಎಲ್ಲಡೆ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ. ಶಾಂತಿ ಕದಡಲು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ನಕಲಿ ಪೋಸ್ಟ್‌ಗಳನ್ನು ನಂಬಬೇಡಿ. ಕಾನೂನು ಉಲ್ಲಂಘಿಸುವವರ ವಿರುದ್ಧ ಮತ್ತು ವದಂತಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದ್ದಾರೆ.

ಎರಡು ಗುಂಪುಗಳ ನಡುವೆ ಘರ್ಷಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ಪರಸ್ಪರ ಟೀಕೆಗಳಲ್ಲಿ ಮುಳುಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...