ಪಶ್ಚಿಮ ಬಂಗಾಳ | ತಮ್ಮ ಪ್ರತಿಮೆಯನ್ನು ತಾವೇ ಅನಾವರಣ ಮಾಡಿದ ರಾಜ್ಯಪಾಲ

Date:

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರು ರಾಜಭವನದ ಎದುರು ತಮ್ಮದೇ ಪ್ರತಿಮೆಯನ್ನು ತಾವೇ ಅನಾವರಣಗೊಳಿಸಿದ್ದಾರೆ. ಆನಂದ ಬೋಸ್ ಅವರು ರಾಜ್ಯಪಾಲರಾಗಿ ಎರಡು ವರ್ಷ ಪೂರೈಸಿದ್ದಕ್ಕಾಗಿ ರಾಜಭವನದ ಆವರಣದಲ್ಲಿ ಚಿತ್ರಕಲಾ ಸ್ಪರ್ಧೆ ಮತ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಆ ಕಾರ್ಯಕ್ರಮದಲ್ಲಿ ತಮ್ಮದೇ ಪ್ರತಿಮೆಯನ್ನು ತಾವೇ ಅನಾವರಣಗೊಳಿಸಿದ್ದಾರೆ. ರಾಜ್ಯಾಪಾಲ ಆನಂದ ಬೋಸ್ ಅವರ ನಡೆಯನ್ನು ಆಡಳಿತರಾಢ ಟಿಎಂಸಿ ಮತ್ತು ಇತರ ರಾಜಕೀಯ ಪಕ್ಷಗಳು ‘ನಾಚಿಕೆಗೇಡು’ ಎಂದು ಕರೆದಿವೆ.

ರಾಜ್ಯಪಾಲರು ಅಧಿಕಾರದಲ್ಲಿರುವಾಗಲೇ ತಮ್ಮ ಪ್ರತಿಮೆಯನ್ನು ಅನಾವರಣಗೊಳಿಸಿದ ಬಗ್ಗೆ ವ್ಯಾಪಕ ಟೀಕೆ, ವ್ಯಂಗ್ಯ, ಟ್ರೋಲ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

“ನಮ್ಮ ರಾಜ್ಯಪಾಲರಾದ ಸಿ.ವಿ ಆನಂದ ಬೋಸ್ ಅವರು ತಮ್ಮದೇ ಆದ ಪ್ರತಿಮೆಯನ್ನು ಉದ್ಘಾಟಿಸಿದ್ದಾರೆ, ಇದು ಕೇಳಿರದ ಸಂಗತಿಯಾಗಿದೆ. ಅವರು ಯಾವುದೋ ಪ್ರಚಾರಕ್ಕಾಗಿ ಇದನ್ನು ಮಾಡಿದ್ದಾರೆ. ಆದರೆ ವಿಷಯವೆಂದರೆ, ಮುಂದಿನ ಹೆಜ್ಜೆ ಏನು? ಅವರು ತಮ್ಮದೇ ಪ್ರತಿಮೆಗೆ ಹಾರ ಹಾಕುತ್ತಾರೆಯೇ? ಇದು ಮೆಗಾಲೊಮೇನಿಯಾಕ್‌ನ ಸಂಕೇತ” ಎಂದು ಟಿಎಂಸಿ ವಕ್ತಾರ ಜಯಪ್ರಕಾಶ್ ಮಜುಂದಾರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಪಿಎಂ ಕೇಂದ್ರ ಸಮಿತಿ ಸದಸ್ಯ ಸುಜನ್ ಚಕ್ರವರ್ತಿ ಅವರು ರಾಜ್ಯಾಪಾಲರ ಕ್ರಮವನ್ನು ‘ನಾಚಿಕೆಗೇಡು’ ಎಂದು ಕರೆದಿದ್ದಾರೆ. ಕಾಂಗ್ರೆಸ್ ವಕ್ತಾರ ಸೌಮ್ಯಾ ಐಚ್ ರಾಯ್, “ಇದು ಅತ್ಯಂತ ನಾಚಿಕೆಗೇಡಿನ ಸಂಗತಿ. ಬಂಗಾಳದ ಸಂಸ್ಕೃತಿಯ ಮೇಲೆ ಸಣ್ಣತನದ ಆಟ ಆಡಲಾಗುತ್ತಿದೆ” ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ, ಕೋಲ್ಕತ್ತಾದ ಭಾರತೀಯ ವಸ್ತುಸಂಗ್ರಹಾಲಯದೊಂದಿಗೆ ಸಂಯೋಜಿತವಾಗಿರುವ ಕಲಾವಿದ ಪಾರ್ಥ ಸಹಾ ಅವರು ಈ ಪ್ರತಿಮೆಯನ್ನು ರಾಜ್ಯಪಾಲರಿಗೆ ಉಡುಗೊರೆಯಾಗಿ ನೀಡಿದ್ದಾರೆ. ಸಹಾ ಅವರು ರಾಜ್ಯಪಾಲರನ್ನು ಖುದ್ದಾಗಿ ಭೇಟಿಯಾಗದೆ ಅವರ ಭಾವಚಿತ್ರವನ್ನು ಆಧರಿಸಿ ಫೈಬರ್ ಪ್ರತಿಮೆಯನ್ನು ರಚಿಸಿದ್ದಾರೆ.

ಈ ಪ್ರತಿಮೆಯನ್ನು ಗವರ್ನರ್ ಬೋಸ್ ಅವರೇ ಸ್ಥಾಪಿಸಿಲ್ಲ. ಆದರೆ, ಇದು ಕಲಾವಿದರು ಮತ್ತು ಭಾರತೀಯ ವಸ್ತುಸಂಗ್ರಹಾಲಯದಿಂದ ಉಡುಗೊರೆಯಾಗಿದೆ ಎಂದು ರಾಜ್ಯಪಾಲರ ಕಚೇರಿ ಸ್ಪಷ್ಟಪಡಿಸಿದೆ. ಹೀಗಿದ್ದರೂ, ಈ ಘಟನೆ ರಾಜಕೀಯ ಚರ್ಚೆಗೆ ಗ್ರಾಸವಾಗಿದ್ದು, ಜೀವಂತ ವ್ಯಕ್ತಿಯ ಪ್ರತಿಮೆ ಸ್ಥಾಪಿಸುವ ಔಚಿತ್ಯವನ್ನು ಹಲವರು ಪ್ರಶ್ನಿಸಿದ್ದಾರೆ.

ಶನಿವಾರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ರಾಜ್ಯಪಾಲ ಬೋಸ್ ಅವರು ಬಂಗಾಳದ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು “ಅತ್ಯಂತ ಕೆಟ್ಟದು” ಎಂದು ಬಣ್ಣಿಸಿದರು.

“ಈ ಪರಿಸ್ಥಿತಿಯು ರಾಜಕಾರಣಿಗಳಿಗೆ ಮಾತ್ರ ಪರಿಣಾಮ ಬೀರುತ್ತದೆ. ಆದರೆ, ಬಂಗಾಳದ ಜನರು ಇದನ್ನು ಹೆಚ್ಚು ಕಾಲ ಸಹಿಸುವುದಿಲ್ಲ” ಎಂದ ಅವರು, ಬಂಗಾಳದ ರಾಜ್ಯಪಾಲರಾಗಿ ಎರಡು ವರ್ಷಗಳ ಅವಧಿಯನ್ನು “ಸಿಹಿ ಮತ್ತು ಹುಳಿ” ಎಂದು ಬಣ್ಣಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...