ನಿಮಗೆ 75 ವರ್ಷ ತುಂಬಿತು ಎಂದರೆ, ನೀವು ನಿವೃತ್ತರಾಗಬೇಕು ಎಂದರ್ಥ; ಪ್ರಧಾನಿ ಮೋದಿಗೆ ಆರ್‌ಎಸ್‌ಎಸ್‌ ಮುಖ್ಯಸ್ಥ ಪರೋಕ್ಷ ಸೂಚನೆ

Date:

ನಿಮಗೆ 75 ತುಂಬಿತು ಎಂದರೆ, ನೀವು ನಿವೃತ್ತರಾಗಬೇಕು ಎಂದರ್ಥ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ(ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಪ್ರಧಾನಿ ನರೇಂದ್ರ ಮೋದಿ ರಾಜಕೀಯದಿಂದ ನಿವೃತ್ತರಾಗಬೇಕೆಂದು ಪರೋಕ್ಷವಾಗಿ ಸೂಚಿಸಿದ್ದಾರೆ.

ನಾಗ್ಪುರದಲ್ಲಿ ಬುಧವಾರ ದಿವಂಗತ ಆರ್‌ಎಸ್‌ಎಸ್ ಸಿದ್ಧಾಂತವಾದಿ ಮೊರೊಪಂತ್ ಪಿಂಗಳೆ ಅವರ ದಿ ಆರ್ಕಿಟೆಕ್ಟ್ ಆಫ್ ಹಿಂದೂ ರಿಸರ್ಜೆನ್ಸ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಮೋಹನ್‌ ಭಾಗವತ್‌ ಅವರು, “ಪಿಂಗಳೆ ಒಮ್ಮೆ ಹೇಳಿದ್ದರು… 75 ವರ್ಷ ತುಂಬಿದ ನಂತರ ನಿಮಗೆ ಶಾಲು ಹೊದಿಸಿ ಸನ್ಮಾನಿಸಿದರೆ, ನೀವು ಈಗಲೇ ನಿಲ್ಲಿಸಬೇಕು ಎಂದರ್ಥ, ನೀವು ವಯಸ್ಸಾದವರು; ಪಕ್ಕಕ್ಕೆ ಸರಿದು ಇತರರು ಒಳಗೆ ಬರಲಿ” ಎಂದು ಹೇಳಿದರು.

75 ವರ್ಷಗಳ ನಂತರ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ಬೆನ್ನಲ್ಲೇ ಪ್ರಧಾನಿ ಮೋದಿ ಅವರ ನಿವೃತ್ತಿಗೆ ವಿಪಕ್ಷಗಳ ನಾಯಕರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದಾಖಲೆ ಬರೆದ ಶಕ್ತಿ ಯೋಜನೆ: ಆಡಿದ್ದನ್ನು ಮಾಡಿ ತೋರಿಸಿದ ಸರ್ಕಾರ

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಪ್ರಧಾನಿ ಮೋದಿಯನ್ನು ʼಕಳಪೆ ಪ್ರಶಸ್ತಿ ವಿಜೇತ ಪ್ರಧಾನಿʼ ಎಂದು ವ್ಯಂಗ್ಯವಾಡಿದರು. 2025ರ ಸೆಪ್ಟೆಂಬರ್ 17ರಂದು ಮೋದಿಗೆ 75 ವರ್ಷ ತುಂಬುವುದರಿಂದ ಆರ್‌ಎಸ್‌ಎಸ್‌ ಮುಖ್ಯಸ್ಥರು ಮನೆಗೆ ಮರಳುವಂತೆ ನೆನಪಿಸಿದ್ದಾರೆ. ಪ್ರಧಾನ ಮಂತ್ರಿಗಳು ಕೂಡ ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ 2025ರ ಸೆಪ್ಟೆಂಬರ್ 11ರಂದು ಅವರಿಗೂ 75 ವರ್ಷ ತುಂಬುತ್ತದೆ ಎಂದು ನೆನಪಿಸಬಹುದು ಎಂದು ಹೇಳಿದರು.

ಕಾಂಗ್ರೆಸ್ ನಾಯಕ ಪವನ್ ಖೇರಾ ಈ ಕುರಿತು ಪ್ರತಿಕ್ರಿಯಿಸಿ, ʼಪ್ರಧಾನಿ ಮೋದಿ ಮತ್ತು ಭಾಗವತ್ ಇಬ್ಬರೂ ತಮ್ಮ ಬ್ಯಾಗ್‌ಗಳನ್ನು ಎತ್ತಿಕೊಂಡು ಕಚೇರಿಯಿಂದ ಹೊರಹೋಗಬೇಕು. ಈಗ ನೀವಿಬ್ಬರೂ ಬ್ಯಾಗ್ ಎತ್ತಿಕೊಂಡು ಹೋಗಿ ಪರಸ್ಪರ ಮಾರ್ಗದರ್ಶಕರಾಗಿʼ ಎಂದು ಹೇಳಿದರು.

ʼ75 ವರ್ಷ ತುಂಬಿದ ನಂತರ ಬಿಜೆಪಿಯ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಲು ಬಳಸಲಾಗುತ್ತಿದ್ದ ನಿವೃತ್ತಿ ನಿಯಮವನ್ನು ಪ್ರಧಾನಿ ಮೋದಿ ತಮ್ಮ ಮೇಲೂ ಅನ್ವಯಿಸಿಕೊಳ್ಳುತ್ತಾರೆಯೇʼ ಎಂದು ಉದ್ಧವ್ ನೇತೃತ್ವದ ಶಿವಸೇನೆ ಸಂಸದ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ.

ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಮತ್ತು ಜಸ್ವಂತ್ ಸಿಂಗ್ ಅವರಂತಹ ನಾಯಕರಿಗೆ 75 ವರ್ಷ ತುಂಬಿದ ನಂತರ ನಿವೃತ್ತಿ ಹೊಂದುವಂತೆ ಪ್ರಧಾನಿ ಮೋದಿ ಒತ್ತಾಯಿಸಿದ್ದರು. ಅವರು ಈಗ ಅದೇ ನಿಯಮವನ್ನು ಸ್ವತಃ ಅನ್ವಯಿಸುತ್ತಾರೆಯೇ ಎಂದು ನೋಡೋಣ ಎಂದು ಸಂಜಯ್ ರಾವತ್ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...