ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಂಡ ಮಮತಾ ಬ್ಯಾನರ್ಜಿ

Date:

ಮನೆಯಲ್ಲಿ ಬಿದ್ದು ಹಣೆಗೆ ಗಾಯಮಾಡಿಕೊಂಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ರಾತ್ರಿ ಕೋಲ್ಕತ್ತದ ಎಸ್ಎಸ್‌ಕೆಎಂ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಮನೆಯಲ್ಲಿ ಆಕಸ್ಮಿಕವಾಗಿ ಆಗಿ ಬಿದ್ದು, ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಹಣೆಗೆ ಕೆಲವು ಹೊಲಿಗೆಗಳನ್ನು ಹಾಕಲಾಗಿದ್ದು, ವೈದ್ಯಕೀಯ ಪರೀಕ್ಷೆಯ ಬಳಿಕ ಅವರನ್ನು ಮನೆಗೆ ಕಳುಹಿಸಲಾಗಿದೆ’ಎಂದು ಸರ್ಕಾರಿ ಸ್ವಾಮ್ಯದ ಎಸ್ಎಸ್‌ಕೆಎಂ ಆಸ್ಪತ್ರೆಯ ನಿರ್ದೇಶಕ ಮಣಿಮೋಯ್ ಬಂದೋಪಾಧ್ಯಾಯ ಹೇಳಿದ್ದಾರೆ.

‘ಅವರು ಮನೆಯೊಳಗೆ ಬಿದ್ದಿದ್ದಾರೆ. ಅವರ ಹಣೆಯಿಂದ ರಕ್ತಸ್ರಾವವಾಗುತ್ತಿತ್ತು ಮತ್ತು ಹೊಲಿಗೆಗಳ ಅಗತ್ಯವಿತ್ತು. ಹಾಗಾಗಿ, ತಕ್ಷಣವೇ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು’ಎಂದು ಮಮತಾ ಸಹೋದರ ಕಾರ್ತಿಕ್ ಬ್ಯಾನರ್ಜಿ  ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿ ಮತ್ತು ಆರ್ಥಿಕತೆಯ ನಿಜನೋಟ

‘ಮಮತಾ ಅವರ ಹಣೆ ಮತ್ತು ಮೂಗಿನ ಮೇಲೆ ತೀಕ್ಷ್ಣವಾದ ಗಾಯಗಳಾಗಿದ್ದವು, ಅದರಿಂದ ತೀವ್ರವಾಗಿ ರಕ್ತಸ್ರಾವವಾಗಿತ್ತು. ಆರಂಭದಲ್ಲಿ, ನಮ್ಮ ಸಂಸ್ಥೆಯ ನರಶಸ್ತ್ರ ಚಿಕಿತ್ಸೆ, ಔಷಧ ಮತ್ತು ಹೃದ್ರೋಗ ವಿಭಾಗದ ಹಿರಿಯ ವೈ ದ್ಯರು ಅವರನ್ನು ಪರೀಕ್ಷೆಗೆ ಒಳಪಡಿಸಿದರು. ಬಳಿಕ, ಹಣೆಗೆಮೂರುಹೊಲಿಗೆಗಳನ್ನು ಹಾಕಲಾಯಿತು. ಅಗತ್ಯವಿದ್ದ ಡ್ರೆಸ್ಸಿಂಗ್‌ ಮಾಡಲಾಯಿತು. ಇಸಿಜಿ, ಎಕೋ ಕಾರ್ಡಿಯೋಗ್ರಾಮ್, ಸಿಟಿ ಸ್ಕ್ಯಾನ್ ಮತ್ತು ಡಾಪ್ಲರ್ನಂತಹ ಪರೀಕ್ಷೆಗಳನ್ನು ನಡೆಸಲಾಯಿತು. ನಿಗಾದಲ್ಲಿ ಇರಬೇಕಾಗಿರುವುದರಿಂದ ಆಸ್ಪತ್ರೆಯಲ್ಲಿ ಇರುವಂತೆ ಸೂಚಿಸಲಾಯಿತಾದರೂ ಮಮತಾ ಮನೆಗೆ ತೆರಳಿದ್ದಾರೆ” ಎಂದು ಬಂದೋಪಾಧ್ಯಾಯ ತಿಳಿಸಿದ್ದಾರೆ.

ಮಮತಾ ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ಇರಿಸಲಾಗುತ್ತದೆ. ನಾಳೆ ಮತ್ತೆ ಪರೀಕ್ಷೆ ನಡೆಸಿ ಚಿಕಿತ್ಸೆ ಕುರಿತು ನಿರ್ಧರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...