ಪಶ್ಚಿಮ ಬಂಗಾಳ | ನಿದ್ದೆ ಬರಿಸುವ ಇಂಜೆಕ್ಷನ್ ನೀಡಿ ಅತ್ಯಾಚಾರ; ವೈದ್ಯ ಬಂಧನ

Date:

ಮಹಿಳಾ ರೋಗಿಯೊಬ್ಬರಿಗೆ ನಿದ್ದೆ ಬರಿಸುವ ಇಂಜೆಕ್ಷನ್ ನೀಡಿ ವೈದ್ಯರೊಬ್ಬರು ಅತ್ಯಾಚಾರವೆಸಗಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಪೊಲೀಸರು ವೈದ್ಯನೊಬ್ಬನನ್ನು ಮಂಗಳವಾರ ಬಂಧಿಸಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಪತಿ ನೀಡಿದ ದೂರಿನ ಆಧಾರದಲ್ಲಿ ಬಂಧನವಾಗಿದೆ.

ದೂರಿನ ಪ್ರಕಾರ, ಮಹಿಳೆ ತನ್ನ ಪತಿ ಇಲ್ಲದ ಸಮಯದಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ವೈದ್ಯರನ್ನು ಭೇಟಿ ಮಾಡಿದ್ದಳು. ವೈದ್ಯರು ಈ ವೇಳೆ ಟ್ರ್ಯಾಂಕ್ವಿಲೈಸರ್ ನೀಡಿ, ಪ್ರಜ್ಞಾಹೀನಳಾಗುವಂತೆ ಮಾಡಿ ನಂತರ ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರಪ್ರದೇಶ: ದಲಿತ ಮಹಿಳೆಯ ಮೇಲೆ ಅತ್ಯಾಚಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ವೈದ್ಯ ಸಸಂತ್ರಸ್ತೆಯ ಚಿತ್ರಗಳನ್ನು ತೆಗೆದು ಬ್ಲ್ಯಾಕ್‌ಮೇಲ್ ಮಾಡಿದ್ದು ತಾನು ಹೇಳಿದಂತೆ ಕೇಳದಿದ್ದರೆ ಚಿತ್ರಗಳನ್ನು ಆನ್‌ಲೈನ್‌ನಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಸಂತ್ರಸ್ತೆಯ ಮೇಲೆ ಪದೇ ಪದೇ ದೌರ್ಜನ್ಯ ಎಸಗಿರುವ ವೈದ್ಯ ಸುಮಾರು ನಾಲ್ಕು ಲಕ್ಷ ರೂಪಾಯಿ ಸುಲಿಗೆ ಮಾಡಿದ್ದಾನೆ ಎಂದು ಸಂತ್ರಸ್ತೆ ದೂರಿದ್ದಾರೆ.

ಆರಂಭದಲ್ಲಿ ಆತಂಕಕ್ಕೆ ಒಳಗಾಗಿದ್ದ ಮತ್ತು ತನ್ನ ಪತಿ ಊರಿನಲ್ಲಿ ಇಲ್ಲದ ಕಾರಣ ಆತಂಖಕ್ಕೆ ಒಳಗಾಗಿದ್ದ ಮಹಿಳೆ ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ಆದರೆ ಪತಿ ಊರಿಗೆ ಹಿಂದಿರುಗಿದ ಬಳಿಕ ತನ್ನ ಪತಿಗೆ ಮಾಹಿತಿ ನೀಡಿ ಜೊತೆಯಾಗಿ ಬಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ವೈದ್ಯನ ಬಂಧನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವೈದ್ಯನನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಯನ್ನು ಐದು ದಿನ ಪೊಲೀಸ್ ವಶಕ್ಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...