ಅತೀಕ್ ಅಹ್ಮದ್‌ ಮಾಧ್ಯಮಗಳ ಮುಂದೆ ಬಂದಿದ್ದೇಕೆ; ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ

Date:

  • ಯೋಗಿ ಸರ್ಕಾರಕ್ಕೆ ಅತೀಕ್ ಅಹ್ಮದ್‌ ಪ್ರಕರಣದಲ್ಲಿ ಸುಪ್ರೀಂ ಪ್ರಶ್ನೆ
  • ಮೂರು ವಾರದಲ್ಲಿ ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸಲು ಸೂಚನೆ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಗ್ಯಾಂಗ್‌ಸ್ಟಾರ್-ರಾಜಕಾರಣಿ ಅತೀಕ್ ಅಹ್ಮದ್‌ ಮತ್ತು ಆತನ ಸಹೋದರ ಅಶ್ರಫ್ ಹತ್ಯೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌, ಶುಕ್ರವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಕೆಲ ಗಂಭೀರ ಪ್ರಶ್ನೆಗಳನ್ನು ಕೇಳಿದೆ.

ಅತೀಕ್ ಮತ್ತು ಆತನ ಸಹೋದರ ಅಶ್ರಫ್ ಅವರಿದ್ದ ವಾಹನ, ನೇರವಾಗಿ ಆಸ್ಪತ್ರೆಯೊಳಗೆ ತೆರಳಿಲ್ಲ ಯಾಕೆ? ಇಬ್ಬರನ್ನೂ ರಸ್ತೆಯಲ್ಲಿ ಕರೆದೊಯ್ದು ಮಾಧ್ಯಮಗಳ ಮುಂದೆ ನಿಲ್ಲಿಸಿದ್ದೇಕೆ? ಇವರಿಬ್ಬರನ್ನು ವೈದ್ಯಕೀಯ ಪರೀಕ್ಷೆಗೆ ಕರೆತರುವ ವಿಚಾರ ಹಂತಕರಿಗೆ ತಿಳಿದಿದ್ದೇಗೆ? ಎಂಬಿತ್ಯಾದಿ ಪ್ರಶ್ನೆಗಳನ್ನು ಸುಪ್ರೀಂಕೋರ್ಟ್‌ ಯೋಗಿ ಆದಿತ್ಯನಾಥ್‌ ಸರ್ಕಾರದ ಮುಂದಿಟ್ಟಿದೆ.

ಅತೀಕ್ ಮತ್ತು ಅಶ್ರಫ್ ಹತ್ಯೆ ಕುರಿತ ಸ್ವತಂತ್ರ ತನಿಖೆಗೆ ಕೋರಿ ವಕೀಲ ವಿಶಾಲ್ ತಿವಾರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್ ರವೀಂದ್ರ ಭಟ್ ಮತ್ತು ದೀಪಂಕರ್ ದತ್ತ ಅವರಿದ್ದ ಪೀಠ, 3 ವಾರದಲ್ಲಿ ಹತ್ಯೆಯ ಕುರಿತು ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸಲು ಯುಪಿ ಸರ್ಕಾರಕ್ಕೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

ಇದರ ಜೊತೆಗೆ ಏಪ್ರಿಲ್ 13ರಂದು ಝಾನ್ಸಿಯಲ್ಲಿ ಯುಪಿ ಪೊಲೀಸರಿಂದ ʻಎನ್‌ಕೌಂಟರ್‌ʼ ಆಗಿದ್ದ ಅತೀಕ್ ಅಹ್ಮದ್‌ ಪುತ್ರ ಅಸದ್ ಅಹ್ಮದ್‌ ಪ್ರಕರಣದ ತನಿಖಾ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.  

ಏಪ್ರಿಲ್ 15ರಂದು ರಾತ್ರಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ವೈದ್ಯಕೀಯ ತಪಾಸಣೆಗೆಂದು ಕರೆದೊಯ್ಯುತ್ತಿದ್ದ ವೇಳೆ ಪೊಲೀಸರ ಸಮ್ಮುಖದಲ್ಲೇ ಪತ್ರಕರ್ತರ ಸೋಗಿನಲ್ಲಿ ಬಂದ ಮೂವರು, ಗ್ಯಾಂಗ್‌ಸ್ಟಾರ್-ರಾಜಕಾರಣಿ ಅತೀಕ್ ಮತ್ತು ಆತನ ಸಹೋದರ ಅಶ್ರಫ್‌ ಮೇಲೆ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...