ಕ್ರಿಸ್ ರಾಕ್‌ಗೆ ಕಪಾಳಮೋಕ್ಷ ಮಾಡಿದ್ದ ವಿಲ್ ಸ್ಮಿತ್‌ಗೆ ಬೆಂಬಲ ನೀಡಿದ ಕಂಗನಾ, ಪೋಸ್ಟ್ ವೈರಲ್

Date:

ಕೆಲವು ದಿನಗಳ ಹಿಂದೆ ವಿಮಾನ ನಿಲ್ದಾಣದಲ್ಲಿ ತನಗೆ ಕಪಾಳಮೋಕ್ಷ ಮಾಡಿದ ಆರೋಪವನ್ನು ಸಿಐಎಸ್‌ಎಫ್ ಮಹಿಳಾ ಕಾನ್‌ಸ್ಟೆಬಲ್‌ಗೆ ಬೆಂಬಲ ನೀಡಿದ ಜನರನ್ನು ಕಂಗನಾ ರನೌತ್ ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ ಈ ಸಂದರ್ಭದಲ್ಲೇ ಕ್ರಿಸ್ ರಾಕ್‌ಗೆ ಕಪಾಳಮೋಕ್ಷ ಮಾಡಿದ್ದ ವಿಲ್ ಸ್ಮಿತ್‌ಗೆ ಕಂಗನಾ ಬೆಂಬಲ ನೀಡಿದ್ದ ಪೋಸ್ಟ್ ವೈರಲ್ ಆಗಿದೆ.

ಹಾಲಿವುಡ್ ನಟ ವಿಲ್ ಸ್ಮಿತ್ 2022ರ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಹಾಸ್ಯನಟ ಕ್ರಿಸ್ ರಾಕ್‌ಗೆ ಕಪಾಳಮೋಕ್ಷ ಮಾಡಿದ್ದರು. ತನ್ನ ಪತ್ನಿಯ ಬೋಳು ತಲೆಯ ಬಗ್ಗೆ ಅಪಹಾಸ್ಯ ಮಾಡಿದ ಕಾರಣಕ್ಕೆ ಕುಪಿತರಾದ ವಿಲ್ ಸ್ಮಿತ್ ಅವರು ಕ್ರಿಸ್ ರಾಕ್‌ ಕೆನ್ನೆಗೆ ಬಾರಿಸಿದ್ದರು.

ಇದನ್ನು ಓದಿದ್ದೀರಾ?  ಕಂಗನಾ ರನೌತ್‌ಗೆ ಕಪಾಳಮೋಕ್ಷಗೈದ CISF ಸಿಬ್ಬಂದಿಗೆ 1 ಲಕ್ಷ ಬಹುಮಾನ ಘೋಷಿಸಿದ ಉದ್ಯಮಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಮಿತ್ ಅವರ ಪತ್ನಿ ಜಡಾ ಪಿಂಕೆಟ್ ಅಲೋಪೆಸಿಯಾ ಎಂಬ ಕೂದಲು ಉದುರುವ ಕಾಯಿಲೆಯಿಂದ ಬಳಲುತ್ತಿದ್ದು ಆ ಸಮಯದಲ್ಲಿ ಅವರು ತಲೆ ಬೋಳಿಸಿಕೊಂಡಿದ್ದರು. ಇನ್ನು ವಿಲ್ ಸ್ಮಿತ್ ಬಳಿಕ ಕ್ರಿಸ್‌ ರಾಕ್‌ಗೆ ಕಪಾಲಮೋಕ್ಷ ಮಾಡಿದ್ದಕ್ಕೆ ಕ್ಷಮೆಯಾಚಿಸಿದ್ದರು.

