ಕ್ರೈಸ್ತ ಧರ್ಮಕ್ಕೆ ಮತಾಂತರ ಆದವರಿಗೆ SC ಸ್ಥಾನಮಾನ ಸಿಗುವುದಿಲ್ಲ: ಆಂಧ್ರ ಹೈಕೋರ್ಟ್

Date:

ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯವರು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡರೆ, ಅವರಿಗೆ ಎಸ್‌ಸಿ ಸ್ಥಾನಮಾನ ದೊರೆಯುವುದಿಲ್ಲ. ಅವರು ಮಾತಾಂತರಗೊಂಡ ತಕ್ಷಣ ತಮ್ಮ SC ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ. ಮಾತ್ರವಲ್ಲ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ವ್ಯಾಪ್ತಿಯಿಂದಲೂ ಹೊರಗುಳಿಯುತ್ತಾರೆ. ಅವರಿಗೆ ಆ ಕಾಯ್ದೆಯಡಿ ರಕ್ಷಣೆ ನೀಡಲಾಗುವುದಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್‌ ಹೇಳಿದೆ.

ಗುಂಟೂರು ಜಿಲ್ಲೆಯ ಕೊತ್ತಪಾಲೆಂನಲ್ಲಿ ದಲಿತ ಸಮುದಾಯದ ಚಿಂತದ ಆನಂದ್ ಎಂಬವರು ದಶಕಗಳ ಹಿಂದೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಚರ್ಚ್‌ನ ಪಾದ್ರಿಯೂ ಆಗಿದ್ದರು. ಆದಾಗ್ಯೂ, ತಮ್ಮನ್ನು ಮೂಲತಃ ದಲಿತನೆಂದು ಪ್ರಬಲ ಜಾತಿಗೆ ಸೇರಿದವರು ಜಾತಿ ಆಧಾರದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ, ಆರೋಪಿ ಅಕ್ಕಲಾ ರಾಮಿರೆಡ್ಡಿ ಮತ್ತಿತರರ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ 2021ರ ಜನವರಿಯಲ್ಲಿ ದೂರು ದಾಖಲಿಸಿದ್ದರು.

ಅವರು ದಾಖಲಿಸಿರುವ ದೂರನ್ನು ವಜಾಗೊಳಿಸುವಂತೆ ಕೋರಿ ಆರೋಪಿ ಅಕ್ಕಲಾ ರಾಮಿರೆಡ್ಡಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಹೈಕೋರ್ಟ್‌ ನ್ಯಾಯಮೂರ್ತಿ ಎನ್ ಹರಿನಾಥ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆ ವೇಳೆ ಆರೋಪಿ ಅರ್ಜಿದಾರರ ಪರವಾಗಿ ವಾದ ಮಂಡಿಸಿದಿದ ವಕೀಲರು, “ಆನಂದ್ ಅವರು ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿ ಹತ್ತು ವರ್ಷಗಳ ಕಾಲ ಪಾದ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.ಅವರು ಸಂವಿಧಾನದ ಪರಿಶೀಷ್ಟ ಜಾತಿಗಳು ಕಾಯ್ದೆಯ ಅಡಿಯಲ್ಲಿ ಎಸ್‌ಸಿ ಸದಸ್ಯರೆಂದು ಪರಿಗಣಿಸಲು ಸಾಧ್ಯವಿಲ್ಲ” ಎಂದು ಪ್ರತಿಪಾದಿಸಿದ್ದಾರೆ.

ಅವರ ವಾದಕ್ಕೆ ಪ್ರತಿವಾದ ಮಂಡಿಸಿದ ಪಾದ್ರಿ ಆನಂದ್ ಪರ ವಕೀಲರು, “ಆನಂದ್ ಅವರು ಎಸ್‌ಸಿ ಹಿಂದು ಜಾತಿ ಪ್ರಮಾಣಪತ್ರವನ್ನು ಹೊಂದಿದ್ದಾರೆ. ಹೀಗಾಗಿ, ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅವರು ರಕ್ಷಣೆಗೆ ಅರ್ಹರಾಗಿದ್ದಾರೆ” ಎಂದಿದ್ದಾರೆ.

ಈ ವರದಿ ಓದಿದ್ದೀರಾ?: ಜಾತಿ ಗಣತಿ ವರದಿ ವಿರೋಧಿಸುತ್ತಿರುವ ಶಾಮನೂರು ಹುನ್ನಾರವೇನು? ಕಾಂಗ್ರೆಸ್‌ನಲ್ಲಿ ಕ್ರಮ ಯಾಕಿಲ್ಲ?

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು, “ಕ್ರೈಸ್ತ ಧರ್ಮದಲ್ಲಿ ಜಾತಿ ಆಧಾರಿತ ಭೇದಗಳು ಇರವುದಿಲ್ಲ. ಅವರು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವ ಕಾರಣ ಅವರು ಯಾವುದೇ ಜಾತಿ ಪ್ರಮಾಣವನ್ನು ಹೊಂದಿದ್ದರೂ ಅವರ SC ಸ್ಥಾನಮಾನ ರದ್ದಾಗುತ್ತದೆ. ಎಸ್‌ಸಿ, ಎಸ್‌ಟಿ ಸಮುದಾಯಗಳನ್ನು ತಾರತಮ್ಯ ಮತ್ತು ದೌರ್ಜನ್ಯಗಳಿಂದ ರಕ್ಷಿಸಲು ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಆದರೆ, ಅದರ ನಿಬಂಧನೆಗಳು ಇತರ ಧರ್ಮಗಳಿಗೆ ಮತಾಂತರ ಆಗಿರುವವರಿಗೆ ಅನ್ವಯವಾಗುವುದಿಲ್ಲ” ಎಂದು ಹೇಳಿದೆ.

ಪಾದ್ರಿ ಆನಂದ್ ಅವರು ಸುಳ್ಳು ದೂರು ದಾಖಲಿಸುವ ಮೂಲಕ ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದಿರುವ ನ್ಯಾಯಾಲಯವು ಆರೋಪಿಗಳ ವಿರುದ್ದದ ಪ್ರಕರಣವನ್ನು ರದ್ದುಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...