ಆ ಘಟನೆ ನಡೆದ ಸಂದರ್ಭದಲ್ಲಿ ಕಂಗನಾ ರನೌತ್ ಅವರು ಇನ್‌ಸ್ಟಾಗ್ರಾಮ್ ಪೋಸ್ಟ್‌ ಮಾಡಿದ್ದು ವಿಲ್ ಸ್ಮಿತ್ ಪರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿದ್ದರು, ಕಪಾಳಮೋಕ್ಷ ಮಾಡಿದ್ದನ್ನು ಸಮರ್ಥಿಸಿಕೊಂಡಿದ್ದರು. ಈ ಪೋಸ್ಟ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡು ನೆಟ್ಟಿಗರು ಈಗ ಕಂಗನಾರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಇದನ್ನು ಓದಿದ್ದೀರಾ?  ಸಿಐಎಸ್ಎಫ್ ಸಿಬ್ಬಂದಿಯಿಂದ ಬಿಜೆಪಿಯ ನೂತನ ಸಂಸದೆ, ನಟಿ ಕಂಗನಾ ರನೌತ್‌ಗೆ ಕಪಾಳ ಮೋಕ್ಷ

“ಕಂಗನಾ ರನೌತ್ ಪ್ರಕಾರ ವಿಲ್ ಸ್ಮಿತ್ ತನ್ನ ಪತ್ನಿಯ ತಮಾಷೆ ಮಾಡಿದ್ದಕ್ಕಾಗಿ ಯಾರಿಗಾದರೂ ಹೊಡೆಯಬಹುದು. ಆದರೆ ಇನ್ನೊಬ್ಬ ಮಹಿಳೆ ತನ್ನ ತಾಯಿಯನ್ನು ‘100 ರೂಪಾಯಿಗೆ ಹೋಗುವವರು’ ಎಂದು ಕರೆದಿದ್ದಕ್ಕೆ ಮತ್ತು ತನ್ನ ರೈತ ತಂದೆಯ ಶಿರಚ್ಛೇದ ಮಾಡುವಂತೆ ಹೇಳಿದ್ದಕ್ಕೆ ಹೊಡೆಯಲು ಸಾಧ್ಯವಿಲ್ಲವೇ? ಬೂಟಾಟಿಕೆಗೂ ಮಿತಿಯಿದೆ” ಎಂದು ಎಕ್ಸ್‌ನಲ್ಲಿ ನೆಟ್ಟಿಗರೊಬ್ಬರು ಪೋಸ್ಟ್ ಮಾಡಿದ್ದಾರೆ.

ಸಿಐಎಸ್‌ಎಫ್ ಮಹಿಳಾ ಕಾನ್‌ಸ್ಟೆಬಲ್‌ ಬಿಜೆಪಿ ಸಂಸದೆ, ನಟಿ ಕಂಗನಾ ರನೌತ್‌ಗೆ ಕಪಾಳಮೋಕ್ಷ ಮಾಡಿರುವುದನ್ನು ಕೆಲವರು ಟೀಕಿಸಿದರೆ ಇನ್ನು ಕೆಲವರು ಸಮರ್ಥಿಸಿಕೊಂಡಿದ್ದಾರೆ. ಇನ್ನು ಕೆಲವರು ಸಿಐಎಸ್‌ಎಫ್ ಮಹಿಳಾ ಸಿಬ್ಬಂದಿ ಆಕ್ರೋಶ ಅರ್ಥವಾಗುತ್ತದೆ, ಆದರೆ ಹೊಡೆಯುವುದು ಸರಿಯಲ್ಲ ಎಂದಿದ್ದಾರೆ. ಸಿಐಎಸ್‌ಎಫ್ ಕಾನ್ಸ್‌ಟೇಬಲ್‌ನ ಕೃತ್ಯವನ್ನು ಬೆಂಬಲಿಸಿದ ಜನರ ವಿರುದ್ಧ ವಾಗ್ದಾಳಿ ನಡೆಸಿದ ಕಂಗನಾ ರನೌತ್‌ಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ಕಂಗನಾರ ಹಳೆಯ ಪೋಸ್ಟ್‌ನಲ್ಲಿ ರಿಟ್ವೀಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...